ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗ, ಬಲಿದಾನ ಮತ್ತು ಹೋರಾಟವನ್ನು ಸ್ಮರಿಸಿದರು.
ಅಸಂಖ್ಯಾತ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಅವರ ಆದರ್ಶಗಳನ್ನು ಇಂದಿನ ಯುವಜನತೆ ಅಳವಡಿಸಿಕೊಂಡು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.
Also read>> ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್ಗೆ ಜೈನ್ ವಿಶ್ವವಿದ್ಯಾಲಯದ ಡಿಸೈನ್ ಶಾಲೆ
ಕಾರ್ಯಕ್ರಮದಲ್ಲಿ ಪರ್ವೀಜ್ ಅಹ್ಮದ್, ಚಂದ್ರಶೇಖರ್ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











