ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ZP CEO) ಹೇಮಂತ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಿಷಿ ಆನಂದ್ ಅವರನ್ನು ನಿಯೋಜಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಹೇಮಂತ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ.
ವಿಜಯಪುರ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದ ರಿಷಿ ಆನಂದ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
Shivamogga : ಹೇಮಂತ್ ಸ್ಥಾನಕ್ಕೆ ರಿಷಿ ಆನಂದ್
ರಿಷಿ ಆನಂದ್ ಅವರು ಇನ್ನು ಮುಂದೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದ ಎನ್. ಹೇಮಂತ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಿಷಿ ಆನಂದ್ ಅವರನ್ನು ನೇಮಕ ಮಾಡಲಾಗಿದೆ.
Also Read>> ಅನಂತನಾಗ್’ಗೆ ಫಾಲ್ಕೆ ಪ್ರಶಸ್ತಿ ಪ್ರದಾನ | ಗೌರವ ಸ್ವೀಕರಿಸಿದ ಹಿರಿಯ ನಟ ಭಾವುಕ ಮಾತು
ಹೇಮಂತ್ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿಯ `ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ’ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಈ ವರ್ಗಾವಣೆಗಳ ಮೂಲಕ ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆಡಳಿತದ ಜೊತೆಗೆ HESCOMನ ಪ್ರಮುಖ ಆಡಳಿತಾತ್ಮಕ ಜವಾಬ್ದಾರಿಗಳಲ್ಲೂ ಬದಲಾವಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









