ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ನಲ್ಲಿ ಕಾರಿನಲ್ಲಿ ಬಂದು ಇಬ್ಬರು ಸಾರ್ವಜನಿಕರನ್ನು ಬೆದರಿಸಿ ಹಲ್ಲೆ ನಡೆಸಿ, ಅವರಿಂದ ಹಣ ಮತ್ತು ಮೊಬೈಲ್ ಫೋನ್ಗಳನ್ನು ದರೋಡೆ (Robbery) ಮಾಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ₹30,500 ನಗದು, ಎರಡು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 544/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 309(6) ರೀತ್ಯಾ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದರು.
Shivamogga : ಕಾರಿನಲ್ಲಿ ಬಂದು ಸಾರ್ವಜನಿಕರಿಗೆ ಬೆದರಿಕೆ
ದೂರಿನ ಪ್ರಕಾರ, ಆರೋಪಿಗಳು ಕಾರಿನಲ್ಲಿ ಹರಕೆರೆ ರಿಂಗ್ ರೋಡ್ಗೆ ಆಗಮಿಸಿ, ಅಲ್ಲಿದ್ದ ಇಬ್ಬರು ಸಾರ್ವಜನಿಕರನ್ನು ಬೆದರಿಸಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಿ, ಹಣ ಹಾಗೂ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು ಎನ್ನಲಾಗಿದೆ.
ಘಟನೆ ಕುರಿತು ದೂರು ದಾಖಲಾದ ಬಳಿಕ ಆರೋಪಿಗಳ ಪತ್ತೆ ಮತ್ತು ದರೋಡೆ ಮಾಡಿದ್ದ ಹಣ ಹಾಗೂ ವಸ್ತುಗಳ ವಶಪಡಿಸಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಮೂವರು ಆರೋಪಿಗಳ ಬಂಧನ
ತನಿಖಾ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕೃತ್ಯ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.
Also Read>> 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಪೊಲೀಸರು
ಬಂಧಿತರನ್ನು ಅಣ್ಣಾನಗರದ ಅಮಾನ್ (24), ಅಶೋಕನಗರದ ಮೊಹಮ್ಮದ್ ಶೆಹಜಾನ್ (22), ಗೋಪಿ ಸರ್ಕಲ್’ದ ಹೇಮಂತ್ ಎಸ್.ಎ. (21)ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆ ಮಾಡಲಾಗಿದ್ದ ₹30,500 ನಗದು ಹಣ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಒಂದು ಇನ್ನೋವಾ ಕಾರನ್ನು ಸಹ ಪೊಲೀಸರು ಅಮಾನತ್ತುಪಡಿಸಿಕೊಂಡಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜೆ. ಕಾರಿಯಪ್ಪ ಹಾಗೂ ಶಿವಮೊಗ್ಗ-ಎ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ತೀಲವಂತ ಎಸ್.ಎಚ್. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ತುಂಗಾನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಕೆ.ಟಿ. ನೇತೃತ್ವದಲ್ಲಿ ಪಿಎಸ್ಐಗಳಾದ ಗಾದಿಲಿಂಗಪ್ಪ ಗೌಡರ್ ಮತ್ತು ರಘುವೀರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತನಿಖಾ ತಂಡದಲ್ಲಿ ಸಿಹೆಚ್ಸಿ ಶ್ಯಾಮ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವಪ್ಪನವರ್, ಪ್ರಶಾಂತ್ ಕುಮಾರ್, ಅಬ್ದುಲ್ ಖಾದರ್ ಜಿಲಾನಿ, ಪ್ರವೀಣ್ ಹಾಗೂ ಎಎಚ್ಸಿ ಪುನೀತ್ ಭಾಗವಹಿಸಿದ್ದರು.
ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್ ಫೋನ್ಗಳನ್ನು ದರೋಡೆ ಮಾಡಿದ್ದ ಪ್ರಕರಣವನ್ನು ಶೀಘ್ರವೇ ಭೇದಿಸಿರುವ ತುಂಗಾನಗರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







