ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ಸ್ನೇಹಿತರಿದ್ದ ಕಾರು ಶಿವಮೊಗ್ಗ (Shivamogga) ಜಿಲ್ಲೆಯ ಚೋರಡಿ ಬ್ರಿಡ್ಜ್ ಬಳಿ ಪಲ್ಟಿಯಾಗಿದ್ದು, ಆರು ಮಂದಿ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಆರು ಮಂದಿ ಒಂದೇ ಕಾರಿನಲ್ಲಿ ಬೆಂಗಳೂರಿನಿಂದ ಸಿಗಂದೂರು ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚೋರಡಿ ಬ್ರಿಡ್ಜ್ ಸಮೀಪ ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ, ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಮೂರು ಬಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇಬ್ಬರ ಸ್ಥಿತಿ ಗಂಭೀರ
ಅಪಘಾತದಲ್ಲಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Also read>> ಕಳುವಾಗಿದ್ದ 50 ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ
ಪೊಲೀಸರ ವಾಹನ ತಪ್ಪಿದ ದುರಂತ
ಇದೇ ವೇಳೆ ಕರ್ತವ್ಯದ ನಿಮಿತ್ತ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಸಾಗರ ಪೇಟೆ ಠಾಣೆ ಪೊಲೀಸರ ವಾಹನವೂ ಇದೇ ಮಾರ್ಗದಲ್ಲಿ ಸಾಗುತ್ತಿತ್ತು. ಅಪಘಾತ ಸಂಭವಿಸಿದ ಸ್ಥಳಕ್ಕೆ ಒಂದೆರಡು ನಿಮಿಷ ಮುಂಚಿತವಾಗಿ ತಲುಪಿದ್ದರೆ, ಪಲ್ಟಿಯಾದ ಕಾರು ಪೊಲೀಸರ ವಾಹನಕ್ಕೂ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು ಎಂದು ಎಎಸ್‌ಐ ಮೀರಾಬಾಯಿ ತಿಳಿಸಿದ್ದಾರೆ.
ತನಿಖೆ ಮುಂದುವರಿಕೆ
ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








