ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ತ್ರಿ ಎ ಸೈಡ್ ವಾಲಿಬಾಲ್ (Volleyball) ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ 14 ವರ್ಷ ವಯೋಮಿತಿಯ ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ (Karkala) ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಶಾಲೆಯ 7ನೇ ತರಗತಿಯ ತ್ರಿಷ್ಮಾ, ಕೆಟ್ಲಿನ್ ಏಂಜಲ್ ಪಿಂಟೊ ಹಾಗೂ 6ನೇ ತರಗತಿಯ ನಿಶಾ ಡಿ’ಸೋಜ ಅವರು ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ ಮಹಾರಾಷ್ಟ್ರದಲ್ಲಿ ನಡೆಯಲಿದ್ದು, ಕರ್ನಾಟಕವನ್ನು ಪ್ರತಿನಿಧಿಸಿ ಈ ಮೂವರು ವಿದ್ಯಾರ್ಥಿನಿಯರು ಸ್ಪರ್ಧಿಸಲಿದ್ದಾರೆ.
Also read>> ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.3, 4, 6, 7ರಂದು ಸರ್ಪಸಂಸ್ಕಾರ ಸೇವೆ ಇಲ್ಲ
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಹಾಗೂ ಕರ್ನಾಟಕಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










