No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈದ್ | ಶಿವಮೊಗ್ಗದಲ್ಲಿ ವ್ಯಾಪಕ ಬಂದೋಬಸ್ತ್ | 3,000 ಸಿಬ್ಬಂದಿ ನಿಯೋಜನೆ, 36 ಚೆಕ್‌ಪೋಸ್ಟ್‌ ಸ್ಥಾಪನೆ

ವೈರಲ್ ರೀಲ್ಸ್‌ಗಳ ಮೇಲೂ ಪೊಲೀಸರ ನಿಗಾ | ರೀಲ್ಸ್‌ ಶೇರ್ ಮಾಡುವ ಮುನ್ನ ಜಾಗ್ರತೆ

kalpa News by kalpa News
August 25, 2026
in ಶಿವಮೊಗ್ಗ
0
shivamogga -tight-security-sp-nikhil-police-route-march

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈದ್ (Eid Milad) ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ಜಿಲ್ಲಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ (Police Security) ಕೈಗೊಂಡಿದೆ. ಜಿಲ್ಲೆಯಾದ್ಯಂತ ಸುಮಾರು 3,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ, ಆರ್‌ಎಎಫ್, ಎಸ್‌ಐಆರ್ ಹಾಗೂ ಡಿಆರ್ ಪಡೆಗಳನ್ನು ಜಿಲ್ಲೆಗೆ ಕರೆಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಈಗಾಗಲೇ ಸಮಗ್ರ ಕಾರ್ಯಾಚರಣೆ ಆರಂಭಿಸಿದೆ. ಕಳೆದ ಮೂರು ವಾರಗಳಿಂದ ವಿವಿಧ ಹಂತಗಳಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದ್ದು, ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

12 ಕೆಎಸ್‌ಆರ್‌ಪಿ, ಆರ್‌ಎಎಫ್ ಸೇರಿ ಹೆಚ್ಚುವರಿ ಪಡೆ

ಈದ್ ಹಬ್ಬದ ಭದ್ರತೆಗಾಗಿ ಇಡೀ ಜಿಲ್ಲೆಯಲ್ಲಿ ಸುಮಾರು 3,000 ಪೊಲೀಸರನ್ನು ನಿಯೋಜಿಸಲಾಗಿದೆ. ಇದಕ್ಕೆ ಪೂರಕವಾಗಿ ಮುಂಜಾಗ್ರತಾ ಕ್ರಮವಾಗಿ 12 ಕೆಎಸ್‌ಆರ್‌ಪಿ ತುಕುಡಿಗಳು, ಒಂದು ಆರ್‌ಎಎಫ್ ತುಕುಡಿ ಹಾಗೂ ಒಂದು ಎಸ್‌ಐಆರ್ ತುಕುಡಿಯನ್ನು ಜಿಲ್ಲೆಗೆ ಕರೆಸಿಕೊಳ್ಳಲಾಗಿದೆ.

ಇದರ ಜೊತೆಗೆ 21 ಡಿಆರ್ ತುಕುಡಿಗಳನ್ನು ಸಹ ನಿಯೋಜಿಸಲಾಗಿದ್ದು, ಜಿಲ್ಲೆಯ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ನಿಖಿಲ್ ತಿಳಿಸಿದರು.

ಕಳೆದ ಮೂರು ವಾರಗಳಿಂದ ಶಾಂತಿ ಸಭೆ

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಮೂರು ವಾರಗಳಿಂದ ನಿರಂತರವಾಗಿ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಮಸೀದಿಗಳ ಮುಖಂಡರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಪೊಲೀಸ್ ಇಲಾಖೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದೆ.PES Shivamogga

ಅಗತ್ಯವಿರುವ ಸಮಸ್ಯೆಗಳಿಗೆ ಪರಿಹಾರ ನೀಡುವುದರ ಜೊತೆಗೆ, ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಅನುಸರಿಸಬೇಕಾದ ಸೂಚನೆಗಳು ಮತ್ತು ಮಾರ್ಗಸೂಚಿಗಳನ್ನು ನೀಡಲಾಗಿದೆ. ಪೊಲೀಸ್ ಇಲಾಖೆಯಿಂದ ಕೈಗೊಳ್ಳಬೇಕಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದರು.

ಧ್ವನಿವರ್ಧಕಗಳ ಡೆಸಿಬಲ್ ಮಿತಿ ಕಡ್ಡಾಯ

ಹಬ್ಬದ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಕಂಟ್ರೋಲ್ ಪ್ಲಾನ್ ಹಾಗೂ ಎಕ್ಸೈಸ್ ಪ್ಲಾನ್ ಸಿದ್ಧಪಡಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಧ್ವನಿವರ್ಧಕಗಳ ಬಳಕೆಯಲ್ಲಿ ನಿಗದಿತ ಡೆಸಿಬಲ್ ಮಿತಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.

Also Read>> ‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ

ಈ ಕುರಿತು ಹೊರಡಿಸಿರುವ ಎಲ್ಲ ಆದೇಶಗಳನ್ನು ಮಸೀದಿ ಹಾಗೂ ವಿವಿಧ ಸಮಿತಿ ಮುಖಂಡರಿಗೆ ತಲುಪಿಸಲಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ನಿಖಿಲ್ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವ ವ್ಯಕ್ತಿಗಳ ವಿರುದ್ಧ ಈಗಾಗಲೇ ವ್ಯಾಪಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 13 ಮಂದಿಯನ್ನು ಗಡಿಪಾರು ಮಾಡಲಾಗಿದ್ದು, ಸಿಆರ್‌ಪಿಸಿ ಸೆಕ್ಷನ್ 110ರ ಅಡಿಯಲ್ಲಿ 312 ಮಂದಿಯ ವಿರುದ್ಧ ಸೆಕ್ಯುರಿಟಿ ಪ್ರೊಸೀಡಿಂಗ್ಸ್ ಆರಂಭಿಸಲಾಗಿದೆ ಎಂದು ಎಸ್‌ಪಿ ನಿಖಿಲ್ ಮಾಹಿತಿ ನೀಡಿದರು.

Shivamogga : ಕೋಮು ಸೌಹಾರ್ದತೆಗೆ ಧಕ್ಕೆ ತಂದರೆ ಕಠಿಣ ಕ್ರಮ

ಮೆರವಣಿಗೆ ಅಥವಾ ಹಬ್ಬದ ಸಂದರ್ಭದಲ್ಲಿ ಇತರೆ ಸಮುದಾಯಗಳಿಗೆ ಧಕ್ಕೆ ತರುವಂತಹ ಹೇಳಿಕೆ, ಕೃತ್ಯ ಅಥವಾ ದ್ವೇಷ ಮೂಡಿಸುವ ಯಾವುದೇ ಪ್ರಯತ್ನ ಕಂಡುಬಂದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಯಲ್ಲಿ ತೊಡಗಿದರೆ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.Kumadvathi College Shikariura

13 ಮಂದಿ ಗಡಿಪಾರು, 312 ಮಂದಿಯ ವಿರುದ್ಧ ಭದ್ರತಾ ಕ್ರಮ

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವ ವ್ಯಕ್ತಿಗಳ ವಿರುದ್ಧ ಈಗಾಗಲೇ ವ್ಯಾಪಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ 13 ಮಂದಿಯನ್ನು ಗಡಿಪಾರು ಮಾಡಲಾಗಿದ್ದು, ಸಿಆರ್‌ಪಿಸಿ ಸೆಕ್ಷನ್ 110ರ ಅಡಿಯಲ್ಲಿ 312 ಮಂದಿಯ ವಿರುದ್ಧ ಸೆಕ್ಯುರಿಟಿ ಪ್ರೊಸೀಡಿಂಗ್ಸ್ ಆರಂಭಿಸಲಾಗಿದೆ ಎಂದು ಎಸ್‌ಪಿ ನಿಖಿಲ್ ಮಾಹಿತಿ ನೀಡಿದರು.

ಹಿಂದಿನ ದಿನಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವವರು, ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿರುವವರು ಹಾಗೂ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರಬಹುದಾದ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೋಮು ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವಲ್ಲಿ ಮಾಧ್ಯಮ ಮಿತ್ರರು ಸೇರಿದಂತೆ ಸಾರ್ವಜನಿಕರು ಸಹಕಾರ ನೀಡಬೇಕು.
-ಎಸ್‌ಪಿ ನಿಖಿಲ್

ವೈರಲ್ ರೀಲ್ಸ್‌ಗಳ ಮೇಲೂ ಪೊಲೀಸರ ನಿಗಾ

ಈದ್ ಹಬ್ಬದ ಹಿನ್ನೆಲೆಯಲ್ಲಿ ಕಾಂತಾರ ಸಿನಿಮಾ ಡೈಲಾಗ್ ಹೊಂದಿರುವ ಕೆಲವು ರೀಲ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್‌ಪಿ ನಿಖಿಲ್, ಈ ವಿಷಯವನ್ನು ಪೊಲೀಸ್ ಇಲಾಖೆ ಗಮನಿಸಿದೆ ಎಂದು ತಿಳಿಸಿದರು.

ವೈರಲ್ ಆಗಿರುವ ರೀಲ್ಸ್ ಹಾಗೂ ಸಾಮಾಜಿಕ ಜಾಲತಾಣದ ವಿಷಯಗಳ ವಿರುದ್ಧ ಡಿಆರ್ ಪ್ರಕ್ರಿಯೆ ಆರಂಭಿಸಲಾಗಿದ್ದು, ಸಂಬಂಧಪಟ್ಟ ಪ್ರಚೋದನಕಾರಿ ಅಥವಾ ವಿವಾದಾತ್ಮಕ ವಿಷಯಗಳನ್ನು ಡಿಲೀಟ್ ಮಾಡಿಸುವ ಜೊತೆಗೆ ಅಗತ್ಯವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್, ವಿಡಿಯೋ ಅಥವಾ ಇತರ ವಿಷಯಗಳನ್ನು ಹಂಚಿಕೊಳ್ಳುವ ಮೊದಲು ಅದರಲ್ಲಿರುವ ವಿಷಯವನ್ನು ಪರಿಶೀಲಿಸಬೇಕು. ದ್ವೇಷ, ಪ್ರಚೋದನೆ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯವನ್ನು ಹಂಚಿಕೊಂಡರೆ ಅಂತಹವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಂತ 36 ಚೆಕ್‌ಪೋಸ್ಟ್‌ಗಳು

ಹಬ್ಬದ ಭದ್ರತಾ ವ್ಯವಸ್ಥೆಯ ಭಾಗವಾಗಿ ಶಿವಮೊಗ್ಗ ಜಿಲ್ಲಾದ್ಯಂತ 36 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅಕ್ರಮ ಸಾಗಾಣಿಕೆ ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ.

ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಶಾಂತಿಯುತ ಈದ್ ಆಚರಣೆಗೆ ಎಸ್‌ಪಿ ಮನವಿ

ಕೋಮು ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವಲ್ಲಿ ಮಾಧ್ಯಮ ಮಿತ್ರರು ಸೇರಿದಂತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಎಸ್‌ಪಿ ನಿಖಿಲ್ ಮನವಿ ಮಾಡಿದರು.

ಎಲ್ಲರೂ ಒಟ್ಟಾಗಿ ಕಾನೂನು ಮತ್ತು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಈದ್ ಹಬ್ಬವನ್ನು ಆಚರಿಸಬೇಕು ಎಂದು ಅವರು ಕರೆ ನೀಡಿದರು.

ಹಬ್ಬದ ಸಂದರ್ಭದಲ್ಲಿ ವದಂತಿಗಳಿಗೆ ಕಿವಿಗೊಡದೆ, ಯಾವುದೇ ಅನುಮಾನಾಸ್ಪದ ಅಥವಾ ಪ್ರಚೋದನಕಾರಿ ವಿಷಯ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಎಸ್‌ಪಿ ನಿಖಿಲ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalpa News Advertising DisclaimerKalahamsa Infotech private limited 

Tags: Eid MiladKSRPPolice SecurityShimogaShivamoggaಈದ್ ಮಿಲಾದ್ಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಆ.26ರಂದು 8 ಗಂಟೆ ವಿದ್ಯುತ್ ವ್ಯತ್ಯಯ

Next Post

ಬೆಂಗಳೂರು | ಬರೋಬ್ಬರಿ 75 ದಿನ MEMU ರೈಲುಗಳ ಸಂಚಾರ ಭಾಗಶಃ ರದ್ದು

kalpa News

kalpa News

Next Post
MEMU Train Services 72 Days Partially Cancelled in Bangalore

ಬೆಂಗಳೂರು | ಬರೋಬ್ಬರಿ 75 ದಿನ MEMU ರೈಲುಗಳ ಸಂಚಾರ ಭಾಗಶಃ ರದ್ದು

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL