ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಗಣೇಶ ಹಬ್ಬದ (Ganesh Festival) ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿ:14/09/2026 ರಿಂದ ದಿ:13/10/2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
Also read>> ಸರಳವಾಗಿ ಆರೋಗ್ಯದ ಮಾಹಿತಿ ತಲುಪಿಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು: ಡಾ. ಆಶಾಕಿರಣ್
ಸೆ.14 ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.
ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










