ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕಿನ ಬಾಳಗಾರು ಸಮೀಪ ಮಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯ ನಡುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸಂಭವಿಸಿದೆ.
ಕಾರು ಕೆರೆಗೆ ಮುಳುಗುತ್ತಿದ್ದಂತೆಯೇ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ವಾಹನದಿಂದ ಹೊರಬಂದು ಈಜಿಕೊಂಡು ದಡ ಸೇರಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Also read>> ರೋಗವಿಲ್ಲದ ಸ್ಥಿತಿ ಆರೋಗ್ಯವಲ್ಲ : ದೇಹ–ಮನಸ್ಸು–ಆತ್ಮದ ಸಮತೋಲನ : ರಾಮಚಂದ್ರಾಪುರ ಶ್ರೀ
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









