ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪತ್ನಿ ಮೇಲೆ ಆಸಿಡ್ ಎರಚಿ (Acid Attack) ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ (Bengaluru) ಬೆಂಗಳೂರಿನ ಜೆಪಿ ನಗರದಲ್ಲಿರುವ ನಾರಾಯಣ ಕ್ಲಿನಿಕ್ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 26 ವರ್ಷದ ಮಧುಮಿತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಜೆಪಿ ನಗರದ ನಾರಾಯಣ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪತಿ ವೆಂಕಟೇಶ್ ಈ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ತಿಂಡಿ ತಿನ್ನಲು ಹೊರಬಂದಿದ್ದಾಗ ಹಿಂಬಾಲಿಸಿ ದಾಳಿ
ಮಾಹಿತಿ ಪ್ರಕಾರ, ಬೆಳಿಗ್ಗೆ 9.15 ರ ವೇಳೆಗೆ ಮಧುಮಿತ ಅವರು ತಿಂಡಿ ತಿನ್ನಲು ಕ್ಲಿನಿಕ್ನಿಂದ ಹೊರಗೆ ಬಂದಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಪತಿ ವೆಂಕಟೇಶ್, ಆತನಿಗೆ ಹಿಂಬಾಲಿಸಿಕೊಂಡು ಬಂದಿದ್ದಾನೆ.
ಮಧುಮಿತ ಅವರು ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದ ಬಳಿ ಕೂಗುತ್ತಾ ಓಡಿ ಬಂದಿದ್ದಾರೆ. ಈ ವೇಳೆ ವೆಂಕಟೇಶ್ ಮಚ್ಚಿನಿಂದ ಅವರ ಮೇಲೆ ಹಲ್ಲೆ ನಡೆಸಿ, ಬಳಿಕ ಆ್ಯಸಿಡ್ ಎರಚಿದ್ದಾನೆ.
ದಾಳಿಯಿಂದ ಮಧುಮಿತ ಅವರಿಗೆ ಗಂಭೀರ ಗಾಯಗಳಾಗಿದ್ದರೆ, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಾಳಿ ನಡೆಸಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ.
Also read>> A Century of RSS Through a Unique Exhibition
Bengaluru : ರಕ್ಷಣೆಗೆ ಧಾವಿಸಿದ ಸ್ಥಳೀಯರು
ಮಹಿಳೆಯ ಮೇಲೆ ದಾಳಿ ನಡೆದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅವರ ರಕ್ಷಣೆಗೆ ಮುಂದಾಗಿದ್ದಾರೆ. ಆರೋಪಿಯನ್ನು ತಡೆಯಲು ಕಲ್ಲುಗಳಿಂದ ಹೊಡೆದು ಪ್ರಯತ್ನಿಸಿದ್ದಾರೆ.
ಈ ವೇಳೆ ರಕ್ಷಣೆಗೆ ಬಂದ ಸ್ಥಳೀಯರ ಮೇಲೂ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ ಎಂದು ಸೂಚಿಸಿದ್ದಾರೆ.
ನಡೆದ ಸ್ಥಳದ ಸಮೀಪದ ಸಿಗ್ನಲ್‌ನಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರ ಗಮನಕ್ಕೂ ಬಂದಿದೆ. ಮಧ್ಯಪ್ರವೇಶಿಸಿದ ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿಚಾರಣೆ
ವೆಂಕಟೇಶ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಜೆಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ನಡೆಸಲು ಕಾರಣವೇನು, ದಂಪತಿಗಳ ನಡುವೆ ಯಾವುದೇ ವೈಮನಸ್ಸು ಅಥವಾ ಕೌಟುಂಬಿಕ ಕಲಹ ಇದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ನಡುವೆ, ಆಸಿಡ್ ದಾಳಿ ಹಾಗೂ ಮಚ್ಚಿನ ಹಲ್ಲೆಯಿಂದ ಗಂಭೀರವಾಗಿರುವ ಮಧುಮಿತಾ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಜೆಪಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







