No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

Gokarna | ಶಂಕರರು ಸೈನ್ಯ, ಸಂಪತ್ತುಗಳಿಲ್ಲದೇ ಧರ್ಮ ಸಂರಕ್ಷಿಸಿದರು | ರಾಮಚಂದ್ರಾಪುರ ಶ್ರೀ

ವ್ಯಾಸಪೂಜೆಯೊಂದಿಗೆ ಗೋಕರ್ಣ ಮಂಡಲಾಚಾರ್ಯರ 33ನೇ ವರ್ಷದ ಚಾತುರ್ಮಾಸ್ಯ ವ್ರತದೀಕ್ಷೆಗೆ ಚಾಲನೆ

kalpa News by kalpa News
July 30, 2026
in ಉತ್ತರ ಕನ್ನಡ
0
Ramachandrapura Seer Begins 33rd Chaturmasya in Gokarna
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಿಸುವುದು ಗುರುವಿನ ಪರಮ ಕರ್ತವ್ಯವಾಗಿದ್ದು, ಸರಿಯಾದ ವಿಚಾರವನ್ನು ತಿಳಿದುಕೊಂಡು ಅದನ್ನು ಸಮಾಜಕ್ಕೆ ತಲುಪಿಸುವವನೇ ನಿಜವಾದ ಗುರು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದ (Gokarna) ಅಶೋಕೆಯಲ್ಲಿ ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಆವರಣದಲ್ಲಿ ಆರಂಭಗೊಂಡಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಆದಿ ಶಂಕರಾಚಾರ್ಯರು ಯಾವುದೇ ಸೈನ್ಯ ಅಥವಾ ಅಪಾರ ಸಂಪತ್ತಿನ ಬೆಂಬಲವಿಲ್ಲದೆ ದೇಶಾದ್ಯಂತ ಸಂಚರಿಸಿ ಧರ್ಮ ಸಂರಕ್ಷಣೆಯ ಮಹತ್ವದ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಿದರು ಎಂದು ಸ್ಮರಿಸಿದರು.

  • ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಮಚಂದ್ರಾಪುರ ಶ್ರೀ
  • ವ್ಯಾಸಪೂಜೆಯ ಮೂಲಕ ಗೋಕರ್ಣ ಮಂಡಲಾಚಾರ್ಯರ 33ನೇ ವರ್ಷದ ಚಾತುರ್ಮಾಸ್ಯ ವ್ರತದೀಕ್ಷೆ
  • ಶಂಕರರು ಸೈನ್ಯ -ಸಂಪತ್ತುಗಳಿಲ್ಲದೇ ಧರ್ಮಸಂರಕ್ಷಿಸಿದರು
  • ಸರಿ ವಿಚಾರ ತಿಳಿಸುವವರಿಗೆ ಶತೃಗಳು ಸಹಜ
    
  • ಶಂಕರರು ಜನರಿಗೆ ಸರಿಯಾದ ದಾರಿಯನ್ನು ತೋರಿದರು 
  • ಶಂಕರರು ತೋರಿದ ದಾರಿಯಲ್ಲಿ ಧರ್ಮ ಪ್ರಸಾರವನ್ನು ಮಾಡುತ್ತಾ, ಸಮಾಜಕ್ಕೆ ಸರಿ - ತಪ್ಪುಗಳನ್ನು ಮಾರ್ಗದರ್ಶನ ಮಾಡುವುದು ಮಠದ ಕಾರ್ಯವಾಗಬೇಕು
  • ಗುರು ಶಿಷ್ಯರ ಅನ್ನೋನ್ಯ ಸಂಬಧದ ಪ್ರತೀಕವಾದ ಚಾತುರ್ಮಾಸ್ಯ ವ್ರತಸಂಕಲ್ಪ 
  • ಸರಿದಾರಿಯಲ್ಲಿ ನಡೆಯುವವರಿಗೆ ಶತೃಗಳು ಹುಟ್ಟಿಕೊಳ್ಳುವುದು ಪ್ರಕೃತಿ ಸಹಜ
  • ಈ ವರ್ಷ ತಿನ್ನುವ ಆಹಾರಕ್ಕೆ ಸಂಬಂಧಿಸಿದ 'ಅನ್ನಬ್ರಹ್ಮ ಚಾತುರ್ಮಾಸ್ಯ' 

ಅವರು ದೇಶದ ವಿವಿಧ ಭಾಗಗಳಲ್ಲಿ ಮಠಗಳನ್ನು ಸ್ಥಾಪಿಸುವ ಮೂಲಕ ಧರ್ಮಪ್ರಚಾರದ ಕಾರ್ಯ ನಿರಂತರವಾಗಿ ನಡೆಯುವ ವ್ಯವಸ್ಥೆ ರೂಪಿಸಿದರು. ಆದ್ದರಿಂದ ಶಂಕರಾಚಾರ್ಯರ ಉದ್ದೇಶವೇ ಮಠದ ಉದ್ದೇಶವಾಗಬೇಕು. ಸಮಾಜದಲ್ಲಿ ಸರಿ-ತಪ್ಪುಗಳ ಕುರಿತು ಜನರಿಗೆ ಮಾರ್ಗದರ್ಶನ ನೀಡುವುದು ಹಾಗೂ ಧರ್ಮದ ಮೌಲ್ಯಗಳನ್ನು ಬಿತ್ತರಿಸುವುದು ಪ್ರತಿಯೊಂದು ಮಠದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶ್ರೀಗಳು ಹೇಳಿದರು.Kumadvathi College Shikariura

ಸಮಾಜಕ್ಕೆ ಸತ್ಯ ಹೇಳುವವರಿಗೆ ವಿರೋಧಿಗಳು ಸಹಜ

ಸಮಾಜದಲ್ಲಿ ಸರಿಯಾದ ವಿಚಾರವನ್ನು ತಿಳಿಸುವವರಿಗೆ ಶತ್ರುಗಳು ಹುಟ್ಟಿಕೊಳ್ಳುವುದು ಪ್ರಕೃತಿ ಸಹಜ. ಸತ್ಯದ ಪರವಾಗಿ ನಿಲ್ಲುವವರು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಮ, ಕೃಷ್ಣ ಸೇರಿದಂತೆ ಎಲ್ಲಾ ಮಹಾತ್ಮರ ಜೀವನದಲ್ಲಿಯೂ ಇದೇ ಸತ್ಯವನ್ನು ಕಾಣಬಹುದು ಎಂದು ಶ್ರೀಗಳು ಅಭಿಪ್ರಾಯಪಟ್ಟರು.

Also Read>> ಮುಖ್ಯಮಂತ್ರಿ PA ಎಂದು ನಂಬಿಸಿ 15 ಲಕ್ಷ ರೂ. ವಂಚನೆ | ಆರೋಪಿ ಅಂದರ್ 

Gokarna | ‘ಸ್ವಭಾಷಾ ಚಾತುರ್ಮಾಸ್ಯ’ದಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದವರೆಗೆ

ಕಳೆದ ವರ್ಷ ಭಾಷೆಯ ಮಹತ್ವ ಸಾರುವ ಉದ್ದೇಶದಿಂದ ‘ಸ್ವಭಾಷಾ ಚಾತುರ್ಮಾಸ್ಯ’ ಆಚರಿಸಲಾಗಿತ್ತು. ಈ ವರ್ಷ ಆಹಾರದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ಆಚರಿಸಲಾಗುತ್ತಿದೆ. ಎರಡೂ ಚಾತುರ್ಮಾಸ್ಯಗಳೂ ನಾಲಿಗೆಯೊಂದಿಗೆ ಸಂಬಂಧ ಹೊಂದಿದ್ದು, ಮಾತು ಮತ್ತು ಆಹಾರ ಎರಡರಲ್ಲಿಯೂ ಉಂಟಾಗಿರುವ ತಪ್ಪುಗಳನ್ನು ಸರಿಪಡಿಸುವ ಪ್ರಯತ್ನವೇ ಈ ಚಾತುರ್ಮಾಸ್ಯದ ಉದ್ದೇಶವಾಗಿದೆ ಎಂದು ತಿಳಿಸಿದರು.

ಶಂಕರಾಚಾರ್ಯರು ಸೈನ್ಯ ಹಾಗೂ ಸಂಪತ್ತು ಯಾವುದೂ ಇಲ್ಲದೇ ದೇಶದಲ್ಲಿ ಧರ್ಮಸಂರಕ್ಷಣೆಯ ಕಾರ್ಯವನ್ನು ಮಾಡಿದರು. ದೇಶಾದ್ಯಂತ ಸಂಚರಿಸಿದ ಶಂಕರರು ಜನರಿಗೆ ಸರಿಯಾದ ದಾರಿಯನ್ನು ತೋರಿದರು ಹಾಗೂ ನಿತ್ಯನಿರಂತರವಾಗಿ ಆ ಕಾರ್ಯ ನಡೆಯುವಂತೆ ಮಾಡಲು ದೇಶಾದ್ಯಂತ ಮಠಗಳನ್ನು ಸ್ಥಾಪಿಸಿದರು. ಹಾಗಾಗಿ ಶಂಕರಾಚಾರ್ಯರ ಉದ್ದೇಶವೇ ಮಠದ ಉದ್ದೇಶವಾಗಿರಬೇಕು. ಶಂಕರರು ತೋರಿದ ದಾರಿಯಲ್ಲಿ ಧರ್ಮ ಪ್ರಸಾರವನ್ನು ಮಾಡುತ್ತಾ, ಸಮಾಜಕ್ಕೆ ಸರಿ – ತಪ್ಪುಗಳನ್ನು ಮಾರ್ಗದರ್ಶನ ಮಾಡುವುದು ಮಠದ ಕಾರ್ಯವಾಗಬೇಕು.
-ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ

ಇಂದಿನ ಸಮಾಜದಲ್ಲಿ ಗೌಣ ವಿಷಯಗಳು ಮುಖ್ಯವಾಗುತ್ತಿದ್ದು, ಮುಖ್ಯವಾದ ವಿಚಾರಗಳು ಕಡೆಗಣನೆಯಾಗುತ್ತಿರುವುದು ವಿಷಾದನೀಯ ಸಂಗತಿ ಎಂದು ಶ್ರೀಗಳು ಹೇಳಿದರು.“ನಾವು ಏನನ್ನು ತಿನ್ನುತ್ತಿದ್ದೇವೆ? ಹೇಗೆ ತಿನ್ನುತ್ತಿದ್ದೇವೆ? ಆಹಾರವನ್ನು ಯಾವ ರೀತಿಯಲ್ಲಿ ತಯಾರಿಸಲಾಗಿದೆ?” ಎಂಬ ಮೂಲಭೂತ ಪ್ರಶ್ನೆಗಳ ಕುರಿತು ಯೋಚಿಸದೆ ಕೇವಲ ಹೊಟ್ಟೆ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಆಹಾರದ ಕುರಿತಾದ ಸಮಗ್ರ ಜ್ಞಾನವನ್ನು ಶಿಕ್ಷಣ ಸಂಸ್ಥೆಗಳೂ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ನಾವು ಏನನ್ನು ತಿನ್ನುತ್ತೇವೆಯೋ ಅದೇ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆದ್ದರಿಂದ ಆಹಾರದ ಕುರಿತು ಸರಿಯಾದ ಮಾಹಿತಿ ಹಾಗೂ ಅರಿವು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಿದೆ” ಎಂದು ಶ್ರೀಗಳು ಹೇಳಿದರು.

ವ್ಯಾಸಪೂಜೆಯೊಂದಿಗೆ 33ನೇ ಚಾತುರ್ಮಾಸ್ಯ ವ್ರತದೀಕ್ಷೆಗೆ ಚಾಲನೆ

ಇದಕ್ಕೂ ಮುನ್ನ ಬೆಳಿಗ್ಗೆ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಮ್ಮ 33ನೇ ವರ್ಷದ ಚಾತುರ್ಮಾಸ್ಯ ವ್ರತದೀಕ್ಷೆಯನ್ನು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಿಸಿದರು.

Also Read>> ಗೃಹಜ್ಯೋತಿ ಮರು ಪರಿಷ್ಕರಣೆಗೆ ಹೆಚ್ಚಿನ ಕಾಲಾವಕಾಶ ನೀಡಿ: ಕರವೇ ಸಿಂಹಸೇನೆ ಮನವಿ

ಶ್ರೀರಾಮಾದಿ ದೇವರ ಪೂಜೆ ನೆರವೇರಿಸಿ, ನಿಂಬೆಹಣ್ಣಿನಲ್ಲಿ ಕೃಷ್ಣಾದಿ ದೇವತೆಗಳು ಹಾಗೂ ವ್ಯಾಸಾದಿ ಋಷಿಗಳನ್ನು ಆವಾಹನೆ ಮಾಡಿ, ಮಠೀಯ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವ್ಯಾಸಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಮುಗಳಿ ತಿರುಮಲೇಶ್ವರ ಭಟ್ ಸರ್ವಸೇವೆ ಸಮರ್ಪಿಸಿದರೆ, ಮಂಜುನಾಥ ಸುವರ್ಣಗದ್ದೆ ದಂಪತಿ ಸಭಾಪೂಜೆ ಸಲ್ಲಿಸಿದರು. ಮಾತೃ ವಿಭಾಗದ ದೇವಿಕಾ ಶಾಸ್ತ್ರಿ ಕಾರ್ಯಕ್ರಮದ ಪ್ರಸ್ತಾವನೆ ಮಾಡಿದರು. ಜಿ.ಎಸ್. ಹೆಗಡೆ ದಂಪತಿ ದಿನದ ಪ್ರಧಾನ ಸೇವೆಯನ್ನು ವಹಿಸಿಕೊಂಡರು.

ಇಂದು ಗೌಣವಾದ ವಿಚಾರಗಳು ಮುಖ್ಯವಾಗುತ್ತಿದೆ. ಮುಖ್ಯ ವಿಚಾರಗಳು ಗೌಣವಾಗುತ್ತಿದೆ. ಇದು ಈ ಕಾಲದ ದುರಂತ ಎಂದ ಶ್ರೀಗಳು, ಇಂದು ನಾವು ಏನನ್ನು ತಿನ್ನುತ್ತಿದ್ದೇವೆ? ಹೇಗೆ ತಿನ್ನುತ್ತಿದ್ದೇವೇ? ಆಹಾರವನ್ನು ಹೇಗೆ ತಯಾರಿಸಲಾಗಿದೆ? ಎಂಬ ಕುರಿತು ಆಲೋಚಿಸದೇ ಕೇವಲ ತುತ್ತಿನ ಚೀಲವನ್ನು ತುಂಬಿಸುವ ಕಾರ್ಯ ಮಾಡುತ್ತಿದ್ದೇವೆ. ಇಂದು ಆಹಾರದ ಕುರಿತಾಗಿ ಸಮರ್ಪಕವಾದ ಮಾಹಿತಿಯನ್ನು ಶಾಲೆಯಲ್ಲಗಲಿ, ವಿಶ್ವವಿದ್ಯಾಲಯಗಳಾಗಲಿ ತಿಳಿಸಿಕೊಡುತ್ತಿಲ್ಲ. ನಾವು ಏನನ್ನು ತಿನ್ನುತ್ತೇವೋ ಅದೇ ನಾವಾಗುತ್ತೇವೆ. ಹಾಗಾಗಿ ನಾವೇ ಆಹಾರದ ಕುರಿತಾದ ಸರಿ ತಪ್ಪುಗಳನ್ನು ಸಮಾಜಕ್ಕೆ ತಿಳಿಸಲು ಮುಂದಾಗಿದ್ದೇವೆ.
-ರಾಘವೇಶ್ವರ ಭಾರತೀ ಶ್ರೀ 

ಗುರು-ಶಿಷ್ಯರ ಅನನ್ಯ ಬಾಂಧವ್ಯದ ಸಂಕೇತವಾದ ಚಾತುರ್ಮಾಸ್ಯ ವ್ರತಸಂಕಲ್ಪ

ವ್ಯಾಸಪೂಜೆಯ ಬಳಿಕ ಮಠೀಯ ಸಂಪ್ರದಾಯದಂತೆ ಗರುಡಾಸನದಲ್ಲಿ ಆಸೀನರಾದ ಶ್ರೀಗಳು ಚಾತುರ್ಮಾಸ್ಯ ವ್ರತಸಂಕಲ್ಪ ಕೈಗೊಂಡರು.

“ವರ್ಷಾಕಾಲದ ನಾಲ್ಕು ಪಕ್ಷಗಳ ಕಾಲ ನಡೆಯುವ ಈ ಚಾತುರ್ಮಾಸ್ಯ ವ್ರತವನ್ನು ಸಕಲ ಜೀವಿಗಳಿಗೂ ಯಾವುದೇ ತೊಂದರೆ ಆಗದ ರೀತಿಯಲ್ಲಿ ಇಲ್ಲಿಯೇ ಆಚರಿಸುತ್ತೇವೆ” ಎಂದು ಶ್ರೀಗಳು ಸಂಕಲ್ಪ ಘೋಷಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿಷ್ಯವೃಂದ, “ಪೂಜ್ಯ ಶ್ರೀಗಳು ನಮ್ಮೆಲ್ಲರ ಒಳಿತಿಗಾಗಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವುದು ನಮ್ಮ ಭಾಗ್ಯ. ನಿತ್ಯಾನುಷ್ಠಾನಗಳಿಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನು ನಾವು ಕಲ್ಪಿಸುತ್ತೇವೆ. ನಮ್ಮೆಲ್ಲರನ್ನೂ ಹರಸಿ ಆಶೀರ್ವದಿಸಬೇಕು” ಎಂದು ವಿನಮ್ರವಾಗಿ ಪ್ರಾರ್ಥಿಸಿದರು.

ಈ ಮನೋಜ್ಞ ಸನ್ನಿವೇಶ ಗುರು-ಶಿಷ್ಯರ ಅನ್ಯೋನ್ಯ ಸಂಬಂಧದ ಪ್ರತೀಕವಾಗಿ ಭಕ್ತರ ಮನಸೂರೆಗೊಂಡಿತು.

ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್., ಶಾಸನತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಕಾರ್ಯದರ್ಶಿ ಕೆ.ಪಿ. ಎಡಪ್ಪಾಡಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಚಾತುರ್ಮಾಸ್ಯದ ಪ್ರಧಾನ ಸಂಯೋಜಕ ಚಂದನ್ ಶಾಸ್ತ್ರಿ, ವಿವಿಧ ಮಂಡಲಗಳ ಪದಾಧಿಕಾರಿಗಳು, ನಿರ್ವಾಹಕರು ಹಾಗೂ ರಾಜ್ಯ ಮತ್ತು ಹೊರರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಭಾಗವಹಿಸಿ ವ್ಯಾಸಮಂತ್ರಾಕ್ಷತೆ ಸ್ವೀಕರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: ChaturmasyaGokarnaKannada News WebsiteLatest News KannadaRaghaveshwara Bharati SwamijiSri Ramachandrapura MuttUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಆದಿ ಶಂಕರಾಚಾರ್ಯರುಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀ ರಾಮಚಂದ್ರಾಪುರ ಮಠ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ಮುಖ್ಯಮಂತ್ರಿ PA ಎಂದು ನಂಬಿಸಿ 15 ಲಕ್ಷ ರೂ. ವಂಚನೆ | ಆರೋಪಿ ಅಂದರ್

Next Post

Accident | ಶಿಕಾರಿಪುರದಲ್ಲಿ ಅಪಘಾತ: ಪರೀಕ್ಷೆ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿ ಸಾವು

kalpa News

kalpa News

Next Post
shikaripura road accident iti student milan dies

Accident | ಶಿಕಾರಿಪುರದಲ್ಲಿ ಅಪಘಾತ: ಪರೀಕ್ಷೆ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL