ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ತನ್ಮಯ್ ಶೆಟ್ಟಿ, ಎಂಟನೇ ತರಗತಿಯ ಮಹಮ್ಮದ್ ಅಯಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂಬತ್ತನೇ ತರಗತಿ ಅದ್ವಿತ್ ಡಿ.ವಿ, ಹತ್ತನೇ ತರಗತಿಯ ಶಾನ್ ಡಿಸೋಜ, ಅಶ್ವಿನ್ ಎಸ್ ತಂಡದ ಸದಸ್ಯರಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












