No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಚಾಮರಾಜನಗರ | ಸೆ.6ರಂದು 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ

kalpa News by kalpa News
September 2, 2026
in News, ಚಾಮರಾಜನಗರ
0
Krishna Janmashtami Utsava Chamarajanagar September 6
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಗಡಿ ಭಾಗವಾದ ಚಾಮರಾಜನಗರದಲ್ಲಿ (Chamarajanagara) ಶ್ರೀಕೃಷ್ಣ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ (Krishna Janmashtami) ಹಾಗೂ ಮೊಸರು ಮಡಿಕೆ ಒಡೆಯುವ ಉತ್ಸವವನ್ನು ಸೆಪ್ಟೆಂಬರ್ 6ರಂದು ಭಾನುವಾರ ಸಂಜೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಸಮೀಪದ ರಥದ ಬೀದಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಜರುಗಲಿದೆ.

ಉತ್ಸವದ ಅಂಗವಾಗಿ ಮೊಸರು ಮಡಿಕೆ ತಯಾರಿಕೆಗೆ ಮುನ್ನ ಹೆಗ್ಗೋಟಾರ ಗ್ರಾಮದ ಮಡಿಕೆ ನಂಜಪ್ಪನವರ ಗುಡಿ ಕೈಗಾರಿಕೆಯಲ್ಲಿ ವಿಶೇಷ ಮೃತ್ತಿಕಾ ಪೂಜೆ (ಮಣ್ಣಿನ ಪೂಜೆ) ಹಾಗೂ ಗೋ ಪೂಜೆಯನ್ನು ನೆರವೇರಿಸಲಾಯಿತು. ಸಂಪ್ರದಾಯಬದ್ಧವಾಗಿ ಮಣ್ಣನ್ನು ಪೂಜಿಸಿ, ಭಕ್ತಿಭಾವದಿಂದ ಮೊಸರು ಮಡಿಕೆಗಳನ್ನು ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.CM D.K. Shivakumar Speech On Gruhalakshmi

ಮಣ್ಣಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ

ಶ್ರೀ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಮಾತನಾಡಿ, ಕಳೆದ 16 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮೊಸರು ಮಡಿಕೆ ಒಡೆಯುವ ಉತ್ಸವವನ್ನು ವೈಭವದಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಮೊಸರು ಮಡಿಕೆ ತಯಾರಿಕೆಯ ಹಿನ್ನೆಲೆಯಲ್ಲಿ ಹೆಗ್ಗೋಟಾರ ಗ್ರಾಮದಲ್ಲಿ ವಿಶೇಷವಾಗಿ ಆಯ್ಕೆ ಮಾಡಲಾದ ಮಣ್ಣಿಗೆ ಪೂಜೆ ಸಲ್ಲಿಸಿ, ಅದರಿಂದ ಮಡಿಕೆಗಳನ್ನು ತಯಾರಿಸಲಾಗುತ್ತದೆ. ಪ್ರತಿವರ್ಷ ಭೂತಾಯಿಯ ಆಶೀರ್ವಾದದೊಂದಿಗೆ ಮಡಿಕೆ ತಯಾರಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಮಣ್ಣಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ತಾಯಿ ಸ್ವರೂಪವಾದ ಭೂಮಿಯನ್ನು ಭೂದೇವಿಯ ರೂಪದಲ್ಲಿ ಪೂಜಿಸುವ ಪರಂಪರೆ ನಮ್ಮಲ್ಲಿದೆ. ಮಣ್ಣು ಫಲವತ್ತತೆ, ಶಕ್ತಿ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಹಾಗೂ ಏಕತೆಯ ಸಂಕೇತವಾಗಿದೆ. ದೈವಿಕತೆಯ ಜೊತೆಗೆ ಮಣ್ಣಿನಲ್ಲಿ ಔಷಧೀಯ ಗುಣಗಳ ರಹಸ್ಯವೂ ಅಡಗಿದೆ. ಆದ್ದರಿಂದ ತಾಯಿ ಭೂದೇವಿಯನ್ನು ಸ್ಮರಿಸಿ, ಭೂತಾಯಿಯನ್ನು ಗೌರವಿಸುವ ಸಂಪ್ರದಾಯವನ್ನು ಮುಂದುವರಿಸುವ ಉದ್ದೇಶದಿಂದ ಮೃತ್ತಿಕಾ ಪೂಜೆಯನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.

 Shri Krishna Janmashtami: ಶ್ರೀಕೃಷ್ಣನ ಭವ್ಯ ಮೆರವಣಿಗೆ

ಸೆಪ್ಟೆಂಬರ್ 6ರಂದು ಮಧ್ಯಾಹ್ನ 2.30ಕ್ಕೆ ಶ್ರೀಕೃಷ್ಣನ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ಶ್ರೀ ಚಾಮರಾಜೇಶ್ವರ ದೇವಸ್ಥಾನದ ಪ್ರದಕ್ಷಿಣಾ ಪಥದಿಂದ ಆರಂಭವಾಗುವ ಮೆರವಣಿಗೆ ಅಗ್ರಹಾರ, ಶ್ರೀ ಭುವನೇಶ್ವರಿ ವೃತ್ತದ ಮಾರ್ಗವಾಗಿ ಸಾಗಿ ರಥದ ಬೀದಿಯಲ್ಲಿರುವ ವೇದಿಕೆಯನ್ನು ತಲುಪಲಿದೆ.

ಮೆರವಣಿಗೆಯಲ್ಲಿ ಭಜನೆ, ನಾದಸ್ವರ, ಯುವಕರ ತಂಡಗಳ ಭಾಗವಹಿಸುವಿಕೆ ಸೇರಿದಂತೆ ವಿವಿಧ ಆಕರ್ಷಣೆಗಳು ಇರಲಿವೆ. ಬೆಣ್ಣೆ ಹಾಗೂ ಮೊಸರು ಗಡಿಕೆಗಳನ್ನು ಒಳಗೊಂಡ ಮೆರವಣಿಗೆಯೂ ನಡೆಯಲಿದ್ದು, ಶ್ರೀಕೃಷ್ಣನ ಭಕ್ತಿಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ.Kalahamsa Infotech private limited

ರಂಗೋಲಿ, ಹೂ ಕಟ್ಟುವ ಸ್ಪರ್ಧೆ

ಉತ್ಸವದ ಅಂಗವಾಗಿ ಸೆಪ್ಟೆಂಬರ್ 6ರಂದು ಮಧ್ಯಾಹ್ನ 1.30ಕ್ಕೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಸಮೀಪದ ರಥದ ಬೀದಿಯಲ್ಲಿ ಭವ್ಯ ವೇದಿಕೆಯಲ್ಲಿ ರಂಗೋಲಿ ಸ್ಪರ್ಧೆ ಹಾಗೂ ಹೂ ಕಟ್ಟುವ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Also read>> ಭದ್ರಾವತಿ ಪೊಲೀಸರಿಗೆ ಬಲ; 4 ಬುಲೆರೋ ನಿಯೋ ವಾಹನ ಹಸ್ತಾಂತರ : ಶಾಸಕರ ಪ್ರಯತ್ನದ ಫಲ

ಕಬಡ್ಡಿ, ಕೆಸರುಗದ್ದೆ ಓಟಕ್ಕೂ ಅವಕಾಶ

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಮಡಿಕೆ ಒಡೆಯುವ ಉತ್ಸವದ ಅಂಗವಾಗಿ ಶ್ರೀಕೃಷ್ಣ ಕಬಡ್ಡಿ ಪಂದ್ಯಾವಳಿ ಹಾಗೂ ಕೆಸರುಗದ್ದೆ ಓಟ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸುವ ನಿರೀಕ್ಷೆಯಿದೆ.

ಭಕ್ತಿಗೀತೆ, ನೃತ್ಯ ಕಾರ್ಯಕ್ರಮ

ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಗಾಯಕರಾದ ಜ. ಸುರೇಶ್ ನಾಗ್ ಹರದನಹಳ್ಳಿ ಮತ್ತು ತಂಡದವರಿಂದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

ಇದರ ಜೊತೆಗೆ ನಾಟ್ಯಕಲಾ ಸರಸ್ವತಿ ತಂಡ, ಅವತಾರ ಗ್ರೂಪ್ ಡ್ಯಾನ್ಸ್ ಹಾಗೂ ವಿವಿಧ ತಂಡಗಳ ಕಲಾವಿದರಿಂದ ಶ್ರೀಕೃಷ್ಣನ ಕುರಿತಾದ ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಧಾರ್ಮಿಕ ಭಕ್ತಿ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಗಮವಾಗಿ ಉತ್ಸವ ನಡೆಯಲಿದೆ.Kumadvathi College Shikariura

ಮಣ್ಣು ಆನಂದದ ಸಂಕೇತ: ಪ್ರದೀಪ್ ದೀಕ್ಷಿತ್

ಮೃತ್ತಿಕಾ ಪೂಜೆಯನ್ನು ನೆರವೇರಿಸಿದ ಪ್ರದೀಪ್ ದೀಕ್ಷಿತ್ ಮಾತನಾಡಿ, ಮಣ್ಣು ಆನಂದದ ಸಂಕೇತವಾಗಿದೆ. ಮಣ್ಣಿನಲ್ಲಿ ಹಲವಾರು ಬಗೆಯ ಶಕ್ತಿಯನ್ನು ಕಾಣಬಹುದು. ನಮ್ಮ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಮಣ್ಣಿಗೆ ವಿಶೇಷವಾದ ಸ್ಥಾನವಿದ್ದು, ಶ್ರೀಕೃಷ್ಣನ ಉತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಸಾರ್ವಜನಿಕರ ಸಹಭಾಗಿತ್ವಕ್ಕೆ ಮನವಿ

16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಮಡಿಕೆ ಒಡೆಯುವ ಉತ್ಸವವನ್ನು ಯಶಸ್ವಿಗೊಳಿಸಲು ಚಾಮರಾಜನಗರದ ಸಾರ್ವಜನಿಕರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀಕೃಷ್ಣ ಪ್ರತಿಷ್ಠಾನ ಮನವಿ ಮಾಡಿದೆ.

ಧಾರ್ಮಿಕ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಶಿಷ್ಟವಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದ್ದು, ನಗರದ ರಥದ ಬೀದಿಯಲ್ಲಿ ಉತ್ಸವದ ಸಂಭ್ರಮ ಕಳೆಗಟ್ಟುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಗ್ರಾಮದ ಮಡಿಕೆ ನಂಜಪ್ಪ, ಶಿವ ಶೆಟ್ಟಿ ಹಾಗೂ ಶ್ರೀಕೃಷ್ಣ ಪ್ರತಿಷ್ಠಾನದ ಬಿ.ಕೆ. ಆರಾಧ್ಯ ಸೇರಿದಂತೆ ಗಣ್ಯರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news PES ShivamoggaKalpa News Advertising Disclaimer

Tags: BangaloreChamarajnagarKrishna Janmashtamiಚಾಮರಾಜನಗರಶ್ರೀಕೃಷ್ಣ ಜನ್ಮಾಷ್ಟಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಫುಡ್‌ಕೋರ್ಟ್‌’ನಲ್ಲಿ AC ಮೈತ್ರಿ ದಿಢೀರ್ ತಪಾಸಣೆ | ಪರವಾನಗಿ ರದ್ದು ಎಚ್ಚರಿಕೆ! ಕಾರಣವೇನು?

Next Post

Gen Z ಗಳನ್ನು ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಹೊಸ ತಂತ್ರ

kalpa News

kalpa News

Next Post
narendra modi-srcc-visit-teachers-day-gen-z-interaction

Gen Z ಗಳನ್ನು ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಹೊಸ ತಂತ್ರ

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL