ಕಲ್ಪ ಮೀಡಿಯಾ ಹೌಸ್ | ಸಾಗರ |
ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ (Accident) ಮುಖಾಮುಖಿ ಡಿಕ್ಕಿಯಲ್ಲಿ 19 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ (Sagara) ಸಾಗರ ತಾಲೂಕಿನ ಬಳಸಗೋಡು ಸಮೀಪ ನಡೆದಿದೆ.
ಮೃತ ಯುವಕನನ್ನು ತಾಲೂಕಿನ ಚಿಪ್ಳಿ ಗ್ರಾಮದ ಅರ್ಜುನ್ (19) ಎಂದು ಗುರುತಿಸಲಾಗಿದೆ.
Sagara : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ
ಮಾಹಿತಿಯ ಪ್ರಕಾರ, ಅರ್ಜುನ್ ಅವರು ಸಾಗರದಿಂದ ಆನಂದಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಎಸ್.ಎನ್.ನಗರ ಮೂಲದ ಕಾರು ಬಳಸಗೋಡು ಸಮೀಪ ಎದುರಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Also Read>> ದೃಷ್ಟಿದೋಷ ನೌಕರರ ಸಬಲೀಕರಣಕ್ಕೆ ಡಿಜಿಟಲ್ ತರಬೇತಿ | ಮೈಸೂರು ರೈಲ್ವೆ ವಿಶೇಷ ಕಾರ್ಯಕ್ರಮ
ಸ್ಥಳಕ್ಕೆ ಪೊಲೀಸರ ಭೇಟಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


