ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂಸದ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ಬಿ.ವೈ.ರಾಘವೇಂದ್ರ ಅಭಿಮಾನಿ ಬಳಗದ ವತಿಯಿಂದ ಆ.16ರಂದು ಶಿವಮೊಗ್ಗ ನಗರದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಳಗದ ಮುಖಂಡ ಬಳ್ಳೆಕೆರೆ ಸಂತೋಷ್ ತಿಳಿಸಿದರು.
ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರಿಯ ಸಂಸದ, ಅಭಿವೃದ್ಧಿಯ ಹರಿಕಾರ ಹಾಗೂ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಿ.ವೈ.ರಾಘವೇಂದ್ರ ಅವರ ಜನ್ಮದಿನವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲು ಸಿದ್ಧತೆ ನಡೆಸಿದ್ದಾರೆ ಎಂದರು.
ಬೆಳಗ್ಗಿನಿಂದಲೇ ವಿವಿಧ ಕಾರ್ಯಕ್ರಮ
ಆ.16ರಂದು ಬೆಳಿಗ್ಗೆ 7.30ಕ್ಕೆ ವಿನೋಬನಗರದ ಶಿವಾಲಯದಲ್ಲಿ ರುದ್ರಾಭಿಷೇಕ ನಡೆಯಲಿದೆ. ನಂತರ ಬೆಳಿಗ್ಗೆ 9 ಗಂಟೆಗೆ ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು.
Also read>> ವಿಧಾನಸೌಧದಲ್ಲಿ ಸಚಿವ ಮಧು ಬಂಗಾರಪ್ಪ ನೂತನ ಕಚೇರಿಗೆ ಪೂಜೆ: ಹೇಗಿತ್ತು ಕಾರ್ಯಕ್ರಮ?
ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ಸಿಹಿ ವಿತರಣೆ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಸಿಹಿ ಹಂಚಲಾಗುವುದು.
ನಂತರ ಬೆಳಿಗ್ಗೆ 11.30ಕ್ಕೆ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.
ಸಂಜೆ ನಾಗರಿಕ ಸನ್ಮಾನ
ಜನ್ಮದಿನದ ಪ್ರಮುಖ ಕಾರ್ಯಕ್ರಮವಾಗಿ ಸಂಜೆ 6 ಗಂಟೆಗೆ ಗೋಪಾಳದಲ್ಲಿರುವ ಬಂಟರ ಭವನದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ನಾಗರಿಕ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕರಾದ ಎಸ್.ರುದ್ರೇಗೌಡ ಹಾಗೂ ಆರ್.ಕೆ.ಸಿದ್ರಾಮಣ್ಣ ಸೇರಿದಂತೆ ಬಿಜೆಪಿಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಇದಲ್ಲದೆ ಜಿಲ್ಲೆಯ ವಿವಿಧ ಸಮಾಜಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಬಿ.ವೈ.ರಾಘವೇಂದ್ರ ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂತೋಷ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರು
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಡಾ. ಶಾಂತಾ ಸುರೇಂದ್ರ, ವೀರಭದ್ರಪ್ಪ ಪೂಜಾರಿ, ಎ.ಜೆ.ರಾಮಚಂದ್ರ, ಎಸ್.ಕೆ.ಶೇಷಾಚಲ, ಮಂಗೋಟೆ ರುದ್ರೇಶ್, ಶ್ರೀನಿವಾಸ್, ಸುರೇಖಾ ಮುರುಳಿಧರ್, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್, ಉಮಾಶಂಕರ್, ಪ್ರೊ. ಎ.ಎಸ್.ಚಂದ್ರಶೇಖರ್, ಕೆ.ವಿ.ಅಣ್ಣಪ್ಪ, ಜಾವೀದ್, ಪೆರುಮಾಳ್, ಸುರೇಶ್ ನಾಡಿಗ್, ಹರೀಶ್, ಕಿರಣ್, ಡಾ.ಗೌತಮ್, ವೆಂಕಟೇಶ್ ನಾಯ್ಡು, ತೀರ್ಥೇಶ್, ಪ್ರದೀಪ್ ಹೊನ್ನಪ್ಪ, ಚಂದ್ರಶೇಖರ್, ಭಾರತೀ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






