No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸೆ.29ರಂದು ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ | ಇಲ್ಲಿದೆ ಡೀಟೇಲ್ಸ್

kalpa News by kalpa News
September 23, 2026
in ಶಿವಮೊಗ್ಗ
0
shivamogga-traffic-route-diversion-on-sept-25
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Shivamogga) ನಗರದಲ್ಲಿ ಸೆಪ್ಟೆಂಬರ್ 25ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ವಿಧಿಸಿದೆ. ಇದರೊಂದಿಗೆ ವಿವಿಧ ದಿಕ್ಕುಗಳಿಂದ ಶಿವಮೊಗ್ಗ ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು (Traffic Divert) ನಿಗದಿಪಡಿಸಲಾಗಿದೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮೋಟಾರು ವಾಹನ ಕಾಯ್ದೆ-1988ರ ಕಲಂ 116 ಮತ್ತು 117ರ ಅನ್ವಯ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದು, ಸೆ.25ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಈ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಹಾಗೂ ಮಾರ್ಗ ಬದಲಾವಣೆಗಳು ಜಾರಿಯಲ್ಲಿರಲಿವೆ.dk shivakumar led karnataka government 100 days celebration

ಮೆರವಣಿಗೆ ಸಾಗುವ ಮಾರ್ಗ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಆರಂಭವಾಗಲಿದೆ. ಅಲ್ಲಿಂದ ಎನ್‌ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್. ಸರ್ಕಲ್, ಎ.ಎ. ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ ಹಾಗೂ ಕೋಟೆ ರಸ್ತೆ ಮೂಲಕ ಸಾಗಿ ಮತ್ತೆ ಭೀಮೇಶ್ವರ ದೇವಸ್ಥಾನದ ಸಮೀಪದ ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆ ನಡೆಯಲಿದೆ.

ಮೆರವಣಿಗೆ ಸಾಗುವ ಮಾರ್ಗ ಹಾಗೂ ಅದರ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.

ಯಾವ ವಾಹನಗಳಿಗೆ ಯಾವ ಮಾರ್ಗ?

ಬೆಂಗಳೂರು, ಭದ್ರಾವತಿ ಹಾಗೂ ಎನ್.ಆರ್.ಪುರ ಕಡೆಯಿಂದ ಬರುವ ವಾಹನಗಳು:
ಬೆಂಗಳೂರು, ಭದ್ರಾವತಿ ಮತ್ತು ಎನ್.ಆರ್.ಪುರ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಭಾರೀ ವಾಹನಗಳು, ಬಸ್‌ಗಳು, ಸಿಟಿ ಬಸ್‌ಗಳು ಹಾಗೂ ಕಾರುಗಳು ಎಂ.ಆರ್.ಎಸ್. ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.Christ King

Shivamogga : ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬರುವ ವಾಹನಗಳು:

ಚಿತ್ರದುರ್ಗ ಹಾಗೂ ಹೊಳೆಹೊನ್ನೂರು ಕಡೆಯಿಂದ ಬರುವ ಮತ್ತು ಆ ಮಾರ್ಗವಾಗಿ ತೆರಳುವ ಭಾರೀ ವಾಹನಗಳು ಹಾಗೂ ಬಸ್‌ಗಳು ಎಂ.ಆರ್.ಎಸ್. ಸರ್ಕಲ್ ಮೂಲಕ ಬೈಪಾಸ್ ರಸ್ತೆಯನ್ನು ಬಳಸಬೇಕು.

ಹೊನ್ನಾಳಿ, ಹರಿಹರ, ದಾವಣಗೆರೆ ಕಡೆಯಿಂದ ಬರುವ ವಾಹನಗಳು:
ಈ ಭಾಗಗಳಿಂದ ಬರುವ ಮತ್ತು ಹೋಗುವ ಭಾರೀ ವಾಹನಗಳು ಹಾಗೂ ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್ ಹಾಗೂ ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್ ಮೂಲಕ ಬೈಪಾಸ್ ರಸ್ತೆಗೆ ತೆರಳಬೇಕು.

Also read>> ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ

ಬಸ್‌ಗಳಿಗೆ ಪರ್ಯಾಯ ಮಾರ್ಗ

ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ ಮತ್ತು ದಾವಣಗೆರೆ ಕಡೆಗೆ ತೆರಳುವ ಎಲ್ಲಾ ಬಸ್‌ಗಳು ಹಾಗೂ ಭಾರೀ ಸರಕು ವಾಹನಗಳು ಸಾಗರ ರಸ್ತೆ, ಹೆಲಿಪ್ಯಾಡ್ ಸರ್ಕಲ್, ಆಲ್ಕೋಳ ಸರ್ಕಲ್, ಪೊಲೀಸ್ ಚೌಕಿ, ರಾಜ್‌ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಹಾಗೂ ಸವಳಂಗ ರಸ್ತೆ ಮೂಲಕ ಸಂಚರಿಸಬೇಕು.

ಇನ್ನು ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಂದ ಬೆಂಗಳೂರು ಹಾಗೂ ಭದ್ರಾವತಿ ಕಡೆಗೆ ತೆರಳುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮೂಲಕ ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಸಾಗಬೇಕು.

ಶಿಕಾರಿಪುರ, ಸೊರಬ ಹಾಗೂ ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ನಗರದಿಂದ ಹೊರಹೋಗುವ ಬಸ್‌ಗಳು ಹಾಗೂ ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ ಹಾಗೂ ಆಲ್ಕೋಳ ಸರ್ಕಲ್ ಮೂಲಕ ಸಾಗರ ರಸ್ತೆಯನ್ನು ಬಳಸಬೇಕು.PES Shivamogga

ಕೋಟೆ ರಸ್ತೆ, ಓಲ್ಡ್ ಬಾರ್‌ಲೈನ್ ರಸ್ತೆಯಲ್ಲಿ ಸಂಚಾರ ಬಂದ್

ಮೆರವಣಿಗೆಯ ಹಿನ್ನೆಲೆಯಲ್ಲಿ ಕೋಟೆ ರಸ್ತೆ ಹಾಗೂ ಓಲ್ಡ್ ಬಾರ್‌ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮೆರವಣಿಗೆ ಮುಗಿಯುವವರೆಗೆ ಈ ಪ್ರದೇಶಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಗೆ ಅವಕಾಶ ಇರುವುದಿಲ್ಲ.

ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ತಾತ್ಕಾಲಿಕ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ. ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ವಾಹನ ಸವಾರರು ಪೊಲೀಸ್ ಇಲಾಖೆ ಹಾಗೂ ಸಂಚಾರ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ತುರ್ತು ಸೇವಾ ವಾಹನಗಳಿಗೆ ವಿನಾಯಿತಿ

ಈ ಎಲ್ಲಾ ಸಂಚಾರ ನಿರ್ಬಂಧಗಳು ಮತ್ತು ಮಾರ್ಗ ಬದಲಾವಣೆಗಳಿಂದ ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್‌ಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳಿಗೆ ಅಗತ್ಯಕ್ಕೆ ಅನುಗುಣವಾಗಿ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: DC Prabhulinga KavalikattiHindu Mahasabha GanapathiShivamoggaTraffic route diversionಶಿವಮೊಗ್ಗ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ

Next Post

ಶಿವಮೊಗ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸಕಲ ಸಿದ್ಧತೆ : ಮಹತ್ವದ ಸಭೆ

kalpa News

kalpa News

Next Post
Shivamogga Hindu Mahaganapathi shobhoyatra meeting

ಶಿವಮೊಗ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸಕಲ ಸಿದ್ಧತೆ : ಮಹತ್ವದ ಸಭೆ

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL