ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
(Shivamogga) ನಮ್ಮ ಭಾರತೀಯ ಸನಾತನ ಪರಂಪರೆಯ ಪ್ರಾಚೀನ ಹಾಗೂ ಶ್ರೇಷ್ಠ ವೈದ್ಯ ಪದ್ಧತಿಯಾದ ಆಯುರ್ವೇದವು ಕೇವಲ ರೋಗ ನಿವಾರಣೆಗೆ ಮಾತ್ರ ಸೀಮಿತವಾಗಿರದೆ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಅದ್ಭುತ ಜ್ಞಾನಭಂಡಾರವಾಗಿದೆ. ನೈಸರ್ಗಿಕ ಜೀವನಶೈಲಿ ಮತ್ತು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಯುರ್ವೇದವನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದೆ, ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) (MLA Channabasappa) ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ (Ayurvedha Medical College) ಮತ್ತು ಬೋಧನಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಗಿದ್ದ ‘11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಕಾರ್ಯಕ್ರಮದಲ್ಲಿ ಗೌರವಪೂರ್ವಕವಾಗಿ ಪಾಲ್ಗೊಂಡು ಅವರು ಮಾತನಾಡಿದರು.
Shivamogga: ಆಯುರ್ವೇದ ವೈದ್ಯ ಸೇವೆ ಶ್ಲಾಘನೀಯ
ಆಧುನಿಕ ಯುಗದ ಒತ್ತಡದ ಬದುಕಿನಲ್ಲಿ ಯಾವುದೇ ಅಡ್ಡಪರಿಣಾಮಗಳಿಲ್ಲದ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಜಾಗೃತಿ ಮೂಡಬೇಕಿದೆ. ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ನಿಸ್ವಾರ್ಥವಾಗಿ ತೊಡಗಿಸಿಕೊಂಡಿರುವ ಆಯುರ್ವೇದ ವೈದ್ಯ ವೃಂದ ಹಾಗೂ ಸಂಸ್ಥೆಗಳ ಸೇವೆ ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
Also read>> ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ವರ್ಗಾವಣೆ | ರಿಷಿ ಆನಂದ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸಮಾರಂಭದಲ್ಲಿ ಸಂಸದ ಬಿ. ವೈ. ರಾಘವೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಆಯುರ್ವೇದ ವೈದ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









