ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ (Shivamogga) ನಗರಾಭಿವೃದ್ಧಿ (Urban Development) ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕುವೆಂಪು ನಗರದ ನಿವಾಸಿ ಸಿ.ಜಿ. ಮಧುಸೂದನ್ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸರ್ಕಾರ ನಾಮನಿರ್ದೇಶನ ಮಾಡಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3(3) ಹಾಗೂ ಕಲಂ 3(4)ರಡಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಆದೇಶದ ಪ್ರಕಾರ, ಶಿವಮೊಗ್ಗ ನಿವಾಸಿ ಸಿ.ಜಿ. ಮಧುಸೂದನ್ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಿ.ಜಿ. ಮಧುಸೂದನ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ.ಕೆ. ಅವರು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ.
Shivamogga : ಆಡಳಿತಾತ್ಮಕ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಮಹತ್ವ
ಶಿವಮೊಗ್ಗ ಮತ್ತು ಭದ್ರಾವತಿ ನಗರಗಳ ವ್ಯಾಪ್ತಿಯ ನಗರಾಭಿವೃದ್ಧಿ ಯೋಜನೆಗಳು, ಭೂ ಬಳಕೆ, ನಗರ ವಿಸ್ತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಪ್ರಾಧಿಕಾರ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ನೇಮಕಾತಿ ಪ್ರಾಧಿಕಾರದ ಮುಂದಿನ ಆಡಳಿತಾತ್ಮಕ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಮಹತ್ವ ಪಡೆದಿದೆ.
Also Read>> ಹಿರಿಯ ನಾಗರಿಕರ ದಿನಾಚರಣೆ: ಸಮಯಕ್ಕೆ ಬಾರದ ಜನಪ್ರತಿನಿಧಿಗಳು, ಅಧಿಕಾರಿಗಳು; ರಘು ರಾಮಪ್ಪ ಆಕ್ಷೇಪ
ಸರ್ಕಾರದ ಆದೇಶದಲ್ಲಿ ಸಿ.ಜಿ. ಮಧುಸೂದನ್ ಅವರ ನೇಮಕಾತಿ “ಪ್ರಾಧಿಕಾರ ಮತ್ತು ನಯೋಸೆ” ವಿಭಾಗದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












