No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯ ನಿರ್ಮಾಣ: ಸಚಿವ ಮಧು ಬಂಗಾರಪ್ಪ

2025-26ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಮಹತ್ವದ ಕ್ರಮ | ಹಿರೇಕೆರೂರು ಕ್ಷೇತ್ರದ 9 ಶಾಲೆಗಳಿಗೆ 15 ಶೌಚಾಲಯ ನಿರ್ಮಾಣದ ಪ್ರಸ್ತಾವ ಪರಿಶೀಲನೆ

kalpa News by kalpa News
August 20, 2026
in ಬೆಂಗಳೂರು ನಗರ
0
karnataka-1250-govt-schools-1582-toilets-Minister madhu
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 2025-26ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ (Govt School) ಒಟ್ಟು 1,582 ಶೌಚಾಲಯಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಹಿರೇಕೆರೂರು ಶಾಸಕ ಯು.ಬಿ. ಬಣಕಾರ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಇದೇ ವೇಳೆ 2025-26ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 136 ಶೌಚಾಲಯಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.PES Shivamogga

ಶೌಚಾಲಯ ನಿರ್ಮಾಣಕ್ಕೆ ಅನುದಾನದ ವಿವರ

ರಾಜ್ಯದ ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಶಾಲಾ ಕೊಠಡಿ ನಿರ್ಮಾಣಕ್ಕೆ ವಿವಿಧ ಯೋಜನೆಗಳಡಿ ಅನುದಾನ ಲಭ್ಯವಿದೆ ಎಂದು ಸಚಿವ ಮಧು ಬಂಗಾರಪ್ಪ ವಿವರಿಸಿದರು.

ರಾಜ್ಯ ವಲಯ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ 504.23 ಲಕ್ಷ ರೂ. ಅನುದಾನ ಹಾಗೂ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2,317 ಲಕ್ಷ ರೂ. ಅನುದಾನ ಉಳಿಕೆಯಾಗಿರುತ್ತದೆ ಎಂದು ತಿಳಿಸಿದರು.

ಅಲ್ಲದೆ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 544 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

Also read>> ‘ನನ್ನ ವೈಯಕ್ತಿಕ ಜೀವನಕ್ಕೆ ಮೂಗು ತೂರಿಸಬೇಡಿ’: ರಾಮ್‌ದೇವ್ ವಿರುದ್ಧ ಕಂಗನಾ ಗರಂ!

216 ಶಾಲಾ ಕೊಠಡಿಗಳಿಗೆ ಪಿಎಂ ಶ್ರೀ ಯೋಜನೆಯಡಿ ಮಂಜೂರಾತಿ

ಶಾಲಾ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರದ ಪಿಎಂ ಶ್ರೀ ಯೋಜನೆಯಡಿ ಕೂಡ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. 2025-26ನೇ ಸಾಲಿನಲ್ಲಿ ಪಿಎಂ ಶ್ರೀ ಯೋಜನೆಯಡಿ 216 ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4,854.60 ಲಕ್ಷ ರೂ. ಮಂಜೂರಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶೌಚಾಲಯ ಮತ್ತು ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.Kumadvathi College Shikariura

ಹಿರೇಕೆರೂರು ಕ್ಷೇತ್ರಕ್ಕೆ ಏಕೆ ಅನುದಾನ ಸಿಕ್ಕಿಲ್ಲ?

ಮೊದಲ ಹಂತದಲ್ಲಿ ರಾಜ್ಯದ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ ಶೌಚಾಲಯ ನಿರ್ಮಾಣ ಯೋಜನೆಯನ್ನು ಪರಿಗಣಿಸಲಾಗಿದೆ. ಈ ಕಾರಣದಿಂದ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಮೊದಲ ಹಂತದಲ್ಲಿ ಅನುದಾನ ಮಂಜೂರಾಗಿಲ್ಲ ಎಂದು ಸಚಿವರು ಸದನಕ್ಕೆ ಸ್ಪಷ್ಟಪಡಿಸಿದರು.

ಆದಾಗ್ಯೂ, ಉಳಿಕೆ ಇರುವ ಅನುದಾನದಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕೆಲವು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಕೈಗೊಳ್ಳುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ತಿಳಿಸಿದರು.

9 ಶಾಲೆಗಳಿಗೆ 15 ಶೌಚಾಲಯಗಳ ಪ್ರಸ್ತಾವ

ಹಿರೇಕೆರೂರು ವಿಧಾನಸಭಾ ಕ್ಷೇತ್ರದ 2 ಸರ್ಕಾರಿ ಶಾಲೆಗಳಲ್ಲಿ 2 ಬಾಲಕರ ಶೌಚಾಲಯಗಳು ಹಾಗೂ 7 ಸರ್ಕಾರಿ ಶಾಲೆಗಳಲ್ಲಿ 13 ಬಾಲಕಿಯರ ಶೌಚಾಲಯಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಒಟ್ಟು 15 ಶೌಚಾಲಯ ಘಟಕಗಳ ನಿರ್ಮಾಣಕ್ಕೆ ಪ್ರತಿ ಘಟಕಕ್ಕೆ 2 ಲಕ್ಷ ರೂ. ವೆಚ್ಚದಂತೆ ಒಟ್ಟು 30 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದರು.

ಈ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ಉತ್ತರಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆಯನ್ನು ಹಂತ ಹಂತವಾಗಿ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ವಿಶೇಷವಾಗಿ ಬಾಲಕಿಯರಿಗೆ ಅಗತ್ಯವಾದ ಶೌಚಾಲಯ ಸೌಲಭ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಯ ಜತೆಗೆ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ಮೇಲೂ ಗಮನ ಹರಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising DisclaimerKalahamsa Infotech private limited      

Tags: Govt SchoolMinister Madhu BangarappaToiletsಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ನನ್ನ ವೈಯಕ್ತಿಕ ಜೀವನಕ್ಕೆ ಮೂಗು ತೂರಿಸಬೇಡಿ’: ರಾಮ್‌ದೇವ್ ವಿರುದ್ಧ ಕಂಗನಾ ಗರಂ!

Next Post

ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

kalpa News

kalpa News

Next Post
Thirthahalli no electricity supply to anganwadi centre

ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL