No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಡಿಜಿಟಲೀಕರಣದಿಂದ ಪ್ರಾಚೀನ ಹಸ್ತಪ್ರತಿಗಳ ಜ್ಞಾನ ವಿಶ್ವಕ್ಕೆ ಪರಿಚಯ | ಇನ್ಫೋಸಿಸ್ ಹಿರಿಯ ಉಪಾಧ್ಯಕ್ಷ ಸತೀಶ

‘ಗ್ರಂಥ ಕಥಾ’ ಆ್ಯನಿಮೇಷನ್ ಕಿರು ಚಿತ್ರ ಬಿಡುಗಡೆ : ಇನ್ಫೋಸಿಸ್ ಫೌಂಡೇಷನ್ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆ ಸಹಯೋಗ

kalpa News by kalpa News
October 1, 2026
in ಮೈಸೂರು
0
Mysuru Ancient Manuscript Knowledge Needs Digitisation
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಾಚೀನ ಹಸ್ತಪ್ರತಿಗಳು (Ancient Manuscript) ಮತ್ತು ತಾಳೆಗರಿಗಳಲ್ಲಿ ಅಡಗಿರುವ ಅಪಾರ ಜ್ಞಾನ ಸಂಪತ್ತನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಇಂದಿನ ಅಗತ್ಯವಾಗಿದೆ. ಹೊಸ ಜ್ಞಾನದ ಅನ್ವೇಷಣೆಯ ಜತೆಗೆ ನಮ್ಮ ಪೂರ್ವಜರು ಉಳಿಸಿಹೋದ ಜ್ಞಾನ ಭಂಡಾರವನ್ನು ಸಂರಕ್ಷಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರಾಚೀನ ಹಸ್ತಪ್ರತಿಗಳ (Digitisation) ಡಿಜಿಟಲೀಕರಣ ಅತ್ಯಂತ ಮಹತ್ವದ್ದಾಗಿದೆ ಎಂದು ಇನ್ಫೋಸಿಸ್ ಹಿರಿಯ ಉಪಾಧ್ಯಕ್ಷ ಹಾಗೂ (Mysuru) ಮೈಸೂರು ಕ್ಯಾಂಪಸ್ ಮುಖ್ಯಸ್ಥ ಸತೀಶ ಬಿ. ನಂಜಪ್ಪ ಹೇಳಿದರು.

ಮೈಸೂರಿನ ಇನ್ಫೋಸಿಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಚ್ಯವಿದ್ಯಾ ಸಂಶೋಧನಾಲಯ (ಓಆರ್‌ಐ) ಸಿದ್ಧಪಡಿಸಿರುವ ‘ಗ್ರಂಥ ಕಥಾ’ ಆ್ಯನಿಮೇಷನ್ ಕಿರುಚಿತ್ರ ಹಾಗೂ ಡಾ. ಎಸ್.ಸಿ. ಶೋಭಾ ಸಂಪಾದಿಸಿರುವ ‘ವೀರಭದ್ರ ವಿಜಯ ಚಂಪೂ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪ್ರಾಚೀನ ಹಸ್ತಪ್ರತಿಗಳ ಮಹತ್ವವನ್ನು ಅರಿಯದಿದ್ದರೆ ನಮ್ಮ ಪೂರ್ವಜರು ಸಂಗ್ರಹಿಸಿಟ್ಟಿರುವ ಅಮೂಲ್ಯ ಜ್ಞಾನ ಸಂಪತ್ತು ನಮಗೆ ತಲುಪುವುದಿಲ್ಲ. ಸಂಸ್ಕೃತಿ ಮತ್ತು ತಂತ್ರಜ್ಞಾನದ ಸಮ್ಮಿಲನವು ಯುವಜನರಲ್ಲಿ ನಮ್ಮ ಪರಂಪರೆಯ ಬಗ್ಗೆ ಆಸಕ್ತಿ ಹಾಗೂ ಅರಿವು ಮೂಡಿಸಬೇಕು. ಈ ದಿಸೆಯಲ್ಲಿ ಮೈಸೂರಿನ ಪ್ರಾಚ್ಯವಿದ್ಯಾ ಸಂಶೋಧನಾಲಯ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಾಚೀನ ಜ್ಞಾನವನ್ನು ಸಂರಕ್ಷಿಸುವುದರ ಜತೆಗೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಪ್ರಯತ್ನಗಳು ಹೆಚ್ಚಾಗಬೇಕು. ಹಸ್ತಪ್ರತಿಗಳ ಡಿಜಿಟಲೀಕರಣವು ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಜ್ಞಾನಾಸಕ್ತರಿಗೆ ಅಪಾರ ಅನುಕೂಲ ಕಲ್ಪಿಸಲಿದೆ ಎಂದು ತಿಳಿಸಿದರು.

dk shivakumar led karnataka government 100 days celebration

ಹಸ್ತಪ್ರತಿಗಳ ಅರಿವು ಮೂಡಿಸುವ ದೇಶದ ಮೊದಲ ಪ್ರಯತ್ನ

ಕಾರ್ಯಕ್ರಮದಲ್ಲಿ ಮಾತನಾಡಿದ ಪುರಾತತ್ತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ಎ. ದೇವರಾಜು, ‘ಗ್ರಂಥ ಕಥಾ’ ಆ್ಯನಿಮೇಷನ್ ಕಿರುಚಿತ್ರವು ಪ್ರಾಚೀನ ಹಸ್ತಪ್ರತಿಗಳ ಮಹತ್ವವನ್ನು ಸರಳವಾಗಿ ಹಾಗೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ರೂಪುಗೊಂಡಿದೆ ಎಂದರು.

ಇಂದಿನ ಕಾಲಕ್ಕೆ ಅಗತ್ಯವಾದ ಆ್ಯನಿಮೇಷನ್ ತಂತ್ರಜ್ಞಾನವನ್ನು ಬಳಸಿಕೊಂಡು ನಿರ್ಮಿಸಿರುವ ಈ ಕಿರುಚಿತ್ರವು ಜಗತ್ತಿನ ಯಾವುದೇ ಭಾಗದ ಜನರು ಸುಲಭವಾಗಿ ಅರ್ಥಮಾಡಿಕೊಳ್ಳುವ ರೀತಿಯಲ್ಲಿ ಮೂಡಿಬಂದಿದೆ. ಭಾರತದಲ್ಲಿ ಹಸ್ತಪ್ರತಿಗಳ ಕುರಿತು ಅರಿವು ಮೂಡಿಸಲು ಆ್ಯನಿಮೇಷನ್ ರೂಪದಲ್ಲಿ ಇಂತಹ ಚಿತ್ರ ನಿರ್ಮಿಸಿರುವುದು ಪ್ರಥಮ ಪ್ರಯತ್ನವಾಗಿದ್ದು, ಈ ಮೂಲಕ ಓಆರ್‌ಐ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಹೇಳಿದರು.

Also Read>> ಎಂತಹ ಹೀರೋ! “ಹೆಸರು ನೆನಪಿಟ್ಟುಕೊಳ್ಳಿ: ಸ್ಮಿತ್ ಮಚ್ಚರ್” ಭಾರತೀಯ ಪೈಲಟ್‌ಗೆ ಇಸ್ರೇಲ್‌ನಲ್ಲಿ ಭಾರೀ ಪ್ರಶಂಸೆ

ಪ್ರಾಚೀನ ಸಾಹಿತ್ಯ, ಸಂಸ್ಕೃತಿ ಮತ್ತು ಜ್ಞಾನ ಪರಂಪರೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಸೃಜನಶೀಲ ಮಾಧ್ಯಮಗಳ ಬಳಕೆ ಅತ್ಯಂತ ಉಪಯುಕ್ತವಾಗಿದೆ. ದೃಶ್ಯ ಮಾಧ್ಯಮದ ಮೂಲಕ ಹಸ್ತಪ್ರತಿಗಳ ಮಹತ್ವವನ್ನು ತಿಳಿಸುವ ಈ ಪ್ರಯತ್ನವು ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Mysuru : ಇನ್ಫೋಸಿಸ್ ಫೌಂಡೇಷನ್, ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಗಳ ಸಹಕಾರ

ಓಆರ್‌ಐ ನಿರ್ದೇಶಕ ಡಾ. ಡಿ.ಪಿ. ಮಧುಸೂದನ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ‘ಗ್ರಂಥ ಕಥಾ’ ಆ್ಯನಿಮೇಷನ್ ಕಿರುಚಿತ್ರದ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಷನ್ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಗಳು ಮಹತ್ವದ ಸಹಕಾರ ನೀಡಿವೆ ಎಂದು ತಿಳಿಸಿದರು.Christ King

ದೇಶದಲ್ಲೇ ಮೊದಲ ಬಾರಿಗೆ ಹಸ್ತಪ್ರತಿಗಳ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ರೂಪಿಸಿರುವ ಈ ಕಿರುಚಿತ್ರದ ನಿರ್ಮಾಣದಲ್ಲಿ ಹಲವರ ಕೊಡುಗೆ ಮಹತ್ವದ್ದಾಗಿದೆ. ನಿರ್ದೇಶಕ ಅವನೀಶ ಪಾಠಕ್, ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಮುಖ್ಯಸ್ಥ ಸಂತೋಷ ಅನಂತಪುರ, ಡಿಸಿಎಚ್‌ಆರ್‌ನ ಕೆ. ರಾಘವೇಂದ್ರ ಹಾಗೂ ಟೆಕ್ನಾಲಜಿ ಲೀಡ್ ಕೀರ್ತಿರಾಜ್ ಅವರ ಸಹಕಾರವನ್ನು ಸ್ಮರಿಸಿದರು.

ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಪ್ರಾಚೀನ ಸಾಹಿತ್ಯದ ಪ್ರಸಾರಕ್ಕೆ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಈ ಯೋಜನೆಯು ಭವಿಷ್ಯದಲ್ಲಿ ಇಂತಹ ಮತ್ತಷ್ಟು ಪ್ರಯತ್ನಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ಪ್ರಾಚೀನ ಜ್ಞಾನ ಪರಂಪರೆಯ ಪರಿಚಯ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎನ್. ಲೋಕನಾಥ್ ಮಾತನಾಡಿ, ಮೈಸೂರಿನ ಪ್ರಾಚ್ಯವಿದ್ಯಾ ಸಂಶೋಧನಾಲಯವು ಅಪರೂಪದ ಹಸ್ತಪ್ರತಿಗಳು, ತಾಳೆಗರಿಗಳು ಹಾಗೂ ಅಮೂಲ್ಯ ಸಾಹಿತ್ಯ ಕೃತಿಗಳ ದೊಡ್ಡ ಸಂಗ್ರಹವನ್ನು ಹೊಂದಿದೆ. ಈ ಅಪರೂಪದ ಸಂಪತ್ತನ್ನು ಸಂರಕ್ಷಿಸುವುದರ ಜತೆಗೆ ಜಾಗತಿಕ ಮಟ್ಟದಲ್ಲಿ ಭಾರತದ ಪ್ರಾಚೀನ ಜ್ಞಾನ ಪರಂಪರೆಯ ಪರಿಚಯ ಮಾಡಿಕೊಡುವ ಕಾರ್ಯವನ್ನು ಸಂಸ್ಥೆ ಶ್ರದ್ಧೆಯಿಂದ ನಿರ್ವಹಿಸುತ್ತಿದೆ ಎಂದು ಹೇಳಿದರು.

ಹಸ್ತಪ್ರತಿಗಳಲ್ಲಿ ಅಡಕವಾಗಿರುವ ಜ್ಞಾನವನ್ನು ಕೇವಲ ಗ್ರಂಥಾಲಯಗಳು ಮತ್ತು ಸಂಶೋಧನಾ ವಲಯಗಳಿಗೆ ಸೀಮಿತಗೊಳಿಸದೆ, ಸಾಮಾನ್ಯ ಜನರಿಗೂ ತಲುಪಿಸುವುದು ಅಗತ್ಯ. ಈ ನಿಟ್ಟಿನಲ್ಲಿ ‘ಗ್ರಂಥ ಕಥಾ’ ಆ್ಯನಿಮೇಷನ್ ಕಿರುಚಿತ್ರ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.

ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲ ವಯೋಮಾನದ ನಾಗರಿಕರಿಗೂ ಆಪ್ತವಾಗುವಂತೆ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಹಸ್ತಪ್ರತಿಗಳ ಪರಿಚಯ, ಅವುಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯದ ಕುರಿತು ಜನರಲ್ಲಿ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಆವೃತ್ತಿಗಳು ಶೀಘ್ರದಲ್ಲೇ ಯೂಟ್ಯೂಬ್‌ನಲ್ಲಿ ಲಭ್ಯವಾಗಲಿದ್ದು, ವಿಶ್ವದಾದ್ಯಂತ ಇರುವ ಜನರು ಇದನ್ನು ವೀಕ್ಷಿಸಿ ಪ್ರಾಚೀನ ಜ್ಞಾನ ಪರಂಪರೆಯ ಬಗ್ಗೆ ತಿಳಿದುಕೊಳ್ಳಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

‘ವೀರಭದ್ರ ವಿಜಯ ಚಂಪೂ’ ಕೃತಿ ಬಿಡುಗಡೆ

ಕಾರ್ಯಕ್ರಮದಲ್ಲಿ ಡಾ. ಎಸ್.ಸಿ. ಶೋಭಾ ಸಂಪಾದಿಸಿರುವ ‘ವೀರಭದ್ರ ವಿಜಯ ಚಂಪೂ’ ಕೃತಿಯನ್ನೂ ಬಿಡುಗಡೆಗೊಳಿಸಲಾಯಿತು. ಪ್ರಾಚೀನ ಸಾಹಿತ್ಯ ಕೃತಿಗಳ ಸಂಪಾದನೆ, ಸಂಶೋಧನೆ ಹಾಗೂ ಪ್ರಕಟಣೆಯ ಮೂಲಕ ಪರಂಪರೆಯ ಸಾಹಿತ್ಯ ಸಂಪತ್ತನ್ನು ಇಂದಿನ ಓದುಗರಿಗೆ ತಲುಪಿಸುವ ಕಾರ್ಯದಲ್ಲಿ ಇಂತಹ ಕೃತಿಗಳು ಮಹತ್ವ ಪಡೆದಿವೆ.Kalahamsa Infotech private limited

ಹಸ್ತಪ್ರತಿಗಳಲ್ಲಿರುವ ಅಪರೂಪದ ಸಾಹಿತ್ಯ ಕೃತಿಗಳನ್ನು ಸಂಶೋಧಿಸಿ, ಅವುಗಳನ್ನು ಸಂಪಾದಿತ ರೂಪದಲ್ಲಿ ಪ್ರಕಟಿಸುವುದು ಕನ್ನಡ ಸಾಹಿತ್ಯ ಹಾಗೂ ಭಾರತೀಯ ಜ್ಞಾನ ಪರಂಪರೆಯ ಅಧ್ಯಯನಕ್ಕೆ ಸಹಕಾರಿಯಾಗಲಿದೆ.

‘ಗ್ರಂಥ ಕಥಾ’ ತಂಡಕ್ಕೆ ಗೌರವ

ಕಾರ್ಯಕ್ರಮದಲ್ಲಿ ‘ಗ್ರಂಥ ಕಥಾ’ ಆ್ಯನಿಮೇಷನ್ ಕಿರುಚಿತ್ರದ ನಿರ್ಮಾಣದಲ್ಲಿ ಪಾಲ್ಗೊಂಡ ಸಾಧಕರನ್ನು ಸನ್ಮಾನಿಸಲಾಯಿತು.

ಕಿರುಚಿತ್ರದ ನಿರ್ದೇಶಕ ಅವನೀಶ ಪಾಠಕ್, ನಿರ್ಮಾಣ ಸಹಾಯಕ ಡಿ.ವಿ. ಸಾಗರ್, ಚಿತ್ರಕಥೆ ರಚಿಸಿದ ಡಾ. ದಿದ್ದಿಗಿ ವಂಶಿಕೃಷ್ಣ ಮತ್ತು ಡಾ. ಕೃಷ್ಣ ನಾಗಸಂಪಿಗೆ, ಪರಿಕಲ್ಪನೆ ನೀಡಿದ ವಿದ್ವಾನ್ ವೆಂಕಟೇಶ ಕುಲಕರ್ಣಿ ಹಾಗೂ ಹಿನ್ನೆಲೆ ಧ್ವನಿ ನೀಡಿದ ಕಲಾವಿದರಾದ ಶ್ರೀನಿವಾಸ ಕಾರಂತ, ಪವನ್ ಆರ್. ರಾವ್, ಪ್ರಮೋದ ಹೆಬ್ಬಣಿ ಮತ್ತು ಬಾಲ ಪ್ರತಿಭೆ ಹರಿ ಪಿ. ರಾವ್ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಓಆರ್‌ಐ ಉಪನಿರ್ದೇಶಕಿ ಡಾ. ಪಾರ್ವತಿ, ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್. ನಾಗರಾಜ್, ಗ್ರಂಥ ಸಂಶೋಧಕಿ ಡಾ. ಎಸ್.ಸಿ. ಶೋಭಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ, ತಂತ್ರಜ್ಞಾನದ ಮೂಲಕ ಜ್ಞಾನ ಪ್ರಸಾರ ಹಾಗೂ ಯುವಜನರಲ್ಲಿ ಪರಂಪರೆಯ ಅರಿವು ಮೂಡಿಸುವ ಉದ್ದೇಶದೊಂದಿಗೆ ನಡೆದ ಈ ಕಾರ್ಯಕ್ರಮವು ಸಂಸ್ಕೃತಿ ಮತ್ತು ಆಧುನಿಕ ತಂತ್ರಜ್ಞಾನದ ನಡುವಿನ ಸೇತುವೆಯಾಗಿ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news PES Shivamogga

Kalpa News Advertising Disclaimer

Tags: Ancient ManuscriptDigitisationINFOSYSMysuruಇನ್ಫೋಸಿಸ್ಡಿಜಿಟಲೀಕರಣತಾಳೆಗರಿಪ್ರಾಚೀನ ಹಸ್ತಪ್ರತಿಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಂತಹ ಹೀರೋ! “ಹೆಸರು ನೆನಪಿಟ್ಟುಕೊಳ್ಳಿ: ಸ್ಮಿತ್ ಮಚ್ಚರ್” ಭಾರತೀಯ ಪೈಲಟ್‌ಗೆ ಇಸ್ರೇಲ್‌ನಲ್ಲಿ ಭಾರೀ ಪ್ರಶಂಸೆ

Next Post

ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆ ಶೌರ್ಯ ಸಕ್ರೆಬೈಲಿನಲ್ಲಿ ಸಾವು

kalpa News

kalpa News

Next Post
Shivamogga Elephant Surya Dies In Sakrebail Camp

ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆ ಶೌರ್ಯ ಸಕ್ರೆಬೈಲಿನಲ್ಲಿ ಸಾವು

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL