ಕಲ್ಪ ಮೀಡಿಯಾ ಹೌಸ್ | ವಾಷಿಂಗ್ಟನ್ |
ಮದುವೆಯಾದ ಕೇವಲ 17 ದಿನಗಳ ಬಳಿಕ ಹೈದರಾಬಾದ್ (Hyderabad) ಮೂಲದ 28 ವರ್ಷದ ಯುವಕನೊಬ್ಬ ಅಮೆರಿಕದಲ್ಲಿ (America) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮೊಹಮ್ಮದ್ ಜಾಬರ್ ಹುಸೇನ್ ಎಂದು ಗುರುತಿಸಲಾಗಿದೆ. ಅವರು ಮ್ಯಾಸಚೂಸೆಟ್ಸ್‌ನ ಲೋವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಜಾಬರ್ ಹುಸೇನ್ ಅಮೆರಿಕದಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಆಗಸ್ಟ್ 28ರಂದು ಟೆಕ್ಸಾಸ್‌ನಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ 17 ದಿನಗಳಲ್ಲೇ ಅವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.
Also read>> ಯುವತಿ ಅಪಹರಿಸಿ ಪರಾರಿ ಯತ್ನ | 35 ಕಾರು, 100ಕ್ಕೂ ಹೆಚ್ಚು ಬೈಕ್‌ಗಳಿಗೆ ಡಿಕ್ಕಿ
Hyderabad : ಮಲಗಿದ್ದ ಸ್ಥಿತಿಯಲ್ಲೇ ಮೃತ
ಮಾಹಿತಿಯ ಪ್ರಕಾರ, ಜಾಬರ್ ಅವರು ಸೆಪ್ಟೆಂಬರ್ 14ರಂದು ಕೊನೆಯ ಬಾರಿ ಕುಟುಂಬದ ಸದಸ್ಯರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಕುಟುಂಬದವರೊಂದಿಗೆ ಮಾತನಾಡಿದ ಸುಮಾರು ಎಂಟು ಗಂಟೆಗಳ ಬಳಿಕ, ಅವರ ರೂಮ್‌ಮೇಟ್ ಕುಟುಂಬಕ್ಕೆ ಕರೆ ಮಾಡಿ ಜಾಬರ್ ಅವರು ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಜಾಬರ್ ಅವರ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ಮುಂದುವರಿದಿದೆ.
ಮದುವೆಯಾದ ಕೆಲವೇ ದಿನಗಳಲ್ಲಿ ಯುವಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹೆಚ್ಚಿನ ತನಿಖೆಯ ಬಳಿಕವಷ್ಟೇ ಸಾವಿನ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







