ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
Thirthahalli ತಾಲ್ಲೂಕಿನ ಹಣಗೆರೆ ಕಟ್ಟೆ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ಇಂದು ನಡೆದ ಕಾಣಿಕೆ ಹುಂಡಿ (Donation Box) ಎಣಿಕೆ ಕಾರ್ಯದಲ್ಲಿ ಒಟ್ಟು ₹1,01,73,650 ನಗದು ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತಾದಿಗಳು ಕಾಣಿಕೆಯಾಗಿ ಅರ್ಪಿಸಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳೂ ಪತ್ತೆಯಾಗಿವೆ.
ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡ ಬಳಿಕ ಸಂಗ್ರಹವಾದ ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳಿಂದ ಹುಂಡಿ ಎಣಿಕೆ ಪರಿಶೀಲನೆ
ಹುಂಡಿ ಎಣಿಕೆ ಕಾರ್ಯದ ವೇಳೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಿದರು.
ಹುಂಡಿ ಎಣಿಕೆ ಪ್ರಕ್ರಿಯೆಯು ನಿಯಮಾನುಸಾರ ನಡೆಯುತ್ತಿರುವುದನ್ನು ಅಧಿಕಾರಿಗಳು ಪರಿಶೀಲಿಸಿ, ಸಂಗ್ರಹವಾದ ಕಾಣಿಕೆ ಮೊತ್ತದ ಲೆಕ್ಕಪತ್ರ ಹಾಗೂ ಬ್ಯಾಂಕ್‌ಗೆ ಹಣ ಜಮಾ ಮಾಡುವ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದರು.
Also read>> ಭದ್ರಾವತಿ | ಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿನಲ್ಲಿ ಅಡಗಿದ ರೌಡಿಶೀಟರ್ | ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?
Thirthahalli : ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿ
ಈ ಸಂದರ್ಭದಲ್ಲಿ ತಹಸೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರೆಹಳ್ಳಿ ರಾಮಪ್ಪ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಇದರೊಂದಿಗೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಭಕ್ತಾದಿಗಳಿಂದ ಸಂಗ್ರಹವಾದ ಕಾಣಿಕೆ ಮೊತ್ತವನ್ನು ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ನಿರ್ವಹಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








