ಕಲ್ಪ ಮೀಡಿಯಾ ಹೌಸ್ | ಸೊರಬ | ವರದಿ: ಮಧುರಾಮ್ |
ಮುಂಬರುವ ಗಣೇಶ ಚತುರ್ಥಿ (Ganesha Chaturthi) ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸೊರಬ (Soraba) ಪಟ್ಟಣದಲ್ಲಿ ಇಂದು ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಸೊರಬ ವೃತ್ತ ನಿರೀಕ್ಷಕ ಮಹಾಂತೇಶ್ ಕೆ. ಲಂಬಿ ಹಾಗೂ ಪೊಲೀಸ್ ಉಪನಿರೀಕ್ಷಕ ನವೀನ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ವಿಶೇಷ ಪಡೆ (SAF) ಸಿಬ್ಬಂದಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು.
Also Read>> ಹೋರಾಟದ ನೆನಪು ನಮ್ಮನ್ನು ಪ್ರಗತಿಯತ್ತ ಕೊಂಡೊಯ್ಯುತ್ತದೆ: ಬಿ.ಆರ್. ಜಯಂತ್
ಪಟ್ಟಣದಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸಿ ರೂಟ್ ಮಾರ್ಚ್ ನಡೆಸಿದ್ದು ಸಾರ್ವಜನಿಕರ ಗಮನ ಸೆಳೆಯಿತು. ಮಳೆಯ ನಡುವೆಯೂ ಶಾಂತಿ–ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಪೊಲೀಸರು ಕೈಗೊಂಡ ಮುನ್ನೆಚ್ಚರಿಕಾ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪಟ್ಟಣದ ಪ್ರಮುಖ ರಸ್ತೆಗಳು, ಮಾರುಕಟ್ಟೆ ಪ್ರದೇಶಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಿ, ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಯಿತು. ಸಾರ್ವಜನಿಕರು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸರು ಮನವಿ ಮಾಡಿದರು.
ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸೇರಿದಂತೆ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಶಾಂತಿ–ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










