ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ಹೊಳೆಹೊನ್ನೂರು (Holehonnuru) ಪಟ್ಟಣದ ರೈಸ್ ಮಿಲ್ ಬಳಿ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ (Accident) ಹೊಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವುಕಂಡಿದ್ದಾರೆ.
ಮೃತ ವ್ಯಕ್ತಿಯನ್ನು ಅರಸೀಕೆರೆ (Arsikere) ಮೂಲದ ಸುರೇಶಗೌಡ (53) ಎಂದು ಗುರುತಿಸಲಾಗಿದೆ. ಸುರೇಶ್ ಗೌಡ ಅವರು ಅವರ ಸಂಬಂಧಿಯ ಜೊತೆಗೆ ಹೊಳೆಹೊನ್ನೂರಿನಲ್ಲಿ ಬೇಕರಿ ನೋಡಿಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
Also read>> ಯಕ್ಷಗಾನ-ಸುಗಮ ಸಂಗೀತದ ಅಪೂರ್ವ ಸಂಗಮ: ಆ.15ರಂದು ‘ಯಕ್ಷ-ಭಾವ-ಗಾನ’ ಜುಗಲ್ಬಂದಿ
Holehonnuru : ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಹೊಳೆಹೊನ್ನೂರು ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ಸಂಭವಿಸಿದ್ದು, ಅರಸೀಕೆರೆ ಮೂಲದ ಸುರೇಶಗೌಡ ಅವರು ನಡೆದುಕೊಂಡು ಹೋಗುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಾಯಗೊಂಡಿದ್ದ ಅವರನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ನಂತರ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸುರೇಶಗೌಡ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










