No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಿ: ಎಸ್.ಎಲ್. ಭೋಜೇಗೌಡ

ಕಸ್ತೂರಬಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆಗಳ ಉದ್ಘಾಟನಾ ಸಮಾರಂಭ

kalpa News by kalpa News
August 6, 2026
in ಶಿವಮೊಗ್ಗ
0
Prioritize improving-quality education-S.L. Bhojegowda
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೊದಲು ಶಾಲೆಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿ, ನಂತರ ಯಾವುದೇ ಶಿಕ್ಷಣ ನೀತಿಯನ್ನು ಸರ್ಕಾರ ಅಳವಡಿಸಲಿ ಎಂದು ವಿಧಾನಪರಿಷತ್ತಿನ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ನಗರದ ಕಸ್ತೂರಬಾ ಪದವಿಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿವಿಧ ವಿದ್ಯಾರ್ಥಿನಿ ಸಂಘಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Kumadvathi College Shikariuraರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಹಾಗೂ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮೊದಲು ಆದ್ಯತೆ ನೀಡಬೇಕಾಗಿದೆ. ಮೂಲಭೂತ ವ್ಯವಸ್ಥೆಗಳಿಲ್ಲದೆ ಕೇವಲ ಹೊಸ ಶಿಕ್ಷಣ ನೀತಿಗಳನ್ನು ಜಾರಿಗೊಳಿಸಿದರೆ ನಿರೀಕ್ಷಿತ ಫಲಿತಾಂಶ ಸಾಧಿಸಲು ಸಾಧ್ಯವಾಗುವುದಿಲ್ಲ.

ಗುಣಮಟ್ಟದ ಶಿಕ್ಷಣ ಪ್ರಮುಖ ಆದ್ಯತೆಯಾಗಬೇಕು. ವಾಸ್ತವಾಂಶಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸುವ ಮನೋಭಾವ ಬೆಳೆಸುವ ಬದಲು, ಪ್ರಶ್ನಿಸದೆ ಸತ್ಯವೆಂದು ಒಪ್ಪಿಕೊಳ್ಳುವ ಮನಸ್ಥಿತಿ ಮಕ್ಕಳಲ್ಲಿ ಬೆಳೆಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಪಠ್ಯಪುಸ್ತಕಗಳ ರಚನೆ ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿರಬೇಕು. ವೈಜ್ಞಾನಿಕ ಮನೋಭಾವ, ಮಾನವೀಯ ಮೌಲ್ಯಗಳು, ಭಾಷಾ ಪ್ರಾವೀಣ್ಯ ಮತ್ತು ವಿಮರ್ಶಾತ್ಮಕ ಚಿಂತನೆ ಬೆಳೆಸುವಂತಹ, ನಾಡು-ನುಡಿಗೆ ಬೆಳಕಾಗುವ ಪಠ್ಯಪುಸ್ತಕಗಳನ್ನು ರೂಪಿಸುವ ಅಗತ್ಯವಿದೆ.

ಕನ್ನಡವನ್ನು ಆಡಳಿತ ಭಾಷೆಯಾಗಿ ಬಲಪಡಿಸುವ ಉದ್ದೇಶ ಶ್ಲಾಘನೀಯ. ಅದಕ್ಕೆ ಪೂರಕವಾಗಿ ಯಾವ ರೀತಿಯ ಮೂಲಭೂತ ಸೌಕರ್ಯವನ್ನು ಕನ್ನಡ ಶಾಲೆಗೆ ನೀಡಬೇಕು ಎಂಬ ದೂರದೃಷ್ಟಿ ಸರ್ಕಾರಕ್ಕಿಲ್ಲ. ಮೊದಲು ಸರ್ಕಾರಿ ಶಾಲೆಗಳ‌ ಮೇಲೆ ಮಾನ್ಯತೆ ನವೀಕರಣದ ಮಾನದಂಡ ಅಳವಡಿಸಿ, ನಂತರ ಖಾಸಗಿ ಶಾಲೆಗಳ ಮೇಲೆ ಗುಣಮಟ್ಟದ ಮಾನದಂಡಗಳೊಂದಿಗೆ ಮೌಲ್ಯಮಾಪನ ನಡೆಸಿ ಎಂದು ಹೇಳಿದರು.PES Shivamogga

ಪದವಿಯ ನಂತರ ಕುಟುಂಬಕ್ಕೆ ನಾಡಿಗೆ ಬೆಳಕಾಗುವ ಸಂದರ್ಭದಲ್ಲಿ, ನಾವು ಓದಿದ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯದಿರಿ. ಹಿರಿಯರು ಕಟ್ಟಿದ ಸ್ವಾಸ್ಥ್ಯ ಸಮಾಜದಲ್ಲಿ ಮಾನವೀಯ ನೆಲೆಗಳೊಂದಿಗೆ ಉತ್ತಮ ಸಂಬಂಧಗಳ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಕನ್ನಡ ಸಾಹಿತ್ಯ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರೇರಣೀಯ ಮಾತುಗಳನ್ನು ನೀಡಿದೆ. ಅಂತಹ ಎಲ್ಲಾ ವಿಚಾರಗಳನ್ನು ಅಳವಡಿಸಿಕೊಂಡಾಗ ಮಾತ್ರ, ಪಡೆದ ಶಿಕ್ಷಣದಿಂದ ನಿಜವಾದ ಸಾರ್ಥಕ ಸಾಧ್ಯ ಎಂದು ಕಿವಿಮಾತು ಹೇಳಿದರು.

Also read>> ಸುಧೀಂದ್ರನಗರ ರಾಯರ ಮಠದಲ್ಲಿ ಆ.7ರಂದು ‘ಹರಿನಾಮ ಸಂಕೀರ್ತನೆ’

ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್. ಎನ್. ನಾಗರಾಜ ಮಾತನಾಡಿ, ನಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಹಲವು ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ಸರ್ಕಾರದಿಂದ ನೇಮಕಗೊಳ್ಳಬೇಕಾದ ಬೋಧಕರ ಕೊರತೆಯಿದ್ದರೂ, ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಆಡಳಿತ ಮಂಡಳಿಯೇ ಹೆಚ್ಚುವರಿ ಬೋಧಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣ ನೀಡಲು ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ, ಯಾವುದೇ ವಿಷಯದ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯುವ ಅವಕಾಶವಿದೆ. ಆದರೆ ಮಾಹಿತಿಯನ್ನು ವಿವೇಚನೆಯೊಂದಿಗೆ ಅರ್ಥೈಸಿ, ಆಧುನಿಕ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪಠ್ಯಜ್ಞಾನದ ಜೊತೆಗೆ ವಾಸ್ತವತೆಯನ್ನು ಅರಿಯುವ ವಿವೇಚನಾ ಶಕ್ತಿಯನ್ನು, ವಿದ್ಯಾರ್ಥಿಗಳಲ್ಲಿ ಬೆಳೆಸುವ ಜವಾಬ್ದಾರಿ ಗುರುಗಳ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿವಿಧತೆಯ ಸ್ವಾಗತ ಕೋರಿದ ವಿದ್ಯಾರ್ಥಿನಿಯರು

ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರುವ ಉದ್ದೇಶದಿಂದ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿನಿಯರು, ಕುವೆಂಪು ರಂಗಮಂದಿರದ ಪ್ರವೇಶ ದ್ವಾರದಲ್ಲಿ ನಿಂತು, ಅತಿಥಿಗಳನ್ನು ಆಯಾ ರಾಜ್ಯಗಳ ಭಾಷೆಗಳಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಕೊಡಗು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಪಂಜಾಬ್, ಆಗ್ರಾ ಹಾಗೂ ಬಂಜಾರ ಸಂಸ್ಕೃತಿಯ ಉಡುಗೆ ತೊಟ್ಟ ವಿದ್ಯಾರ್ಥಿನಿಯರು ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯ ಅನನ್ಯ ಚಿತ್ರಣವನ್ನು ಮೂಡಿಸಿದರು.

ನಿವೃತ್ತ ಇತಿಹಾಸ ಉಪನ್ಯಾಸಕರಾದ ಎಚ್.ವಿ.ಶುಭಕರ್ ದಂಪತಿಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್. ಎಸ್.ಎಚ್ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ.ಸಿ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷರಾದ ಸುಜನಾ.ಕೆ, ಉಪಾಧ್ಯಕ್ಷರಾದ ಯಶಸ್ವಿನಿ, ಚೇತನಾ ಕುಮಾರಿ, ಸೀಮಾ ಭಾನು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Education SocietyNews in KannadaNews KannadaS L BojegowdaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಧೀಂದ್ರನಗರ ರಾಯರ ಮಠದಲ್ಲಿ ಆ.7ರಂದು ‘ಹರಿನಾಮ ಸಂಕೀರ್ತನೆ’

Next Post

ಆ.10 | ಕಾರ್ಪೋರೇಟ್ ಆಳ್ವಿಕೆ ವಿರುದ್ದ ರಸ್ತೆ ತಡೆ ಚಳುವಳಿ: ಹೆಚ್.ಆರ್. ಬಸವರಾಜಪ್ಪ

kalpa News

kalpa News

Next Post
ಆ.10 | ಕಾರ್ಪೋರೇಟ್ ಆಳ್ವಿಕೆ ವಿರುದ್ದ ರಸ್ತೆ ತಡೆ ಚಳುವಳಿ: ಹೆಚ್.ಆರ್. ಬಸವರಾಜಪ್ಪ

ಆ.10 | ಕಾರ್ಪೋರೇಟ್ ಆಳ್ವಿಕೆ ವಿರುದ್ದ ರಸ್ತೆ ತಡೆ ಚಳುವಳಿ: ಹೆಚ್.ಆರ್. ಬಸವರಾಜಪ್ಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL