ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಿಂದ (Shivamogga) ಶೃಂಗೇರಿ, ಮಂಗಳೂರು (Mangaluru) ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಮಂಜೂರಾತಿ ದೊರೆತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಅವರು ಇಂದು ಶಿವಮೊಗ್ಗ ಸಮೀಪದ ಹಾರನಹಳ್ಳಿ ಗ್ರಾಮದ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ವಿಸ್ತರಣೆ ಅಭಿವೃದ್ಧಿಪಡಿಸುವ 1.88ಕೋಟಿ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಶಿವಮೊಗ್ಗದಿಂದ ಹೊಸ ರೈಲು ಮಾರ್ಗಕ್ಕೆ ಮಂಜೂರಾತಿ ದೊರೆತಿದ್ದು, ಅಂತಿಮ ಸ್ಥಳ ಸಮೀಕ್ಷೆಗೆ ಭದ್ರಾವತಿ -ಚಿಕ್ಕಜಾಜೂರು, ಶಿವಮೊಗ್ಗದಿಂದ ಶೃಂಗೇರಿ-ಮAಗಳೂರು, ಶಿವಮೊಗ್ಗದಿಂದ ಬೀರೂರಿಗೆ ದ್ವಿಪಥ ಟ್ರ್ಯಾಕ್ ನಿರ್ಮಾಣ, ತಾಳಗುಪ್ಪ-ಸಿರ್ಸಿ-ಹುಬ್ಬಳ್ಳಿ, ತಾಳಗುಪ್ಪ-ಹೊನ್ನಾವರ ನೂತನ ರೈಲು ಮಾರ್ಗ ಅಭಿವೃದ್ಧಿಗೊಳಿಸಲಾಗುವುದು ಎಂದರು.
ಪ್ರಸ್ತುತ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಯನ್ನು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳುವುದರ ಜೊತೆಗೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಭಾಗದ ಜನರ ನಿರೀಕ್ಷೆಯಂತೆ ರೈಲ್ವೇ ಮೇಲ್ಸೇತುವೆ ಕಾಮಗಾರಿ, ವಿಠಗೊಂಡನಕೊಪ್ಪ ಹಾರನಹಳ್ಳಿ ರಸ್ತೆ ಸಂಪರ್ಕ ಕಲ್ಪಿಸಲು ಗಮನಹರಿಸಲಾಗುವುದು ಎಂದರು.
Also Read>> ಮದ್ಯಪಾನ ಮಾಡಿ ಕೋರ್ಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ರಂಪಾಟ: ವಕೀಲನಿಗೆ 1 ದಿನ ಜೈಲು
ಶಿವಮೊಗ್ಗ ತಾಲೂಕಿನ ಏತ ನೀರಾವರಿ ಯೋಜನೆಗಳಿಗೆ ರಾಜ್ಯದ ನೀರಾವರಿ ಸಚಿವರಿಗೆ 28 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದ್ದು, ಅನುದಾನ ಬಿಡುಗಡೆಗೊಳ್ಳುವ ಆಶಾಭಾವನೆ ಇದೆ. ಈ ಎಲ್ಲಾ ಯೋಜನೆಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಹಕಾರ ಸ್ಮರಿಸುವುದಾಗಿ ತಿಳಿಸಿದರು.
Shivamogga : ಸೊರಬ, ತೀರ್ಥಹಳ್ಳಿ ತಾಲೂಕಿಗೂ ರೈಲು ಸಂಪರ್ಕ
ಅಷ್ಟೇ ಅಲ್ಲದೇ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಗಮನಹರಿಸಲಾಗಿದ್ದು, ರಸ್ತೆ, ಸೇತುವೆ, ಮತ್ತಿತರ ಕಾಮಗಾರಿಗಳನ್ನು ಸಹಸ್ರಾರು ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರೈಲು ಸಂಪರ್ಕ ಇಲ್ಲದಿರುವ ಜಿಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೂ ರೈಲು ಸಂಪರ್ಕ ಕಲ್ಪಿಸಲು ಗಮನಹರಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಅತ್ಯಲ್ಪ ಅವಧಿಯಲ್ಲಿ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿದ್ದು, ಅನೇಕ ಹೊಸ ರೈಲು ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಇರುವ ಪ್ಲಾಟ್ ಫಾರ್ಮ್ 250 ಮೀ. ಅಗಲವಿದ್ದು, ಇದನ್ನು ಒಂದು ಮೀಟರ್ ಎತ್ತರಿಸುವ ಹಾಗೂ ಒಂದು ಮೀ. ಅಗಲ ವಿಸ್ತರಿಸಲು ಉದ್ದೇಶಿಸಲಾಗುವುದು. ಈ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದಲ್ಲಿ ಸಂಚರಿಸುವ ರೈಲುಗಳನ್ನು ನಿಲ್ಲಿಸಿ, ಸಂಚರಿಸಲು ಅವಕಾಶ ದೊರೆಯಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಜಿಲ್ಲೆಯಲ್ಲಿ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಗಳಾಗಿವೆ. ನೂತನ ರೈಲ್ವೆ ಸಂಪರ್ಕ ವ್ಯವಸ್ಥೆ ದೊರೆತು ಜನಸಾಮಾನ್ಯರು ರಾಜ್ಯದಾದ್ಯಂತ ಸಂಚರಿಸಲು ಅನುಕೂಲವಾಗಿದೆ. ಈ ಎಲ್ಲಾ ಕಾಮಗಾರಿಗಳ ಹಿಂದಿನ ಪ್ರೇರಕ ಶಕ್ತಿಯಾಗಿರುವ ಸಂಸದ ಬಿ.ವೈ.ರಾಘವೇಂದ್ರ ಅವರು ನುಡಿದಂತೆ ನಡೆದು ಮಾದರಿ ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ. ಅಶೋಕನಾಯ್ಕ, ಕೆ.ಜಿ. ಕುಮಾರಸ್ವಾಮಿ, ಜಗದೀಶ್, ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










