ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೃಹಜ್ಯೋತಿ ಮರುಪರಿಷ್ಕರಣೆ ಸಂಬಂಧಿಸಿದಂತೆ ಸಿಬ್ಬಂದಿ ವರ್ಗದವರ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾವೇದಿಕೆ ಸಿಂಹಸೇನೆ ವತಿಯಿಂದ ಮೆಸ್ಕಾಂ ಮುಖ್ಯ ಇಂಜಿನೀಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಗೃಹಜ್ಯೋತಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಸಿಬ್ಬಂದಿವರ್ಗದವರಿಗೆ ಪ್ರತಿನಿತ್ಯದ ಕೆಲಸದೊಂದಿಗೆ ಈ ಕೆಲಸವನ್ನೂ ಕೂಡ ಮಾಡುವುದರಿಂದ ಒತ್ತಡ ಹೆಚ್ಚಾಗುತ್ತಿದೆ. ಕಾಲಮಿತಿ ಇರುವುದರಿಂದ ಮೇಲಾಧಿಕಾರಿಗಳು ಸಿಬ್ಬಂದಿಗಳಿಗೆ ಒತ್ತಡ ಹೇರುತ್ತಿದ್ದಾರೆ. ಇದನ್ನು ಕೈಬಿಡಬೇಕು ಈ ಪ್ರಕ್ರಿಯೆಯಿಂದ ನೌಕರರಿಗೆ ಏನಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ಇಲಾಖೆಯೇ ನೇರ ಹೊಣೆಯಾಗುತ್ತದೆ.
ರಾಜ್ಯಾದ್ಯಂತ ಎಸ್‍ಐಆರ್ ಪ್ರಕ್ರಿಯೆ ಕಾರ್ಯ ನಡೆಯುತ್ತಿದ್ದು, ಸರ್ಕಾರದ ಒತ್ತಡದಿಂದ ಕೆಲವು ಸಿಬ್ಬಂದಿಗಳು ಸಾವನ್ನು ಕಂಡಿದ್ದು ಇಂತಹ ಅನಾಹುತ ವಿದ್ಯುತ್ ಇಲಾಖೆಯಲ್ಲೂ ಸಂಭವಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮರು ಪರಿಷ್ಕರಣೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ.
Also read>> ಇಎಸ್‍ಐ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ತಕ್ಷಣವೇ ಚಿಕಿತ್ಸೆ ಆರಂಭಿಸಿ
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಎಂ.ರವಿಪ್ರಸಾದ್, ಜಿಲ್ಲಾಧ್ಯಕ್ಷ ಮಧುಸೂದನ್, ಅಭಿಜಿತ್ ನವುಲೆ, ನೂರುಲ್ಲಾ, ಭರತ್ ಎಸ್., ಲಿಂಗಣ್ಣ, ನಯಾಜ್, ರಫೀಕ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











