ಕಲ್ಪ ಮೀಡಿಯಾ ಹೌಸ್ | ಉಡುಪಿ |
ಶ್ರೀ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದಂಗಳವರ ಚಾತುರ್ಮಾಸ್ಯ (Chaturmasya) ಅಂಗವಾಗಿ ಬಾರಕೂರಿನ ಮೂಲ ಮಠದಲ್ಲಿ ಆಗಸ್ಟ್ 7ರಂದು (ಶುಕ್ರವಾರ) ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
Chaturmasya | ಸಾಂಸ್ಕೃತಿಕ ಕಾರ್ಯಕ್ರಮ
ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ತೆಕ್ಕಟ್ಟೆಯ ಶ್ರೀರಾಮ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಂಜೆ 4ರಿಂದ 5 ಗಂಟೆಯವರೆಗೆ ವಿದ್ವಾನ್ ಶ್ರೀ ಬಿ. ಇ. ನಾಗೇಂದ್ರಪ್ರಸಾದಾಚಾರ್ಯ ಅವರು ‘ಮಹಾಭಾರತ ಉಪಾಖ್ಯಾನ’ ವಿಷಯದ ಕುರಿತು ಪ್ರವಚನ ನೀಡಲಿದ್ದಾರೆ.
ಸಂಜೆ 5ರಿಂದ 5.10ರವರೆಗೆ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದಂಗಳವರು ‘ಕೃಷ್ಣನಾಮ ವ್ಯಾಖ್ಯಾನ’ ಮಾಡಲಿದ್ದಾರೆ. ನಂತರ ಸಂಜೆ 5.10ರಿಂದ 6.30ರವರೆಗೆ ವೇದವಿದ್ವಾಂಸರ ಸನ್ಮಾನ ಕಾರ್ಯಕ್ರಮ ಜರುಗಲಿದೆ.
Also Read>> ಭೋಜನವೆಂದರೆ ಅದ್ವೈತ ಸಾಧನೆ | ರಾಮಚಂದ್ರಾಪುರ ಶ್ರೀ
ಸಂಜೆ 6.30ರಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರಿನ ಶ್ರೀಮತಿ ಐಶ್ವರ್ಯ ಶಶಾಂಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವು ಬಾರಕೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಬಳಿಕ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.
ಎಲ್ಲ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಠದ ಆಡಳಿತ ಮಂಡಳಿ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











