ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನೋತ್ಸವದ ಅಂಗವಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ’ ಅಭಿಯಾನದ ಪ್ರಯುಕ್ತ ದೀನ್ ದಯಾಳ್ ಟ್ರಸ್ಟ್ ವತಿಯಿಂದ ಶಿವಮೊಗ್ಗ (Shivamogga) ನಗರದಲ್ಲಿ ‘ವಿಕಸಿತ ಭಾರತಕ್ಕಾಗಿ ಸೈಕಲ್ ಜಾಥಾ’ (Cycle Rally) ಆಯೋಜಿಸಲಾಗಿತ್ತು.
ಸ್ವಸ್ಥ ಸಮಾಜ, ಹಸಿರು ಭವಿಷ್ಯದ ಸಂದೇಶ
ಸ್ವಸ್ಥ ಸಮಾಜ ನಿರ್ಮಾಣ ಹಾಗೂ ಹಸಿರು ಭವಿಷ್ಯದ ಆಶಯದೊಂದಿಗೆ ನಡೆದ ಸೈಕಲ್ ಜಾಥಾದಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು. ಸೈಕಲ್ ಬಳಕೆಯ ಮೂಲಕ ಆರೋಗ್ಯಕರ ಜೀವನಶೈಲಿ, ಪರಿಸರ ಸಂರಕ್ಷಣೆ ಹಾಗೂ ಅಭಿವೃದ್ಧಿಯ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಮುಖಂಡರು, ಕಾರ್ಯಕರ್ತರು ಭಾಗಿ
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ನಗರಾಧ್ಯಕ್ಷ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಪ್ರಮುಖರಾದ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Also Read>> ವಿಶಾಖಪಟ್ಟಣಂ–ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ: ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್
Shivamogga: ಜಿಲ್ಲಾ ಹಾಗೂ ನಗರ ಪದಾಧಿಕಾರಿಗಳ ಉಪಸ್ಥಿತಿ
ಸೈಕಲ್ ಜಾಥಾದ ಪ್ರಮುಖರಾದ ಜಿಲ್ಲಾ ಮಾಧ್ಯಮದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್., ನಗರ ಮಾಧ್ಯಮದ ಶ್ರೀನಾಗ್, ನಗರ ಸೋಷಿಯಲ್ ಮೀಡಿಯಾದ ಮುರಳಿ ಸೇರಿದಂತೆ ಜಿಲ್ಲಾ ಹಾಗೂ ನಗರದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ದೇಶದ ಅಭಿವೃದ್ಧಿಯ ಸಂಕಲ್ಪದೊಂದಿಗೆ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜಾಗೃತಿಯ ಸಂದೇಶವನ್ನು ಸಾರುವಲ್ಲಿ ಸೈಕಲ್ ಜಾಥಾ ಗಮನ ಸೆಳೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












