No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಹಿಂದೆಂದೂ ಕಾಣದಂಥ ಸಿನಿಮಾ ಮೇಕಿಂಗ್ ಝೀ ಕನ್ನಡದಲ್ಲಿ | ಸೆ.28 ರಿಂದ ಜಗದ್ಧಾತ್ರಿ

kalpa News by kalpa News
September 27, 2026
in News, ಬೆಂಗಳೂರು ನಗರ, ಸಿನೆಮಾ
0
zee kannada jagaddhatri serial from september 28
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಭಿನ್ನ ಕಥಾಹಂದರಗಳ ಮೂಲಕ ಕಿರುತೆರೆ (Television) ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಜೀ ಕನ್ನಡ (Zee Kannada) ವಾಹಿನಿ ಇದೀಗ ಮತ್ತೊಂದು ಹೊಸ ಕಥೆಯೊಂದಿಗೆ ಸಜ್ಜಾಗಿದೆ. ಅಂಡರ್‌ಕವರ್ ಮಹಿಳಾ ಪೊಲೀಸ್ ಅಧಿಕಾರಿಯ ಕಥೆಯನ್ನು ಒಳಗೊಂಡಿರುವ ‘ಜಗದ್ಧಾತ್ರಿ’ ಧಾರಾವಾಹಿ (Serial) ಇದೇ ಸೆಪ್ಟೆಂಬರ್ 28ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಮನೆ ಮತ್ತು ಕರ್ತವ್ಯದ ನಡುವೆ ಸಮತೋಲನ ಕಾಯ್ದುಕೊಳ್ಳುವ ಮಹಿಳಾ ಪೊಲೀಸ್ ಅಧಿಕಾರಿಯ ಬದುಕಿನ ಸುತ್ತ ಕಥೆ ಹೆಣೆಯಲಾಗಿದೆ. ನಟಿ ಮೋಕ್ಷಿತಾ ಪೈ ಅವರು ಜಗದ್ಧಾತ್ರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕುಟುಂಬದ ಜವಾಬ್ದಾರಿಗಳೊಂದಿಗೆ ಹೊರಜಗತ್ತಿನಲ್ಲಿ ನಡೆಯುವ ಅಪರಾಧಗಳ ವಿರುದ್ಧ ಹೋರಾಡುವ ಪೊಲೀಸ್ ಅಧಿಕಾರಿಯಾಗಿ ಪಾತ್ರಕ್ಕೆ ಜೀವ ತುಂಬಿದ್ದಾರೆ.

ಅಪ್ಪಟ ದೇಶಭಕ್ತೆಯಾಗಿದ್ದ ತನ್ನ ತಾಯಿಯ ಮೇಲೆ ಹೊರಿಸಲಾಗಿರುವ ದೇಶದ್ರೋಹದ ಆರೋಪವನ್ನು ತೊಡೆದುಹಾಕಲು ಜಗದ್ಧಾತ್ರಿ ನಡೆಸುವ ಹೋರಾಟ ಕಥೆಯ ಪ್ರಮುಖ ಅಂಶವಾಗಿದೆ. ಮನೆಯವರ ಕಟು ಮಾತುಗಳು ಹಾಗೂ ಹಲವು ಸವಾಲುಗಳ ನಡುವೆಯೂ ತಾಯಿಗೆ ನ್ಯಾಯ ಒದಗಿಸಲು ಜಗದ್ಧಾತ್ರಿ ಮುಂದಾಗುತ್ತಾಳೆ. ಹೀಗಾಗಿ ಮನೆಯ ಬೆಳಕಾಗಿರುವ ಜಗದ್ಧಾತ್ರಿ, ದುಷ್ಟರ ವಿರುದ್ಧ ಹೋರಾಡುವ ಜ್ವಾಲೆಯ ರೂಪದಲ್ಲಿಯೂ ಕಾಣಿಸಿಕೊಳ್ಳಲಿದ್ದಾಳೆ.

dk shivakumar led karnataka government 100 days celebration

ಮೋಕ್ಷಿತಾ ಪೈ, ವಿಜಯ್ ಲಲಿತಾ ಸೂರ್ಯ ಜೋಡಿ

‘ಜಗದ್ಧಾತ್ರಿ’ ಧಾರಾವಾಹಿಯ ಮೂಲಕ ಮೋಕ್ಷಿತಾ ಪೈ, ವಿಜಯ್ ಲಲಿತಾ ಸೂರ್ಯ ಹಾಗೂ ಕವಿತಾ ಗೌಡ ಅವರು ಕಿರುತೆರೆಗೆ ಮರಳುತ್ತಿದ್ದಾರೆ. ಮೋಕ್ಷಿತಾ ಪೈ ಮತ್ತು ವಿಜಯ್ ಲಲಿತಾ ಸೂರ್ಯ ಇಬ್ಬರೂ ಐಪಿಎಸ್ ಅಧಿಕಾರಿಗಳ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇವರಿಬ್ಬರ ನಡುವಿನ ಪ್ರೀತಿ ಕಥೆಯೂ ಧಾರಾವಾಹಿಯ ಪ್ರಮುಖ ಅಂಶವಾಗಿರಲಿದೆ.

ಇತ್ತೀಚೆಗೆ ಮೋಕ್ಷಿತಾ ಪೈ ಹಾಗೂ ವಿಜಯ್ ಲಲಿತಾ ಸೂರ್ಯ ಹೆಜ್ಜೆ ಹಾಕಿರುವ ಡ್ಯುಯೆಟ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ‘ಜಗದ್ಧಾತ್ರಿ ಹುಕ್ ಸ್ಟೆಪ್’ ಹೆಸರಿನಲ್ಲಿ ಗಮನ ಸೆಳೆದಿದೆ.

ಈ ಕುರಿತು ಮಾತನಾಡಿರುವ ನಟ ವಿಜಯ್ ಲಲಿತಾ ಸೂರ್ಯ, “ಈ ರೀತಿಯ ಪಾತ್ರವನ್ನು ಬಹಳ ದಿನಗಳಿಂದ ಮಾಡಿರಲಿಲ್ಲ. ಮತ್ತೆ ಪ್ರೀತಿ-ಪ್ರೇಮದ ಸುತ್ತಮುತ್ತಲಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಖುಷಿಯಾಗಿದೆ” ಎಂದು ಹೇಳಿದ್ದಾರೆ.PES Shivamogga

ದೊಡ್ಡ ತಾರಾಗಣ

ಧಾರಾವಾಹಿಯಲ್ಲಿ ಪ್ರಮುಖ ಪಾತ್ರಗಳಲ್ಲಿ ಕವಿತಾ ಗೌಡ ಕಾಣಿಸಿಕೊಳ್ಳಲಿದ್ದು, ಇವರೊಂದಿಗೆ ಹಿರಿಯ ಹಾಗೂ ಕಿರಿಯ ಕಲಾವಿದರ ದೊಡ್ಡ ತಾರಾಗಣವೇ ಇರಲಿದೆ.

ಗಿರಿಜಾ ಲೋಕೇಶ್, ಅರುಣಾ ಬಾಲರಾಜ್, ಲಕ್ಷ್ಮೀ ಸಿದ್ದಯ್ಯ, ಮೈಕೋ ಮಂಜು, ವಚನ್ ಹೊಸಮಠ, ರವಿ ಭಟ್, ಸೋನಿಯಾ ಪೊನ್ನಮ್ಮ ಹಾಗೂ ಮಾನಸಿ ಸುಧೀರ್ ಸೇರಿದಂತೆ ಹಲವು ಕಲಾವಿದರು ‘ಜಗದ್ಧಾತ್ರಿ’ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಆ್ಯಕ್ಷನ್‌ ಜೊತೆಗೆ ಕೌಟುಂಬಿಕ ಕಥಾಹಂದರ

ಕೌಟುಂಬಿಕ ಕಥಾಹಂದರದೊಂದಿಗೆ ಭರ್ಜರಿ ಆ್ಯಕ್ಷನ್ ದೃಶ್ಯಗಳು ಹಾಗೂ ಮೋಕ್ಷಿತಾ ಪೈ ಮತ್ತು ವಿಜಯ್ ಲಲಿತಾ ಸೂರ್ಯ ನಡುವಿನ ಪ್ರೀತಿ-ಪ್ರೇಮದ ಅಂಶಗಳನ್ನು ಒಳಗೊಂಡಂತೆ ಧಾರಾವಾಹಿಯನ್ನು ರೂಪಿಸಲಾಗಿದೆ.

Also Read>> ‘ಕನ್ನಡದ ಶಿವಮಣಿ’ ಹಿರಿಯ ಡ್ರಮ್ಮರ್ ದೇವ ನಿಧನ

ಒಂದೆಡೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವ ಜಗದ್ಧಾತ್ರಿ, ಮತ್ತೊಂದೆಡೆ ಪೊಲೀಸ್ ಅಧಿಕಾರಿಯಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವ ಜಗದ್ಧಾತ್ರಿ—ಈ ಎರಡು ವಿಭಿನ್ನ ಆಯಾಮಗಳನ್ನು ಧಾರಾವಾಹಿಯಲ್ಲಿ ತೋರಿಸಲಾಗುತ್ತಿದೆ. ಹೊಸ ತಲೆಮಾರಿನ ಪ್ರೇಕ್ಷಕರಿಗೆ ಹೊಂದುವ ರೀತಿಯಲ್ಲಿ ವಿಭಿನ್ನ ಕಥಾಹಂದರದೊಂದಿಗೆ ಧಾರಾವಾಹಿಯನ್ನು ರೂಪಿಸಲಾಗಿದೆ.

ಮಹೇಶ್ ಸಾರಂಗ್ ನಿರ್ದೇಶನ

ಬೆಳ್ಳಿತೆರೆಯ ಸಿನಿಮಾಗಳನ್ನು ನಿರ್ದೇಶಿಸಿ ಗುರುತಿಸಿಕೊಂಡಿರುವ ಬರಹಗಾರ ಮಹೇಶ್‌ರಾವ್ ಹಾಗೂ ಪ್ರಕಾಶ್ ಅವರ ನಿರ್ಮಾಣದಲ್ಲಿ ‘ಜಗದ್ಧಾತ್ರಿ’ ಮೂಡಿಬರುತ್ತಿದೆ. ಮಹೇಶ್ ಸಾರಂಗ್ ಅವರು ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕೀರ್ತಿ ಅಕ್ಷಯ ನೆಟ್‌ವರ್ಕ್ ಬ್ಯಾನರ್ ಅಡಿಯಲ್ಲಿ ಧಾರಾವಾಹಿ ನಿರ್ಮಾಣವಾಗುತ್ತಿದೆ.

Zee Kannada: ಹೊಸ ಅನುಭವ ನೀಡುವ ವಿಶ್ವಾಸ: ದೀಪಕ್ ಶ್ರೀರಾಮುಲು

ಜೀ ಕನ್ನಡ ಬ್ಯುಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಮಾತನಾಡಿ, ಮಹಿಳೆಯರು ಇಂದಿನ ಕಾಲಘಟ್ಟದಲ್ಲಿ ವಿವಿಧ ರೀತಿಯ ಸವಾಲುಗಳ ನಡುವೆ ಬದುಕು ನಡೆಸುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಜಗದ್ಧಾತ್ರಿ ಕೂಡ ಕುಟುಂಬದ ಹಲವು ಸವಾಲುಗಳನ್ನು ಎದುರಿಸುತ್ತಾ ಸೂಪರ್ ಕಾಪ್ ಆಗಿ ಸಮಾಜವನ್ನು ಕಾಯುವ ಜವಾಬ್ದಾರಿ ನಿರ್ವಹಿಸುತ್ತಾಳೆ ಎಂದು ಹೇಳಿದರು.

ವಿಭಿನ್ನ ಕಥಾಹಂದರಗಳ ಮೂಲಕ ಕನ್ನಡಿಗರನ್ನು ತಲುಪುವುದು ಜೀ ಕನ್ನಡದ ಉದ್ದೇಶವಾಗಿದ್ದು, ‘ಜಗದ್ಧಾತ್ರಿ’ ಕೂಡ ಪ್ರೇಕ್ಷಕರಿಗೆ ಹೊಸ ಅನುಭವದೊಂದಿಗೆ ಮನರಂಜನೆ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ 28ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ‘ಜಗದ್ಧಾತ್ರಿ’ ಪ್ರಸಾರವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: BangaloreKannada SerialZee Kannadaಕನ್ನಡ ಧಾರಾವಾಹಿಜೀ ಕನ್ನಡ ವಾಹಿನಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಕನ್ನಡದ ಶಿವಮಣಿ’ ಹಿರಿಯ ಡ್ರಮ್ಮರ್ ದೇವ ನಿಧನ

Next Post

ಬಿಜೆಪಿ ಕಾರ್ಯಾಲಯದಲ್ಲಿ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಣೆ

kalpa News

kalpa News

Next Post
bjp deendayal upadhyaya birth anniversary

ಬಿಜೆಪಿ ಕಾರ್ಯಾಲಯದಲ್ಲಿ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಆಚರಣೆ

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL