No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಆಸ್ಪತ್ರೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಡ್ಡಾಯಕ್ಕೆ ಆಗ್ರಹ: ಒಂದು ವಾರದ ಗಡುವು

kalpa News by kalpa News
August 7, 2026
in ಶಿವಮೊಗ್ಗ
0
shivamogga-private-hospitals-parking-problem-deadline
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ (Shivamogga) ಹಲವು ಖಾಸಗಿ ಆಸ್ಪತ್ರೆಗಳಲ್ಲಿ (Private Hospital) ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ರೋಗಿಗಳು, ಸಾರ್ವಜನಿಕರು ಹಾಗೂ ತುರ್ತು ಸೇವೆಗಳ ವಾಹನಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಒಂದು ವಾರದ ಗಡುವು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಸಂಘರ್ಷ ಸಮಿತಿ ಆಗ್ರಹಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ಹರೀಶ್, ನಗರದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆಯೇ ಇಲ್ಲ ಎಂದು ಆರೋಪಿಸಿದರು.Kumadvathi College Shikariura

ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದುಕೊಂಡು ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಲು ಮುಂದಾದರೆ, ಸೆಕ್ಯುರಿಟಿ ಸಿಬ್ಬಂದಿ ವಾಹನ ನಿಲ್ಲಿಸದಂತೆ ತಡೆಯುತ್ತಾರೆ. ಮತ್ತೊಂದೆಡೆ, ರಸ್ತೆ ಬದಿಯಲ್ಲಿ ಅಥವಾ ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದರೆ ಪೊಲೀಸರು ದಂಡ ವಿಧಿಸುತ್ತಾರೆ. ಹೀಗಾಗಿ ರೋಗಿಗಳನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬರಬೇಕೋ ಅಥವಾ ವಾಹನವನ್ನು ಎಲ್ಲಿ ನಿಲ್ಲಿಸಬೇಕು ಎಂಬ ಆತಂಕದಲ್ಲೇ ಸಮಯ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೇಸ್‌ಮೆಂಟ್ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದರೂ ವ್ಯವಸ್ಥೆ ಇಲ್ಲ

ನಗರದ ಹಲವು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಕಟ್ಟಡ ನಿರ್ಮಾಣಕ್ಕೆ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯುವ ಸಂದರ್ಭದಲ್ಲಿ ತಮ್ಮ ಕಟ್ಟಡಗಳ ಬೇಸ್‌ಮೆಂಟ್ ಪ್ರದೇಶವನ್ನು ಪಾರ್ಕಿಂಗ್‌ಗಾಗಿ ಮೀಸಲಿಡುವುದಾಗಿ ಯೋಜನೆ ಸಲ್ಲಿಸಿದ್ದವು. ಆದರೆ ಪ್ರಸ್ತುತ ಹಲವು ಆಸ್ಪತ್ರೆಗಳ ಬೇಸ್‌ಮೆಂಟ್‌ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಕಂಡುಬರುತ್ತಿದೆ ಎಂದು ಸಮಿತಿ ಆರೋಪಿಸಿದೆ.

ಇದರಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವಂತಾಗಿದೆ. ಪರಿಣಾಮವಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವುದರ ಜೊತೆಗೆ ಸಾರ್ವಜನಿಕರ ಸಂಚಾರಕ್ಕೂ ತೊಂದರೆಯಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್‌ ಸೇರಿದಂತೆ ತುರ್ತು ಸೇವೆಗಳ ವಾಹನಗಳು ಆಸ್ಪತ್ರೆಗಳನ್ನು ತಲುಪಲು ಹಾಗೂ ಹೊರಬರಲು ಸಮಸ್ಯೆಯಾಗುವ ಸಾಧ್ಯತೆಯೂ ಇದೆ ಎಂದು ಹರೀಶ್ ತಿಳಿಸಿದರು.

ಆಸ್ಪತ್ರೆಗಳ ಸುತ್ತಮುತ್ತ ವಾಹನಗಳ ಅಸಮರ್ಪಕ ನಿಲುಗಡೆಯಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಕೆಲ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಈ ಸಮಸ್ಯೆಯನ್ನು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.

ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ತಕ್ಷಣವೇ ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳ ಬೇಸ್‌ಮೆಂಟ್ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಬೇಕು. ಕಟ್ಟಡ ನಿರ್ಮಾಣ ಅನುಮತಿ ಪಡೆಯುವ ಸಂದರ್ಭದಲ್ಲಿ ನೀಡಿರುವ ಯೋಜನೆ ಹಾಗೂ ಪ್ರಸ್ತುತ ಇರುವ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸಿರುವ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.

Also read>> ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದ ಕಾರು ಪಲ್ಟಿ; 6 ಮಂದಿಗೆ ಗಾಯ

ಸಾರ್ವಜನಿಕರ ಅನುಕೂಲ ಹಾಗೂ ರೋಗಿಗಳ ಹಿತದೃಷ್ಟಿಯಿಂದ ಪ್ರತಿಯೊಂದು ಖಾಸಗಿ ಆಸ್ಪತ್ರೆಯಲ್ಲೂ ಅಗತ್ಯ ಪ್ರಮಾಣದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಸಂಬಂಧ ಒಂದು ವಾರದೊಳಗಾಗಿ ಕ್ರಮ ಕೈಗೊಂಡು, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.PES Shivamogga

ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ

ಮಹಾನಗರ ಪಾಲಿಕೆ ಅಧಿಕಾರಿಗಳು ಒಂದು ವಾರದ ಗಡುವಿನೊಳಗೆ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಹರೀಶ್ ಎಚ್ಚರಿಕೆ ನೀಡಿದರು.

ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPrivate hospitals parking problemShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದ ಕಾರು ಪಲ್ಟಿ; 6 ಮಂದಿಗೆ ಗಾಯ

Next Post

ರಾಷ್ಟ್ರಪತಿ ಭವನಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗ ಭೇಟಿ

kalpa News

kalpa News

Next Post
shivamogga-chamber-delegation-visits-rashtrapati-bhavan

ರಾಷ್ಟ್ರಪತಿ ಭವನಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL