ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ಶ್ರೀ ಕೃಷ್ಣಧಾಮದಲ್ಲಿ ಭಾನುವಾರ ಸಂಜೆ ನಡೆದ ಅಭಿನಂದನಾ ಸಮರ್ಪಣಾ ಕಾರ್ಯಕ್ರಮದಲ್ಲಿ ಮಕ್ಕಳ ರಾಮಾಯಣ ಕೃತಿ ಬಿಡುಗಡೆ ಮಾಡಲಾಯಿತು.
ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರಮಂಡಳಿ ವತಿಯಿಂದ ಆಯೋಜಿಸಿದ್ದ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ಅಭಿನಂದನಾ ಸಮರ್ಪಣಾ ಕಾರ್ಯಕ್ರಮದಲ್ಲಿ ಶ್ರೀಗಳು ಕೃತಿಯನ್ನು ಬಿಡುಗಡೆಗೊಳಿಸಿದರು.
ನಗರದ ಹೆಬ್ಬಾಳ ನಿವಾಸಿ, ವೃತ್ತಿಯಲ್ಲಿ ವೈದ್ಯರಾದ ಡಾ. ಶ್ರೀರಾಮ್ ಹಾಗೂ ಸಮತಾ ಶ್ರೀರಾಮ್ ಅವರ ಪುತ್ರಿ ಧನ್ಯಶ್ರೀ ಎಸ್. ಅವರು ರಚಿಸಿರುವ ಈ ಮಕ್ಕಳ ರಾಮಾಯಣ ಕೃತಿ ಬಿಡುಗಡೆಗೊಂಡಿತು.
Also read>> ಮೈಸೂರು: ಆಗಸ್ಟ್ 2ರಂದು ಉಚಿತ ಸೂಪರ್ ಸ್ಪೆಷಾಲಿಟಿ ಆರೋಗ್ಯ ತಪಾಸಣೆ ಶಿಬಿರ
ಕಾರ್ಯಕ್ರಮದಲ್ಲಿ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹಾಗೂ ಪಲಿಮಾರು ಮಠದ ಕಿರಿಯ ಶ್ರೀಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.
ಮಕ್ಕಳಲ್ಲಿ ರಾಮಾಯಣದ ಮೌಲ್ಯಗಳು, ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ರಚಿಸಿರುವ ಈ ಕೃತಿ ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










