ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಭೀಕರ ಅಪಘಾತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.
ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಸಂಚರಿಸುತ್ತಿದ್ದ ಬಸ್ ತೋಟಕ್ಕೆ ನುಗ್ಗಿದ ರಭಸಕ್ಕೆ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅರಬಿಳಚಿ ಗ್ರಾಮದ ರಾಜಪ್ಪ (44) ಎಂಬುವವರು ಮೃತಪಟ್ಟಿದ್ದಾರೆ.
Also read>> ತಪ್ಪಿದ ಭೀಕರ ದುರಂತ: 90 ಆನೆಗಳ ಹಿಂಡು ಹಳಿ ದಾಟುತ್ತಿದ್ದಾಗ ರಾಜಧಾನಿ ಎಕ್ಸ್‌ಪ್ರೆಸ್ ನಿಲ್ಲಿಸಿದ ಅರಣ್ಯ ಸಿಬ್ಬಂದಿ
ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









