No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಬರೋಬ್ಬರಿ 70 ಆಟೋಗಳು ಸೀಜ್! ಕಾರಣವೇನು? ಏನಾಯ್ತು?

kalpa News by kalpa News
August 17, 2026
in ಶಿವಮೊಗ್ಗ
0
Shivamogga 70 Autos Seized By Police During Document Check copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಯಾಣಿಕರ ಸುರಕ್ಷತೆ ಹಾಗೂ ನಗರದಲ್ಲಿ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ (Shivamogga) ನಗರದಲ್ಲಿ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ಜಂಟಿಯಾಗಿ ವಿಶೇಷ ವಾಹನ ತಪಾಸಣಾ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿರುವ ಹಾಗೂ ಅಗತ್ಯ ದಾಖಲೆಗಳನ್ನು ಚಾಲ್ತಿಯಲ್ಲಿಟ್ಟುಕೊಳ್ಳದ ಒಟ್ಟು 70 ಆಟೋ ರಿಕ್ಷಾಗಳನ್ನು (Auto Rickshaw) ವಶಕ್ಕೆ ಪಡೆಯಲಾಗಿದೆ.

ನಗರದ ಅಶೋಕ ಸರ್ಕಲ್, ಶಿವಪ್ಪನಾಯಕನ ಸರ್ಕಲ್ ಹಾಗೂ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು. ಪೊಲೀಸ್ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡಗಳಾಗಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರ ಆಟೋ ರಿಕ್ಷಾಗಳ ದಾಖಲೆಗಳು ಮತ್ತು ನಿಯಮ ಪಾಲನೆಯ ಬಗ್ಗೆ ಪರಿಶೀಲಿಸಿದರು.

ಅಗತ್ಯ ದಾಖಲೆಗಳ ಪರಿಶೀಲನೆ

ತಪಾಸಣೆ ವೇಳೆ ಆಟೋ ಚಾಲಕರ ಚಾಲನಾ ಪರವಾನಗಿ (Driving Licence), ವಾಹನ ವಿಮೆ (Insurance), ಫಿಟ್‌ನೆಸ್ ಪ್ರಮಾಣಪತ್ರ (Fitness Certificate), ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (Pollution Certificate), ಡಿಸ್‌ಪ್ಲೇ ಕಾರ್ಡ್ (Display Card) ಸೇರಿದಂತೆ ಕಡ್ಡಾಯ ದಾಖಲೆಗಳನ್ನು ಪರಿಶೀಲಿಸಲಾಯಿತು.

https://kalpa.news/wp-content/uploads/2026/08/Independence-Day-Film-Kannada.mp4

ದಾಖಲೆಗಳು ಚಾಲ್ತಿಯಲ್ಲಿಲ್ಲದಿರುವುದು, ನಿಯಮಾನುಸಾರ ದಾಖಲೆಗಳನ್ನು ಹೊಂದಿರದಿರುವುದು ಸೇರಿದಂತೆ ವಿವಿಧ ಉಲ್ಲಂಘನೆಗಳು ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 70 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆಯಲಾಯಿತು.

ಫಿಟ್‌ನೆಸ್ ಅವಧಿ ಮುಗಿದ ಆಟೋಗಳ ವಿರುದ್ಧ ಕ್ರಮ

ವಿಶೇಷವಾಗಿ ವಾಹನದ ಫಿಟ್‌ನೆಸ್ ಪ್ರಮಾಣಪತ್ರದ ಅವಧಿ ಮುಕ್ತಾಯಗೊಂಡಿರುವ ಆಟೋ ರಿಕ್ಷಾಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ವಾಹನದ ಫಿಟ್‌ನೆಸ್ ಪ್ರಮಾಣಪತ್ರವು ವಾಹನವು ರಸ್ತೆ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂಬುದನ್ನು ಖಚಿತಪಡಿಸುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ಹಿನ್ನೆಲೆಯಲ್ಲಿ, ಅದರ ಅವಧಿ ಮುಗಿದಿದ್ದರೂ ವಾಹನಗಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಬಳಸುವುದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

ಮುಂದುವರಿಯಲಿದೆ ತಪಾಸಣಾ ಕಾರ್ಯಾಚರಣೆ

ನಗರದಲ್ಲಿ ಆಟೋ ರಿಕ್ಷಾಗಳ ಸಂಚಾರಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟಲು ಮುಂದಿನ ದಿನಗಳಲ್ಲಿಯೂ ವಿಶೇಷ ತಪಾಸಣೆ ಹಾಗೂ ಕಾನೂನು ಜರುಗಿಸುವ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.Soild Waste Management Rule 2026

ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಕಡ್ಡಾಯ ದಾಖಲೆಗಳನ್ನು ಸದಾ ಚಾಲ್ತಿಯಲ್ಲಿಟ್ಟುಕೊಂಡಿರಬೇಕು. ಚಾಲನಾ ಪರವಾನಗಿ, ವಿಮೆ, ಫಿಟ್‌ನೆಸ್ ಪ್ರಮಾಣಪತ್ರ, ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ, ಡಿಸ್‌ಪ್ಲೇ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳು ಮಾನ್ಯವಾಗಿರುವುದನ್ನು ಖಚಿತಪಡಿಸಿಕೊಂಡು ಮಾತ್ರ ವಾಹನ ಚಲಾಯಿಸುವಂತೆ ಸೂಚಿಸಲಾಗಿದೆ.

ಮೀಟರ್ ದರಕ್ಕಿಂತ ಹೆಚ್ಚಿನ ಬಾಡಿಗೆ ಪಡೆಯದಂತೆ ಸೂಚನೆ

ಇದರೊಂದಿಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುವ ಸಾರ್ವಜನಿಕರಿಂದ ಕಡ್ಡಾಯವಾಗಿ ಆಟೋ ಮೀಟರ್ ಬಳಸಿ, ಮೀಟರ್‌ನಲ್ಲಿ ನಮೂದಾಗುವ ನಿಗದಿತ ದರವನ್ನು ಮಾತ್ರ ಬಾಡಿಗೆಯಾಗಿ ಪಡೆಯಬೇಕು ಎಂದು ಚಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ನಿಗದಿತ ಮೀಟರ್ ದರಕ್ಕಿಂತ ಹೆಚ್ಚಿನ ಮೊತ್ತವನ್ನು ಪ್ರಯಾಣಿಕರಿಂದ ವಸೂಲಿ ಮಾಡಬಾರದು. ಪ್ರಯಾಣಿಕರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ಬಾಡಿಗೆ ವ್ಯವಸ್ಥೆ ಕಲ್ಪಿಸುವುದು ಆಟೋ ಚಾಲಕರ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರ ಸಹಕಾರಕ್ಕೆ ಮನವಿ

ಪ್ರಯಾಣಿಕರ ಸುರಕ್ಷತೆ, ನಿಯಮಬದ್ಧ ಸಾರಿಗೆ ವ್ಯವಸ್ಥೆ ಹಾಗೂ ಪಾರದರ್ಶಕ ಬಾಡಿಗೆ ವ್ಯವಸ್ಥೆ ಖಚಿತಪಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಕೈಗೊಂಡಿರುವ ಕ್ರಮಗಳಿಗೆ ಸಾರ್ವಜನಿಕರು ಹಾಗೂ ಆಟೋ ರಿಕ್ಷಾ ಚಾಲಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.B.Y. Raghavendra Birthday

ನಗರದಲ್ಲಿ ಸಂಚರಿಸುವ ಆಟೋ ರಿಕ್ಷಾಗಳು ಕಡ್ಡಾಯ ದಾಖಲೆಗಳನ್ನು ಹೊಂದಿರುವುದು, ವಾಹನಗಳು ಫಿಟ್‌ನೆಸ್ ಹೊಂದಿರುವುದು ಹಾಗೂ ಪ್ರಯಾಣಿಕರಿಂದ ನಿಗದಿತ ಮೀಟರ್ ದರವನ್ನು ಮಾತ್ರ ಪಡೆಯುವುದು ಖಚಿತಪಡಿಸಿಕೊಳ್ಳುವ ಮೂಲಕ ಸುರಕ್ಷಿತ ಮತ್ತು ಸುಗಮ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಿಸುವ ಗುರಿಯನ್ನು ಇಲಾಖೆ ಹೊಂದಿದೆ.

Shivamogga: 70 Autos Seized in Joint Police-RTO Inspection Drive

Shivamogga: In a bid to ensure passenger safety and maintain smooth traffic movement in the city, the Shivamogga Police Department and Regional Transport Department jointly conducted a special inspection drive against auto-rickshaws on Monday. During the operation, 70 auto-rickshaws were seized for violating rules and failing to maintain valid mandatory documents.

The special inspection was conducted at Ashoka Circle, Shivappa Nayaka Circle and the Railway Station area in Shivamogga. Officials and personnel from both departments inspected auto-rickshaws operating in the city and verified vehicle documents and compliance with transport regulations.PES Shivamogga

Mandatory documents checked

During the inspection, officials checked essential documents including the driving licence, vehicle insurance, fitness certificate, Pollution Under Control (PUC) certificate and display card, among others.

A total of 70 auto-rickshaws were found to have violations, including expired or unavailable documents, following which the vehicles were taken into custody for further action.

Action against autos with expired fitness certificates

Particular attention was given to auto-rickshaws whose fitness certificates had expired. Such vehicles were handed over to officials of the Regional Transport Department for further legal action.

Officials stressed that a valid fitness certificate is essential to establish that a vehicle is roadworthy. Operating passenger vehicles despite the expiry of the fitness certificate is being viewed seriously by the authorities.Kumadvathi College Shikariura

More inspections to continue

The authorities have made it clear that similar inspection drives and enforcement நடவடಿಕைகள் will continue in the coming days to curb violations by auto-rickshaw operators in Shivamogga city.

Auto-rickshaw drivers have been instructed to ensure that all mandatory documents related to their vehicles remain valid at all times. They have also been advised to carry valid driving licences, insurance, fitness certificates, PUC certificates and display cards while operating their vehicles.

Drivers warned against overcharging

The authorities have also issued strict instructions to auto-rickshaw drivers to use the auto meter and collect only the fare displayed on the meter from passengers.

Drivers have been warned against charging passengers more than the prescribed meter fare. Ensuring a transparent and fair fare system is the responsibility of auto-rickshaw operators, officials said.

Public urged to cooperate

The Police Department and Regional Transport Department have appealed to both the public and auto-rickshaw drivers to cooperate with the enforcement measures aimed at ensuring passenger safety, transparent fares and smooth public transportation in the city.

The authorities said ensuring that auto-rickshaws have valid documents, meet fitness requirements and charge passengers only the prescribed meter fare is essential for creating a safer and more efficient public transport system in Shivamogga.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited

 

Tags: Auto RickshawRTOShimogaShivamoggaಆಟೋ ರಿಕ್ಷಾಪೊಲೀಸ್ ಇಲಾಖೆಪ್ರಾದೇಶಿಕ ಸಾರಿಗೆ ಇಲಾಖೆಶಿವಮೊಗ್ಗ
Share207Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಹನ ಸವಾರರಿಗೆ ಹೊರೆ | ವೆಹಿಕಲ್ ಎಮಿಷನ್ ಟೆಸ್ಟ್ ದರ ಏರಿಕೆ | ಎಷ್ಟು ಹೆಚ್ಚಳ?

Next Post

ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಂಎಸ್ ಬೃಹತ್ ಪ್ರತಿಭಟನೆ

kalpa News

kalpa News

Next Post
shivamogga-bms-protest-workers-demands

ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಂಎಸ್ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL