No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Thursday, November 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಗಣಪತಿ ಮೆರವಣಿಗೆಗೆ ಕೇಸರಿ ರಂಗು : ಶಿವಾಜಿ–ಭವಾನಿ, ಆಂಜನೇಯ ಪ್ರತಿಕೃತಿಗಳ ವೈಭವ

kalpa News by kalpa News
September 23, 2026
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Shivamogga) ನಗರದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ (Ganapathi Procession) ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಿಶೇಷ ಅಲಂಕಾರ ಕೈಗೊಳ್ಳಲಾಗಿದ್ದು, ಪ್ರಮುಖ ವೃತ್ತಗಳು ಹಾಗೂ ಪ್ರವೇಶ ದ್ವಾರಗಳಲ್ಲಿ ನಿರ್ಮಿಸಲಾಗಿರುವ ವೈವಿಧ್ಯಮಯ ಪ್ರತಿಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳನ್ನು ಅಲಂಕರಿಸಲಾಗಿದ್ದು, ಧಾರ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಬಿಂಬಿಸುವ ಕಲಾಕೃತಿಗಳು ಮತ್ತು ಪ್ರತಿಕೃತಿಗಳನ್ನು ಅಳವಡಿಸಲಾಗಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ವಿಶೇಷ ಅಲಂಕಾರಗಳನ್ನು ವೀಕ್ಷಿಸುತ್ತಿದ್ದಾರೆ.dk shivakumar led karnataka government 100 days celebration

ಅಮೀರ್ ಅಹ್ಮದ್ ಸರ್ಕಲ್‌ನಲ್ಲಿ ಶಿವಾಜಿ–ಭವಾನಿ ಪ್ರತಿಕೃತಿ

ನಗರದ ಪ್ರಮುಖ ಅಮೀರ್ ಅಹ್ಮದ್ ಸರ್ಕಲ್‌ನಲ್ಲಿ ನಿರ್ಮಿಸಿರುವ ವಿಶೇಷ ಪ್ರತಿಕೃತಿ ಇದೀಗ ಸಾರ್ವಜನಿಕರ ಪ್ರಮುಖ ಆಕರ್ಷಣೆಯಾಗಿದೆ. ಇಲ್ಲಿ ಸಿಂಹರೂಢ ಭವಾನಿ ದೇವಿಯು ಛತ್ರಪತಿ ಶಿವಾಜಿ ಮಹಾರಾಜರಿಗೆ ಖಡ್ಗವನ್ನು ದಯಪಾಲಿಸುತ್ತಿರುವ ದೃಶ್ಯವನ್ನು ಬಿಂಬಿಸುವ ಬೃಹತ್ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ.

ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆಯನ್ನು ಬಿಂಬಿಸುವ ರೀತಿಯಲ್ಲಿ ಪ್ರತಿಕೃತಿಯನ್ನು ವಿನ್ಯಾಸಗೊಳಿಸಲಾಗಿದ್ದು, ರಾತ್ರಿ ವೇಳೆ ಬೆಳಕಿನ ಅಲಂಕಾರದಿಂದ ಮತ್ತಷ್ಟು ಆಕರ್ಷಕವಾಗಿ ಕಾಣುತ್ತಿದೆ. ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಕೆಲಕಾಲ ನಿಂತು ಪ್ರತಿಕೃತಿಯನ್ನು ವೀಕ್ಷಿಸುತ್ತಿರುವುದು ಕಂಡುಬರುತ್ತಿದೆ.

Also read>> ಗೃಹಲಕ್ಷ್ಮೀ ಫಲಾನುಭವಿಗಳಿಗೆ ಹೊಸ ರೂಲ್ಸ್? ಈ ಲಿಂಕ್ ಕಡ್ಡಾಯ? 17 ಪ್ರಶ್ನೆಗಳ ಪರಿಶೀಲನೆ ಶುರು

Shivamogga : ಗಾಂಧಿಬಜಾರ್ ಮುಖ್ಯದ್ವಾರದಲ್ಲಿ ಪಂಚಮುಖಿ ಆಂಜನೇಯ

ಇದೇ ವೇಳೆ ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಗಾಂಧಿಬಜಾರ್‌ನ ಮುಖ್ಯದ್ವಾರದಲ್ಲಿಯೂ ವಿಶೇಷ ಅಲಂಕಾರ ಮಾಡಲಾಗಿದೆ. ಇಲ್ಲಿ ಪಂಚಮುಖಿ ಆಂಜನೇಯನ ಪ್ರತಿಕೃತಿಯನ್ನು ಅಳವಡಿಸಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ.

ಪಂಚಮುಖಿ ಆಂಜನೇಯನ ಪ್ರತಿಕೃತಿಯೊಂದಿಗೆ ಸುತ್ತಮುತ್ತಲಿನ ಪ್ರದೇಶವನ್ನು ವಿವಿಧ ರೀತಿಯ ಅಲಂಕಾರಗಳಿಂದ ಸಿಂಗರಿಸಲಾಗಿದೆ. ಇದರಿಂದ ಗಾಂಧಿಬಜಾರ್ ಮುಖ್ಯದ್ವಾರವು ಹಬ್ಬದ ಸಂಭ್ರಮದ ವಾತಾವರಣ ಪಡೆದುಕೊಂಡಿದೆ.Christ King

ಒಡಿಶಾ ರಥದ ಮಾದರಿ ವಿಶೇಷ ಆಕರ್ಷಣೆ

ಗಾಂಧಿಬಜಾರ್ ಪ್ರದೇಶದಲ್ಲೇ ಒಡಿಶಾದ ಸಾಂಪ್ರದಾಯಿಕ ರಥದ ಮಾದರಿಯ ಪ್ರತಿಕೃತಿಯನ್ನೂ ನಿರ್ಮಿಸಲಾಗಿದೆ. ಕಲಾತ್ಮಕವಾಗಿ ರೂಪುಗೊಂಡಿರುವ ಈ ರಥದ ಮಾದರಿ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದ್ದು, ಅನೇಕರು ಮೊಬೈಲ್‌ಗಳಲ್ಲಿ ಚಿತ್ರಗಳನ್ನು ಸೆರೆಹಿಡಿಯುತ್ತಿರುವುದು ಕಂಡುಬರುತ್ತಿದೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಮಾಡಲಾಗಿರುವ ಈ ಅಲಂಕಾರಗಳು ಶಿವಮೊಗ್ಗದ ಉತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿವೆ. ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ನಗರಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಪ್ರತಿಕೃತಿಗಳು ಹಬ್ಬದ ವಾತಾವರಣದ ಜೊತೆಗೆ ದೃಶ್ಯ ವೈಭವದ ಅನುಭವವನ್ನೂ ನೀಡುತ್ತಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Ganesh processionHanuman decorationHindu Mahasabha GanapathiShivajiShivamoggaಶಿವಮೊಗ್ಗ
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಹೊಸ ರೂಲ್ಸ್? ಈ ಲಿಂಕ್ ಕಡ್ಡಾಯ? 17 ಪ್ರಶ್ನೆಗಳ ಪರಿಶೀಲನೆ ಶುರು

Next Post

G20 Summit 2026: ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ? ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

kalpa News

kalpa News

Next Post
g20-summit-2026-pm-modi-us-visit-trump-meeting-quad

G20 Summit 2026: ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ? ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL