No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಾವೇರಿ ನೀರು ವಿವಾದ | ಆಗಸ್ಟ್‌ 13ಕ್ಕೆ ಅಖಂಡ ಕರ್ನಾಟಕ ಬಂದ್‌ಗೆ ಕರೆ

kalpa News by kalpa News
July 31, 2026
in ರಾಷ್ಟ್ರೀಯ
0
Karnataka Bandh : cauvery-water-dispute-karnataka-bandh-august-13
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಮುಂದಾಗಿವೆ. ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ ಕುರಿತು ಖಾಸಗಿ ಹೋಟೆಲ್‌ನಲ್ಲಿ ನಡೆದ ಕನ್ನಡ ಒಕ್ಕೂಟಗಳ ಸಭೆಯ ಬಳಿಕ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್

ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಘೋಷಿಸಿದರು.

ಕನ್ನಡಿಗರು ಯಾವುದೇ ವಿರೋಧ ವ್ಯಕ್ತಪಡಿಸದೆ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಬೇಕು. ಇದು ಕೇವಲ ಸಂಘಟನೆಗಳ ಹೋರಾಟವಲ್ಲ, ರಾಜ್ಯದ ರೈತರ ಹಿತಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ಅವರು ಹೇಳಿದರು.

Also Read>> ವ್ಯಾಸಪೂರ್ಣಿಮೆ : ಭಾರತೀಯ ಜ್ಞಾನ ಪರಂಪರೆಯ ಮಹತ್ವ ಸಾರಿದ ಗುರುರಾಜ ಪೋಶೆಟ್ಟಿಹಳ್ಳಿ

ಆಸ್ಪತ್ರೆ, ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗುವುದು. ಉಳಿದಂತೆ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳ ಜನರು ಬಂದ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.Kumadvathi College Shikariura

Karnataka Bandh : ವಿವಿಧ ಸಂಘಟನೆಗಳಿಂದ ಬೆಂಬಲ ನಿರೀಕ್ಷೆ

ಚಿತ್ರರಂಗದ ವಾಣಿಜ್ಯ ಮಂಡಳಿ ಈಗಾಗಲೇ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಇದಲ್ಲದೆ, ರಾಜ್ಯ ಸರ್ಕಾರಿ ನೌಕರರು, ಕಾರ್ಮಿಕ ಸಂಘಟನೆಗಳು, ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ, ಲಾರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಎಲ್ಲರೂ ಬಂದ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ ಎಂದು ಹೇಳಿದರು.

ಮಾಲ್‌ಗಳು, ಚಿತ್ರಮಂದಿರಗಳು, ಬಸ್‌ ಮಾಲೀಕರು, ಓಲಾ-ಉಬರ್ ಸೇವೆಗಳಿಗೂ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗುವುದು. ವಿಮಾನ ಸೇವೆಗಳನ್ನೂ ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.

ಸಿಎಂಗಳು ಹೀರೋಗಳಾಗಲು ಹೊರಟಿದ್ದಾರೆ: ವಾಟಾಳ್

ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ರಾಜಕೀಯವಾಗಿ ಹೀರೋಗಳಾಗಲು ಮುಂದಾಗಿದ್ದಾರೆ ಎಂಬ ಭಾವನೆ ಮೂಡುತ್ತಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

“ಸುಪ್ರೀಂ ಕೋರ್ಟ್‌ನ ನಿಲುವು ಸ್ಪಷ್ಟವಾಗುವ ಮುನ್ನ ಮಾತುಕತೆಯ ಅಜೆಂಡಾ ಏನು? ಮೊದಲು ರೈತರು ಹಾಗೂ ಕನ್ನಡಪರ ಸಂಘಟನೆಗಳನ್ನು ಕರೆದು ಚರ್ಚಿಸಬೇಕು. ತುರ್ತಾಗಿ ವಿಧಾನಸಭೆ ಅಧಿವೇಶನ ಕರೆಯಬೇಕು. ಸರ್ವಪಕ್ಷ ಸಭೆ ನಡೆಸುವ ಅಗತ್ಯವೇನು?” ಎಂದು ಪ್ರಶ್ನಿಸಿದರು.

ನಟ ವಿಜಯ್‌ ಭೇಟಿ ಕುರಿತು ಎಚ್ಚರಿಕೆ

ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರು ಆಗಸ್ಟ್‌ 3ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಕಾವೇರಿ ನೀರು ಬಿಡಬಾರದು ಎಂಬ ನಿಲುವು ಸ್ಪಷ್ಟಪಡಿಸಿ ಬಂದರೆ ಸ್ವಾಗತಿಸಲಾಗುವುದು ಎಂದು ಹೇಳಿದರು.“ತಮಿಳುನಾಡಿನಲ್ಲಿಯೇ ಮೊದಲು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕರ್ನಾಟಕಕ್ಕೆ ಬರುವ ಅಗತ್ಯವಿಲ್ಲ. ಬಂದರೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದರು.

‘ಬಾಯಿಚಪಲಕ್ಕೆ ಬಂದ್’ ಟೀಕೆಗೆ ತಿರುಗೇಟು

ಬಂದ್‌ ಕರೆ ಕುರಿತು ಕೆಲವರು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ತಮ್ಮ ಹೋರಾಟದ ಹಿನ್ನೆಲೆಯನ್ನು ಪ್ರಸ್ತಾಪಿಸಿದರು.

“ನನ್ನನ್ನು ಗೌರವದಿಂದ ನೋಡುವವರು ಹಲವರಿದ್ದಾರೆ. ಈ ರೀತಿಯ ಟೀಕೆ ಸರಿಯಲ್ಲ. ಹೌದು, ನನಗೆ ಹೋರಾಟದ ಚಟ ಇದೆ. ನಿಜಲಿಂಗಪ್ಪ ಅವರ ಕಾಲದಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನಾನು ಕಡ್ಲೆಕಾಯಿ ತಿನ್ನಲು ಬಂದಿಲ್ಲ” ಎಂದು ಹೇಳಿದರು.

ಕಾವೇರಿ ನೀರು ಹಂಚಿಕೆ ವಿವಾದ ಮತ್ತಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್‌ 13ರ ಕರ್ನಾಟಕ ಬಂದ್‌ ರಾಜ್ಯ ರಾಜಕೀಯ ಹಾಗೂ ರೈತ ಹೋರಾಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: BENGALURUcauvery riverChief MinisterCWMACWRCKannada News WebsiteKarnatakaKarnataka BandhLatest News KannadaTamilNaduVatal Nagarajಕರ್ನಾಟಕ ಬಂದ್ಕಾವೇರಿ ನೀರುತಮಿಳುನಾಡುಬೆಂಗಳೂರು
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಸಪೂರ್ಣಿಮೆ : ಭಾರತೀಯ ಜ್ಞಾನ ಪರಂಪರೆಯ ಮಹತ್ವ ಸಾರಿದ ಗುರುರಾಜ ಪೋಶೆಟ್ಟಿಹಳ್ಳಿ

Next Post

ಬೆಂಗಳೂರು: ದಾಸ ಸಾಹಿತ್ಯದ ವೈಭವ ಮೆರೆದ ‘ದಾಸ ಭಜನೋತ್ಸವ–2026’

kalpa News

kalpa News

Next Post
ಬೆಂಗಳೂರು: ದಾಸ ಸಾಹಿತ್ಯದ ವೈಭವ ಮೆರೆದ ‘ದಾಸ ಭಜನೋತ್ಸವ–2026’

ಬೆಂಗಳೂರು: ದಾಸ ಸಾಹಿತ್ಯದ ವೈಭವ ಮೆರೆದ ‘ದಾಸ ಭಜನೋತ್ಸವ–2026’

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL