ಕಲ್ಪ ಮೀಡಿಯಾ ಹೌಸ್ | ರಿಪ್ಪನ್ಪೇಟೆ (ಶಿವಮೊಗ್ಗ) |
ಬೆಳಗಿನ ಜಾವ ಸುಮಾರು 4.30ರ ವೇಳೆಯಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ವಾಹನವೊಂದು ಗೋವುಗಳಿಗೆ (Cow) ಡಿಕ್ಕಿ ಹೊಡೆದ ಪರಿಣಾಮ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಗೋವುಗಳು ಗಾಯಗೊಂಡಿರುವ ಘಟನೆ ಗುರುವಾರ ರಿಪ್ಪನ್ಪೇಟೆ (Ripponpete) ಪೊಲೀಸ್ ಠಾಣೆ ಎದುರು ನಡೆದಿದೆ.
ಸ್ಥಳೀಯರ ಮಾಹಿತಿ ಪ್ರಕಾರ, ಅಪಘಾತಕ್ಕೆ ಕಾರಣವಾದ ವಾಹನವು ಕ್ಯಾಂಟರ್ ಆಗಿರಬಹುದು ಎಂದು ಶಂಕಿಸಲಾಗಿದ್ದು, ವಾಹನದ ನಿಖರ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಅಪಘಾತದ ಬಳಿಕ ವಾಹನ ಸ್ಥಳದಿಂದ ತೆರಳಿರುವ ಸಾಧ್ಯತೆ ಇದ್ದು, ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಗಾಯಗೊಂಡ ಗೋವುಗಳಿಗೆ ಪ್ರಥಮ ಚಿಕಿತ್ಸೆ
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡಿದ್ದ ಎರಡು ಗೋವುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ, ಅವುಗಳನ್ನು ಸಂತೈಸುವ ಕಾರ್ಯ ನಡೆಸಿದರು.
ಅಪಘಾತದಲ್ಲಿ ಮೃತಪಟ್ಟಿದ್ದ ಎರಡು ಗೋವುಗಳ ಅಂತ್ಯಸಂಸ್ಕಾರವನ್ನು ಸ್ಥಳೀಯರ ಸಹಕಾರದೊಂದಿಗೆ ನೆರವೇರಿಸಲಾಯಿತು.
Also Read>> 11 ದಿನ MEMU ರೈಲು ಸಂಚಾರದಲ್ಲಿ ಬದಲಾವಣೆ, 3 ರೈಲುಗಳು 45 ನಿಮಿಷ ನಿಯಂತ್ರಣ
Ripponpete: ಪೊಲೀಸರಿಂದ ಸ್ಥಳ ಪರಿಶೀಲನೆ
ಘಟನೆಗೆ ಸಂಬಂಧಿಸಿದಂತೆ ರಿಪ್ಪನ್ಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಮುಂದಾಗಿದ್ದಾರೆ. ಘಟನೆಯ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಮುಂಜಾನೆ ವೇಳೆ ವೇಗವಾಗಿ ಸಂಚರಿಸುವ ವಾಹನಗಳಿಂದ ಇಂತಹ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












