No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಗೋಕರ್ಣ | ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ : ರಾಘವೇಶ್ವರ ಶ್ರೀ

kalpa News by kalpa News
September 16, 2026
in News, ಉತ್ತರ ಕನ್ನಡ
0
Gokarna longevity through ushapana and nasapana
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ​ಗೋಕರ್ಣ (ಉತ್ತರ ಕನ್ನಡ)  |

ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು (Water) ಸೇವಿಸುವ ‘ಉಷಃಪಾನ’ ಹಾಗೂ ‘ನಾಸಾಪಾನ’ ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಉಷಃಪಾನ – ನಾಸಾಪಾನ’ ಕುರಿತಾಗಿ ಪ್ರವಚನ ಅನುಗ್ರಹಿಸಿದರು.

ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನ ಎಂಟು ಬೊಗಸೆ ನೀರನ್ನು ಸೇವಿಸುವುದನ್ನು ‘ಉಷಃಪಾನ’ ಎಂದು ಕರೆಯಲಾಗಿದ್ದು, ಆಯುರ್ವೇದ ಹಾಗೂ ಯೋಗಶಾಸ್ತ್ರದಲ್ಲಿ ಈ ಕುರಿತಾಗಿ ಉಲ್ಲೇಖಗಳಿದ್ದು, ಪ್ರತಿದಿನ ಇದನ್ನು ಆಚರಿಸುವಂತೆ ಸೂಚಿಸಲಾಗಿದೆ. ಉಷಃಪಾನದಿಂದ ಎಲ್ಲಾ ರೋಗಗಳ ನಿವಾರಣೆಯ ಜೊತೆಗೆ ಮುಪ್ಪನ್ನು ಇದು ನಿವಾರಿಸುತ್ತದೆ ಮತ್ತು ಮನುಷ್ಯನು ಶತಾಯುಷಿಯಾಗುತ್ತಾನೆ ಎಂದು ಇದರ ಉಪಯೋಗವನ್ನು ಹೇಳಿದ್ದು, ಬೆಳಗ್ಗೆ ಎದ್ದು ಶೌಚಕ್ರಿಯೆಯನ್ನು ಮಾಡುವುದಕ್ಕೂ ಮೊದಲೇ ಇದನ್ನು ಆಚರಿಸಬೇಕು ಎಂದರು.

dk shivakumar led karnataka government 100 days celebration

ಉಷಃಪಾನವನ್ನು ಒಂದನೇ ವಯಸ್ಸಿಗೇ ಆರಂಭಿಸಬಹುದಾಗಿದ್ದು, ಹಂತಹಂತವಾಗಿ ನೀರಿನ ಸೇವನೆಯನ್ನು ಹೆಚ್ಚಿಸುತ್ತಾ ಹೋಗಬೇಕು. ಹದಿನಾರನೇಯ ವಯಸ್ಸಿಗೆ ಬರುವಾಗ ಅದು ಎಂಟು ಬೊಗಸೆ ಆಗುವಂತೆ ಹೊಂದಿಸಿಕೊಳ್ಳುಬೇಕು. ಈ ಕ್ರಿಯೆಗಾಗಿ ನೀರನ್ನು ರಾತ್ರಿ ಶೇಖರಿಸಿಡುವಾಗ ತಾಮ್ರ ಅಥವಾ ಯಾವುದಾದರೂ ಉತ್ತಮ ಪಾತ್ರೆಯಲ್ಲಿಯೇ ನೀರನ್ನು ಶೇಖರಿಸಿಡಬೇಕು ಎಂದು ಕಿವಿಮಾತು ಹೇಳಿದರು.

ಸೂರ್ಯೋದಯಕ್ಕೂ ಪೂರ್ವದಲ್ಲಿ ಮೂಗಿನ ಹೊಳ್ಳೆಗಳಿಂದ ನೀರನ್ನು ಸೇವಿಸುವ ಕ್ರಮಕ್ಕೆ ‘ನಾಸಾಪಾನ’ ಎಂದು ಯೋಗ ಹಾಗೂ ಆಯುರ್ವೇದದಲ್ಲಿ ಉಲ್ಲೇಖವಿದ್ದು, ಇದರಿಂದ ಬುದ್ದಿ ಚುರುಕಾಗುವ ಜೊತೆಗೆ ಕಣ್ಣಿನ ದೃಷ್ಟಿ ಹೆಚ್ಚುತ್ತದೆ. ಇದಕ್ಕೆ ಜಲ ನೇತಿ, ಜಲ ನಸ್ಯ ಎಂಬ ಹೆಸರೂ ಇದ್ದು, ಯೋಗಶಾಸ್ತ್ರವು ಪ್ರತಿದಿನ ಇದನ್ನು ಆಚರಿಸುವುದರಿಂದ ದಿವ್ಯದೃಷ್ಟಿ ಪ್ರಾಪ್ತವಾಗುತ್ತದೆ ಎಂದು ಹೇಳಿದೆ. ನಿಧಾನವಾಗಿ ಅಭ್ಯಾಸ ಮಾಡುತ್ತಾ ಕಲಿಯಬೇಕಾದ ಕ್ರಿಯೆ ಇದಾಗಿದ್ದು, ಈ ಕ್ರಮದಲ್ಲಿ ಸುಮಾರು ಮೂರು ಬೊಗಸೆ ನೀರನ್ನು ಸೇವಿಸಬೇಕು. ಹಾಗೆಯೇ ಕೆಲವು ಸಂದರ್ಭದಲ್ಲಿ ಈ ಕ್ರಿಯೆಯನ್ನು ಮಾಡಬಾರದು ಎಂಬ ನಿಷೇಧವಿದ್ದು, ಎಚ್ಚರಿಕೆಯಿಂದ ಇದನ್ನು ಮಾಡಬೇಕು ಎಂದು ನೇತಿಯ ಕ್ರಮವನ್ನು ವಿವರಿಸಿದರು.

Also Read>> ಮಂಗಳೂರು | ಸೆ.18ರಂದು ಸಚಿವ ಸಂಪುಟ ಸಭೆ: ಗಣ್ಯರ ಸಂಚಾರ ಹಿನ್ನೆಲೆ ಟ್ರಾಫಿಕ್ ವ್ಯತ್ಯಯ ಸಾಧ್ಯತೆ

ಮಿಂಚು, ಸಮುದ್ರದ ಆಳದಲ್ಲಿರುವ ವಡವಾಗ್ನಿ ಹಾಗೂ ಜಠರಾಗ್ನಿಗಳಿಗೆ ನೀರೇ ಇಂಧನವಾಗಿದ್ದು, ನೀರಿನಿಂದಲೇ ಈ ಮೂರು ಅಗ್ನಿಗಳುಗಳು ಪ್ರಜ್ವಲಿಸುತ್ತದೆ. ಹಾಗಾಗಿ ಉಷಃಪಾನದಿಂದ ಜಠರಾಗ್ನಿ ಮಂದವಾಗುವುದಿಲ್ಲ ಎಂದ ಶ್ರೀಗಳು, ಈ ಪ್ರವಚನ ಮಾಲಿಕೆಯಲ್ಲಿ ಉಲ್ಲೇಖಿಸಿರುವ ವಿಚಾರಗಳು ಕೇವಲ ಪುಸ್ತಕದ ಬದನೇ ಕಾಯಿಯಲ್ಲ. ಇಲ್ಲಿ ಉಲ್ಲೇಖಿಸುತ್ತಿರುವ ಹಲವು ವಿಚಾರಗಳು ನಾವು ಆಚರಿಸಿ ನೋಡಿರುವ ಅಂಶಗಳನ್ನೇ ಉಲ್ಲೇಖಿಸುತ್ತಿದ್ದು, ಸಮಾಜ ಇದನ್ನು ಅಳವಡಿಸಿಕೊಂಡು ಆರೋಗ್ಯಯುತವಾಗಬೇಕು ಎಂದು ಅಭಿಪ್ರಾಯಪಟ್ಟರು.PES Shivamogga

ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಭಟ್, ವೇ.ಬ್ರ. ರವೀಶ್ ತಂತ್ರಿ, ಹಿರಿಯ ಸಾಹಿತಿ ಭುವನೇಶ್ವರೀ ಹೆಗಡೆ ಉಪಸ್ಥಿತರಿದ್ದು, ಶ್ರೀಗಳ ಆಶೀರ್ವಾದ ಪಡೆದರು. ಶಿವರಾಮಚಂದ್ರ ಶಿವಾಲ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ರಾಜಾರಾಮ ಮರಿಗದ್ದೆ ದಂಪತಿಗಳು ದಿನಪ್ರಧಾನರಾಗಿ ಉಪಸ್ಥಿತರಿದ್ದರು.

Gokarna : ಘನಪಾರಾಯಣ ಪ್ರಾರಂಭ

ಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೃಷ್ಣ ಯಜುರ್ವೇದದ ತೈತ್ತಿರೀಯ ಶಾಖೆಯ ಘನಪಾರಾಯಣವು ವೇ.ಬ್ರ. ಪಳ್ಳತ್ತಡ್ಕ ಶಂಕರನಾರಾಯಣ ಭಟ್ಟ ಘನಪಾಠಿಗಳ ನೇತೃತ್ವದಲ್ಲಿ ನಾಡಿನ ಪ್ರಮುಖ ಹತ್ತು ಘನಪಾಠಿಗಳಿಂದ ಪ್ರಾರಂಭವಾಯಿತು. ಇಂದಿನಿಂದ ಸೆಪ್ಟೆಂಬರ್ ೨೩ರ ವರೆಗೆ ಘನಪಾರಾಯಣ ನಡೆಯಲಿದ್ದು, ವಿಶಿಷ್ಟವಾದ ಕ್ರಮದಲ್ಲಿ ವೇದ ಮಂತ್ರಗಳನ್ನು ಉಚ್ಚರಿಸುವ ಪದ್ಧತಿ ಘನಪಾಠವಾಗಿದೆ. ವೇದ ಪಾರಾಯಣದಲ್ಲಿ ಒಟ್ಟು 8 ಪ್ರಕಾರದ ವಿಕೃತಿ ಪಾಠಗಳಿದ್ದು, ಅವುಗಳಲ್ಲಿ ಘನಪಾಠವು ಅತ್ಯಂತ ಶ್ರೇಷ್ಠ ಹಾಗೂ ಕಠಿಣವಾದದ್ದು ಎಂದು ಪರಿಗಣಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalpa News Advertising Disclaimer

Tags: GokarnaUttara Kannadaಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀರಾಮಚಂದ್ರಾಪುರ ಮಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಗಳೂರು | ಸೆ.18ರಂದು ಸಚಿವ ಸಂಪುಟ ಸಭೆ: ಗಣ್ಯರ ಸಂಚಾರ ಹಿನ್ನೆಲೆ ಟ್ರಾಫಿಕ್ ವ್ಯತ್ಯಯ ಸಾಧ್ಯತೆ

Next Post

ಸೈಲ್-ವಿಐಎಸ್‌ಪಿಯಲ್ಲಿ ಇಂಜಿನಿಯರ್ಸ್ ದಿನಾಚರಣೆ: ಸರ್ ಎಂ. ವಿಶ್ವೇಶ್ವರಯ್ಯರಿಗೆ ಗೌರವ ನಮನ

kalpa News

kalpa News

Next Post
Bhadravathi engineers day celebration in visl

ಸೈಲ್-ವಿಐಎಸ್‌ಪಿಯಲ್ಲಿ ಇಂಜಿನಿಯರ್ಸ್ ದಿನಾಚರಣೆ: ಸರ್ ಎಂ. ವಿಶ್ವೇಶ್ವರಯ್ಯರಿಗೆ ಗೌರವ ನಮನ

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL