No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ವರದಿ ಬಿಡುಗಡೆಗೆ ಆರ್.ಕೆ. ಸಿದ್ಧರಾಮಣ್ಣ ಆಗ್ರಹ

kalpa News by kalpa News
July 30, 2026
in ಶಿವಮೊಗ್ಗ
0
ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ವರದಿ ಬಿಡುಗಡೆಗೆ ಆರ್.ಕೆ. ಸಿದ್ಧರಾಮಣ್ಣ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಮಧುಸೂದನ್ ಆರ್. ನಾಯಕ್ ಅವರ ನೇತೃತ್ವದ ಆಯೋಗವು ಸಲ್ಲಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಬಿಡುಗಡೆ ಮಾಡಿ ಅದರಲ್ಲಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ಧರಾಮಣ್ಣ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 2013ರಲ್ಲಿಯೇ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸಾಮಾಜಿಕ ಶೈಕ್ಷಣಿಕ ವರದಿಗಾಗಿ ಕಾಂತ್‍ರಾಜ್ ಆಯೋಗವನ್ನು ರಚಿಸಿ, ಮೊದಲ ಬಜೆಟ್‍ನಲ್ಲಿಯೇ ಹಣ ಬಿಡುಗಡೆ ಮಾಡಿದ್ದರು. 2018ಕ್ಕೆ ವರದಿ ತಯಾರಾಗಿತ್ತು. ಆಯೋಗದವರು ವರದಿಯನ್ನು ಸಲ್ಲಿಸುವುದಾಗಿ ಹೇಳಿದ್ದರೂ ಕೂಡ ಆಗ ವರದಿಯನ್ನು ಸ್ವೀಕಾರ ಮಾಡಲೇ ಇಲ್ಲ. ಆ ವರದಿ ಹಾಗೆಯೇ ಉಳಿಯಿತು. ಪುನಃ 2018ರಲ್ಲಿ ಕಾಂತರಾಜ್ ಅವರು ನಿವೃತ್ತಿಯಾದ ನಂತರ ಆ ವರದಿಯ ಅಧ್ಯಯನಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ನೇಮಕ ಮಾಡಲಾಯಿತು. ಆಗ ಸಮಿತಿಯಲ್ಲಿ ಜಿ. ಪರಮೇಶ್ವರ್ ಹಾಗೂ ಮಧು ಬಂಗಾರಪ್ಪ ಕೂಡ ಇದ್ದರು. ಈ ವರದಿಯೂ ಕೂಡ ಸಿದ್ಧವಾಯಿತು. ಆದರೆ ಇದು ಕೂಡ ಬಿಡುಗಡೆಯಾಗದೆ ಕ್ಯಾಬಿನೆಟ್‍ನಲ್ಲಿ ಚರ್ಚೆಯಾಗಿ ವರದಿಯನ್ನೇ ತಿರಸ್ಕಾರ ಮಾಡಲಾಯಿತು. ಹಾಗೂ ಮತ್ತೊಮ್ಮೆ ಸಮೀಕ್ಷೆ ಮಾಡಲು ಮಧುಸೂದನ್ ನಾಯಕ್ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಯಿತು ಎಂದರು.
Kumadvathi College Shikariuraಇಷ್ಟೇಲ್ಲಾ ಹೈಡ್ರಾಮಗಳಾದರೂ ಕೂಡ ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿ ಮತ್ತೆ ತುಕ್ಕು ಹಿಡಿಯಿತು. ಇದಕ್ಕಾಗಿ ಮೊದಲು 200 ಕೋಟಿ, ನಂತರ 300 ಕೋಟಿ ಹೀಗೆ ಸರ್ಕಾರ ಸಿದ್ಧಪಡಿಸಲು ಕೋಟ್ಯಾಂತರ ರೂ.ಗಳನ್ನು ಖರ್ಚುಮಾಡಿದೆ. ಸಾರ್ವಜನಿಕರ ಹಣ ಸಂಪೂರ್ಣ ಪೋಲಾಗಿದೆ. ಆದರೂ ಕೂಡ ವರದಿ ಇನ್ನೂ ಸಾರ್ವಜನಿಕವಾಗಿ ಬಿಡುಗಡೆಯಾಗದೆ ಧೂಳು ಹಿಡಿದಿದೆ ಎಂದರು.

Also read>> ತುಂಗಾ ನದಿಯಲ್ಲಿ ತೀವ್ರ ಶೋಧ ಕಾರ್ಯ | ಸೇತುವೆ ಮೇಲೆ ಟ್ರಾಫಿಕ್ ಜಾಮ್ | ಕಾರಣವೇನು?

ಯಾವ ಶಕ್ತಿಗಳು ಈ ವರದಿಯನ್ನು ಜಾರಿಮಾಡಲು ಅಡ್ಡಿಪಡಿಸುತ್ತಿವೆ ಎಂದು ಗೊತ್ತಾಗುತ್ತಿಲ್ಲ. ಆದರೆ ಹಿಂದುಳಿದ ವರ್ಗಗಳಿಗೆ  ನ್ಯಾಯ ಸಿಗುವುದನ್ನು ಯಾರೂ ತಡೆಯಲು ಆಗುವುದಿಲ್ಲ. ಜಾತಿ ಗಣತಿಯ ಉದ್ದೇಶವೇ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸೌಲಭ್ಯವನ್ನು ಕೊಡುವುದೇ ಆಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಹಿಂದುಳಿದವರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಈಗ ಶಾಶ್ವತ ಆಯೋಗದ ಮುಂದಿರುವ ಈ ಸಮೀಕ್ಷಾ ವರದಿಯನ್ನು ಈಗಾಗಲೇ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಡುವ ಒಂದು ದಿನದ ಮುಂಚೆ ಸ್ವೀಕರಿಸಿದ್ದಾರೆ. ಈಗ ಅದು ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಂದೆ ಇದೆ. ಅವರಾದರೂ ಮನಸ್ಸು ಮಾಡಿ ಶೀಘ್ರವಾಗಿ ಮಧುಸೂದನ್ ನಾಯಕ್ ಅವರ ವರದಿಯನ್ನು ಕ್ಯಾಬಿನೆಟ್‍ನಲ್ಲಿ ಚರ್ಚಿಸಿ, ಚರ್ಚೆಗೆ ಅವಕಾಶ ಮಾಡಿಕೊಟ್ಟು ಹಿಂದುಳಿದ ವರ್ಗಗಳಿಗೆ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ವಿ.ರಾಜು ಮಾತನಾಡಿ, ನಗರದ ಸರ್ವಜ್ಞ ವೃತ್ತದಲ್ಲಿರುವ ದೇವರಾಜ್ ಅರಸು ಭವನ ನಿರ್ಮಾಣದ ಕಾಮಗಾರಿ ಅಪೂರ್ಣಗೊಂಡಿದೆ. ಇದನ್ನು ಪೂರ್ಣಗೊಳಿಸಲು ಒಕ್ಕೂಟವು ಒತ್ತಡ ತಂದ ಹಿನ್ನಲೆಯಲ್ಲಿ ಸರ್ಕಾರದ 2ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿತ್ತು. ಈ ಪೈಕಿ 1ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು. ಈ ಅನುದಾನದಲ್ಲಿ ಭವನದ ಕಾಮಗಾರಿಯನ್ನು ಪೂರ್ಣಗೊಳಿಸುವ ಬದಲಿಗೆ ಹಿಂದುಳಿದ ವರ್ಗಗಳ ಇಲಾಖೆಯು ಅನುದಾನವನ್ನು ಕಛೇರಿಯ ಅಲಂಕಾರಕ್ಕೆ ದುರ್ಬಳಕೆ ಮಾಡಿಕೊಂಡು ಅನ್ಯಾಯವೆಸಗಿದೆ ಎಂದು ದೂರಿದರು.

ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರುಗಳನ್ನು ನೀಡಲಾಗಿದೆ. ಹಾಗೆಯೇ ಈ ಹಿಂದೆ ಜಿಲ್ಲಾ ಮಂತ್ರಿಯಾಗಿದ್ದ ಮಧುಬಂಗಾರಪ್ಪನವರ ಗಮನಕ್ಕೂ ತರಲಾಗಿತ್ತು. ಆದರೆ ಅವರೂ ಸೇರಿದಂತೆ ಜಿಲ್ಲಾಡಳಿತ ತೀವ್ರ ನಿರ್ಲಕ್ಷ್ಯ ತೋರಿದ ಪರಿಣಾಮ ಭವನದ ಕಾಮಗಾರಿ ಈಗಲೂ ಅಪೂರ್ಣ ಹಂತದಲ್ಲೇ ಇದೆ. ಇದು ನಾಡಿನ ಧೀಮಂತ ನಾಯಕ ದೇವರಾಜು ಅರಸು ಅವರ ವ್ಯಕ್ತಿತ್ವಕ್ಕೆ ಮಾಡಿದ ಅವಮಾನವಾಗಿದೆ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಎಸ್.ಬಿ.ಅಶೋಕ್ ಗಾಂಧಿ ಬಸಪ್ಪ, ಡಿ.ನಿರಂಜನ್, ವೆಂಕಟೇಶ್, ಸುಮಿತ್ರಾ ರಂಗನಾಥ್, ರಾಜೇಶ್, ವಿಜಯಕುಮಾರ್, ಬಾಲಣ್ಣ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsJNNCE ShivamoggaKalpa News Advertising DisclaimerKalahamsa Infotech private limited

Tags: backward classesKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaR K SiddaramannaShimogaShivamoggaNewssocio-educational reportಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಂಗಾ ನದಿಯಲ್ಲಿ ತೀವ್ರ ಶೋಧ ಕಾರ್ಯ | ಸೇತುವೆ ಮೇಲೆ ಟ್ರಾಫಿಕ್ ಜಾಮ್ | ಕಾರಣವೇನು?

Next Post

ವಾಸ್ಕೋ ಡ ಗಾಮ–ವೇಲಂಕಣ್ಣಿ ನಡುವೆ 3 ವಿಶೇಷ ರೈಲು | ಉತ್ತರ ಕರ್ನಾಟಕಕ್ಕೂ ಉಪಯೋಗ

kalpa News

kalpa News

Next Post
Indian Railway Vasco Velankanni 3 Special Trains

ವಾಸ್ಕೋ ಡ ಗಾಮ–ವೇಲಂಕಣ್ಣಿ ನಡುವೆ 3 ವಿಶೇಷ ರೈಲು | ಉತ್ತರ ಕರ್ನಾಟಕಕ್ಕೂ ಉಪಯೋಗ

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL