ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಆಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಸಂಚಾಲಕ ಎಂ.ಬಿ. ನಾಗಣ್ಣ ಗೌಡ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಮೇ 22ರಂದು ರಾಜ್ಯ ಕಾರ್ಮಿಕ ಇಲಾಖೆ ಪರಿಷ್ಕೃತ ಕನಿಷ್ಠ ವೇತನದ ಆದೇಶ ಹೊರಡಿಸಿತ್ತು. ಆದರೆ ಇಲ್ಲಿಯವರೆಗೂ ಅದನ್ನು ಜಾರಿಗೆ ತರಲಾಗಿಲ್ಲ. ಹತ್ತು ವರ್ಷಗಳಿಂದ ವೇತನ ಹೆಚ್ಚಳವಾಗದೆ ನೌಕರರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ರಾಜ್ಯಮಟ್ಟದ ಆಗ್ರಹ ಸಮಾವೇಶ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 1.5ಲಕ್ಷ ಹೊರಗುತ್ತಿಗೆ ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ 17,400 ವೇತನ ಮಾತ್ರ ಬರುತ್ತಿದೆ. ಪರಿಸ್ಕøತ ವೇತನ ಜಾರಿಗೆ ಬಂದರೆ 28,500 ರೂ. ಆಗುತ್ತದೆ. ಆದ್ದರಿಂದ ಸರ್ಕಾರ ಮೀನಾಮೇಷ ಎಣಿಸದೆ ತಕ್ಷಣವೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
Also read>> ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ಸಂಘದ ಗೌರವ ಅಧ್ಯಕ್ಷ ವೀರೇಶ್ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದಲೇ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಕನಿಷ್ಠವೇತನ ಜಾರಿಗೆ ವ್ಯತಿರಿಕ್ತ ಆದೇಶ ಹೊರಬಿದ್ದಲ್ಲಿ ಅದರ ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ. ಕನಿಷ್ಠವೇತನ ಜಾರಿಗೊಳಿಸಲು ಕಾನೂನಿನ ಯಾವುದೇ ಅಡ್ಡಿಯಿಲ್ಲ. ಆದರೂ ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದಂತೆ ಕಾಣುತ್ತಿದೆ ಎಂದ ಅವರು, ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಇಲಾಖೆಗಳಿಂದ ಸಾವಿರಾರು ಹೊರಗುತ್ತಿಗೆ ನೌಕರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಚಿನ್ನರಾಜು, ವೆಂಕಟಲಕ್ಷ್ಮಿ, ಎಂ.ಎನ್.ಚಂದ್ರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










