ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, “ನಾವು ಇಂದು ಧೈರ್ಯದಿಂದ ಹಾಗೂ ನೆಮ್ಮದಿಯಿಂದ ಬದುಕು ಸಾಗಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಹೋರಾಟ, ತ್ಯಾಗ ಮತ್ತು ಬಲಿದಾನವೇ ಕಾರಣ. ಅಂತಹ ಮಹಾತ್ಮರನ್ನು ಸದಾ ಸ್ಮರಿಸಬೇಕು. ಇದರ ಜೊತೆಗೆ ದೇಶಕ್ಕಾಗಿ ಇಂದಿಗೂ ಬಲಿದಾನಗೈಯುತ್ತಿರುವ ಸೈನಿಕರನ್ನು ಗೌರವದಿಂದ ನೆನಪಿಸಿಕೊಳ್ಳಬೇಕು” ಎಂದು ಹೇಳಿದರು.
ಯುವಜನತೆ ವ್ಯಸನಮುಕ್ತ ಹಾಗೂ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಶಪಥ ಮಾಡಬೇಕು. ಶಾಂತಿ, ಸಮೃದ್ಧಿ ಹಾಗೂ ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ವತಿಯಿಂದ ಮುಖ್ಯ ಅತಿಥಿ ವಿಶ್ವನಾಥ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀರಾಗ್ ಡಿ.ಪಿ. ಸ್ವಾತಂತ್ರ್ಯ ದಿನಾಚರಣೆಯ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.
Also read>> 10 ವಿದ್ವಾಂಸರಿಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ | ಸಾಮವೇದ ಪಂಡಿತರಿಗೆ ದೊರೆತ ಮನ್ನಣೆ
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪದವಿಪೂರ್ವ ವಿಭಾಗದ ನಿತೀಶ್ ಶೆಟ್ಟಿ, ಪ್ರೌಢಶಾಲಾ ವಿಭಾಗದ ವಿಶ್ವನಾಥ ಪೂಜಾರಿ ಮತ್ತು ಪ್ರಾಥಮಿಕ ವಿಭಾಗದ ವನಿತಾ ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್ ಹಾಗೂ ಪ್ರಕಾಶ್ ನಾಯ್ಕ್ ಕಾರ್ಯಕ್ರಮವನ್ನು ಸಂಘಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರಿಯಾ ಸಂದೀಪ್ ಸ್ವಾಗತಿಸಿದರು. ಪದವಿಪೂರ್ವ ವಿಭಾಗದ ಆಂಗ್ಲಭಾಷಾ ಉಪನ್ಯಾಸಕಿ ಆರತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












