ಕಲ್ಪ ಮೀಡಿಯಾ ಹೌಸ್ | ಉಳ್ಳಾಲ |
ಊಟದ (Hotel) ಸಾಂಬಾರಿನಲ್ಲಿ (Cockroach) ಜಿರಳೆ ಬಿದ್ದಿದೆ ಎಂದು ಗ್ರಾಹಕರೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ (Dakshina Kannada) ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ತೊಕ್ಕೊಟ್ಟಿನ ಹೋಟೆಲ್ವೊಂದರ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಹಕರ ದೂರಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಹೋಟೆಲ್ಗೆ ಭೇಟಿ ನೀಡಿ ಅಡುಗೆ ಕೋಣೆ ಸೇರಿದಂತೆ ವಿವಿಧ ಭಾಗಗಳನ್ನು ತಪಾಸಣೆ ನಡೆಸಿದರು.
ಅಡುಗೆ ಕೋಣೆಯಲ್ಲಿ ಅಶುಚಿತ್ವ ಪತ್ತೆ
ಪರಿಶೀಲನೆ ವೇಳೆ ಹೋಟೆಲ್ನ ಅಡುಗೆ ಕೋಣೆಯಲ್ಲಿ ಅಶುಚಿತ್ವ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಹಾರ ಪದಾರ್ಥಗಳ ಸಂಗ್ರಹಣೆ ಮತ್ತು ನಿರ್ವಹಣೆಯಲ್ಲೂ ಸೂಕ್ತ ವ್ಯವಸ್ಥೆ ಇಲ್ಲದಿರುವುದು ತಪಾಸಣೆ ವೇಳೆ ಗಮನಕ್ಕೆ ಬಂದಿದೆ.
ಅಡುಗೆಗೆ ಬಳಸುವ ಹಾಗೂ ಆಹಾರ ದಾಸ್ತಾನು ಮಾಡಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಬದಲಾಗಿ ವಿವಿಧ ಆಹಾರ ಪದಾರ್ಥಗಳನ್ನು ಅಡುಗೆ ಕೋಣೆಯಲ್ಲೇ ಎಲ್ಲೆಂದರಲ್ಲಿ ರಾಶಿ ಹಾಕಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.
Also read>> ಮಾನನಷ್ಟ ಪ್ರಕರಣ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಮಾಲೀಕರಿಗೆ ನೋಟಿಸ್ ಜಾರಿ
ಅಶುಚಿತ್ವದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ತಕ್ಷಣವೇ ಅಡುಗೆ ಕೋಣೆ ಮತ್ತು ಆಹಾರ ಸಂಗ್ರಹಣೆಯ ಸ್ಥಳವನ್ನು ಶುಚಿಗೊಳಿಸಿ, ಆರೋಗ್ಯಕರ ವಾತಾವರಣವನ್ನು ಕಾಪಾಡುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಹಾಗೂ ಪ್ರತ್ಯೇಕವಾಗಿ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಅಡುಗೆ ಕೋಣೆಯಲ್ಲಿ ರಾಶಿ ಹಾಕಲಾಗಿದ್ದ ವಸ್ತುಗಳನ್ನು ತೆರವುಗೊಳಿಸಿ, ಅಗತ್ಯ ಸ್ವಚ್ಛತಾ ಕ್ರಮಗಳನ್ನು ಕೈಗೊಳ್ಳುವಂತೆ ಹೋಟೆಲ್ ಮಾಲೀಕರಿಗೆ ಸೂಚಿಸಲಾಗಿದೆ.
ADC ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಎಚ್ಚರಿಕೆ
ನಿಗದಿತ ಆಹಾರ ಸುರಕ್ಷತಾ ಮತ್ತು ಸ್ವಚ್ಛತಾ ನಿಯಮಗಳನ್ನು ಪಾಲಿಸದಿದ್ದರೆ ಹೆಚ್ಚುವರಿ ಜಿಲ್ಲಾಧಿಕಾರಿ (ADC) ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರುವ ಹಾಗೂ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್ ಮತ್ತು ಆಹಾರ ವ್ಯಾಪಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ.
ಸಾಂಬಾರಿನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ ನಡೆದ ಈ ದಿಢೀರ್ ತಪಾಸಣೆ ತೊಕ್ಕೊಟ್ಟು ಪ್ರದೇಶದಲ್ಲಿ ಚರ್ಚೆಗೆ ಕಾರಣವಾಗಿದೆ. ಆಹಾರ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಆಹಾರ ವ್ಯಾಪಾರಿಗಳಿಗೆ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








