No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ

kalpa News by kalpa News
September 9, 2026
in ಶಿವಮೊಗ್ಗ
0
kasturirangan-report-esuru-shikaripura-padayatre-madhu
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಈ ಪಾದಯಾತ್ರೆಯ ಕುರಿತು ಮಾಹಿತಿ ನೀಡಿದ್ದಾರೆ.Kumadvathi College Shikariura

ಈಸೂರಿನಿಂದ ಪಾದಯಾತ್ರೆ

ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು.

ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ್ದರು. ಆದರೂ ಕೇಂದ್ರ ಸರ್ಕಾರ ಪದೇಪದೇ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದ್ದು, ಇದೀಗ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

1,576 ಗ್ರಾಮಗಳ ರೈತರ ಬದುಕಿನ ಮೇಲೆ ಪರಿಣಾಮ

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ವ್ಯಾಪ್ತಿಯ 1,576 ಗ್ರಾಮಗಳ ರೈತರ ಬದುಕು ಅತಂತ್ರವಾಗಲಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ 484 ಗ್ರಾಮಗಳ ಜನರ ಬದುಕಿನ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಕೃಷಿ ಚಟುವಟಿಕೆಗಳ ಮೇಲೂ ದೊಡ್ಡ ಹೊಡೆತ ಬೀಳಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.

ಮಲೆನಾಡಿನ ರೈತರು ಪರಿಸರದೊಂದಿಗೆ ಬೆರೆತು ಬದುಕುತ್ತಿದ್ದಾರೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ದೆಹಲಿಯಲ್ಲಿ ಕುಳಿತುಕೊಂಡು ಅಡಕೆ ಮರಗಳನ್ನು ಕಾಡು ಎಂದು ಪರಿಗಣಿಸುವವರಿಗೆ ಮಲೆನಾಡಿನ ವಾಸ್ತವ ಪರಿಸ್ಥಿತಿಯ ಅರಿವಿದೆಯೇ? ರೈತರ ಬದುಕಿನ ಬಗ್ಗೆ ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿರುವುದು ದುರದೃಷ್ಟಕರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.PES Shivamogga

ಬಂಗಾರಪ್ಪ ಅವರ ಹೋರಾಟದ ಪರಂಪರೆಯಲ್ಲಿ ಮಲೆನಾಡಿನ ಜನರ ಪರ ನಿಲ್ಲುತ್ತೇವೆ

ನಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಕಾವೇರಿ ನೀರಿನ ವಿಚಾರದಲ್ಲಿ ವಿಶೇಷ ಅಧಿವೇಶನ ಕರೆದು ರಾಜ್ಯದ ಹಿತ ಕಾಪಾಡುವ ದೃಢ ನಿರ್ಧಾರ (ಸುಗ್ರೀವಾಜ್ಞೆ) ಕೈಗೊಂಡಿದ್ದರು. ಅದೇ ಹೋರಾಟದ ಪರಂಪರೆಯಲ್ಲಿ ಇಂದು ಮಲೆನಾಡಿನ ಜನರ ಬದುಕು, ರೈತರ ಹಕ್ಕು ಮತ್ತು ಪರಿಸರದ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸುತ್ತಾ. ರಾಜ್ಯದ ಹಿತದ ವಿಚಾರದಲ್ಲಿ ಸರ್ಕಾರ ಗಂಭೀರವಾಗಿ ಸ್ಪಂದಿಸುತ್ತಿರುವುದು ಸ್ವಾಗತಾರ್ಹ ಎಂದರು.

Also read>> ಗಣೇಶ ಹಬ್ಬಕ್ಕೆ ಕಠಿಣ ನಿಯಮ: ಡಿಜೆ, ಸಿಡಿಮದ್ದು ಬಳಕೆಗೆ ನಿಷೇಧ

ಬಿಜೆಪಿಯ ನಿಲುವು ಏನು?

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿಯವರು ತಮ್ಮ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ತಲೆಬುಡವಿಲ್ಲದೆ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಲೆನಾಡಿನ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ರೈತರ ಬದುಕಿನ ಪರವಾಗಿ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮುಂದೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಸಚಿವರು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟವನ್ನು ಹಂತ ಹಂತವಾಗಿ ರೂಪಿಸಲಾಗುತ್ತಿದೆ. ಇತ್ತೀಚೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಗಿದೆ. ಇದೀಗ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಡು ಉಳಿಯಬೇಕು, ರೈತರೂ ಉಳಿಯಬೇಕು

ಕಾಡು ಉಳಿಯಬೇಕು, ರೈತರು ಉಳಿಯಬೇಕು, ಪರಿಸರವೂ ಉಳಿಯಬೇಕು ಹಾಗೂ ಮಲೆನಾಡಿನ ಜನರ ಬದುಕೂ ಉಳಿಯಬೇಕು. ಇದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರ ಬದುಕನ್ನು ಅತಂತ್ರಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿಕಾರಿಪುರದಲ್ಲಿ ನಡೆಯಲಿರುವ ಹೋರಾಟವನ್ನು ಯಶಸ್ವಿಗೊಳಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ಮಲೆನಾಡಿನ ನೆಲ, ಜಲ, ಕೃಷಿ, ಪರಿಸರ ಮತ್ತು ರೈತರ ಬದುಕಿನ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: Kasturi Rangan ReportMinister Madhu Bangarappaಕಸ್ತೂರಿ ರಂಗನ್ ವರದಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣೇಶ ಹಬ್ಬಕ್ಕೆ ಕಠಿಣ ನಿಯಮ: ಡಿಜೆ, ಸಿಡಿಮದ್ದು ಬಳಕೆಗೆ ನಿಷೇಧ

Next Post

ಎಪಿಎಂಸಿ ಮಾರುಕಟ್ಟೆಗೆ ಸಿಎಂ ದಿಢೀರ್ ಭೇಟಿ: ಹೈಕೋರ್ಟ್ ಶ್ಲಾಘನೆ

kalpa News

kalpa News

Next Post
CM surprise visit - APMC market - High Court

ಎಪಿಎಂಸಿ ಮಾರುಕಟ್ಟೆಗೆ ಸಿಎಂ ದಿಢೀರ್ ಭೇಟಿ: ಹೈಕೋರ್ಟ್ ಶ್ಲಾಘನೆ

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL