ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಭದ್ರಾವತಿ (Bhadravathi) ನಗರ ಉಪವಿಭಾಗ ಘಟಕ–1 ಮತ್ತು ಘಟಕ–3ರ ಶಾಖಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2ರಿಂದ 4ರವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.
Also read>> ಕ್ರೈಸ್ಟ್‌ಕಿಂಗ್ ಶಾಲೆಯ ಮೂವರು ವಿದ್ಯಾರ್ಥಿನಿಯರು ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಈ ಮೂರು ದಿನಗಳ ಕಾಲ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Bhadravathi : ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಬೊಮ್ಮನಕಟ್ಟೆ, ತಿಮ್ಲಾಪುರ, ಮೂಲೆಕಟ್ಟೆ, ಹೊಸಬುಳ್ಳಾಪುರ, ಹಳೇಬುಳ್ಳಾಪುರ, ಬೈಪಾಸ್ ರಸ್ತೆ, ಮಿಲ್ಕ್ ಕ್ಯಾಂಪ್, ಹುಡ್ಕೋ ಕಾಲೋನಿ, ನ್ಯೂಟೌನ್, ನ್ಯೂ ಕಾಲೋನಿ, ಆಂಜನೇಯ ಅಗ್ರಹಾರ, ವಿದ್ಯಾ ಮಂದಿರ, ಗಣೇಶ ಕಾಲೋನಿ, ಜನ್ನಾಪುರ, ಕಿತ್ತೂರು ಚೆನ್ನಮ್ಮ ಬಡಾವಣೆ, ರಾಜಪ್ಪ ಬಡಾವಣೆ, ಆನೇಕೊಪ್ಪ, ಪಂಪ್‌ಹೌಸ್, ಎಂ.ಪಿ.ಎಂ. ಬಡಾವಣೆ, ಹಿರಿಯೂರು, ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್ ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನಹಳ್ಳಿ, ಗೊಂದಿ, ಕಾಳನಕಟ್ಟಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯಲಿರುವುದರಿಂದ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










