ಕಲ್ಪ ಮೀಡಿಯಾ ಹೌಸ್ | ಕಾರ್ಕಳ (ಉಡುಪಿ) |
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಎಂ.ಎನ್.ಡಿ.ಎಸ್.ಎಂ. ಪ್ರೌಢಶಾಲೆ, ಮುದ್ರಾಡಿ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ(Sports) ಕಾರ್ಕಳದ ಕ್ರೈಸ್ಟ್ಕಿಂಗ್ (Christking School) ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕ್ರೀಡಾಕೂಟದಲ್ಲಿ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗಳಿಸುವ ಮೂಲಕ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Christking School: ಗುಂಡೆಸೆತದಲ್ಲಿ ಅಂಕುಶ್ಗೆ ಚಿನ್ನದ ಪದಕ
ಹತ್ತನೇ ತರಗತಿಯ ವಿದ್ಯಾರ್ಥಿ ಅಂಕುಶ್ ಅವರು ಗುಂಡೆಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಉತ್ತಮ ಸಾಮರ್ಥ್ಯ ಪ್ರದರ್ಶಿಸಿದ ಅವರು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಚಕ್ರ ಎಸೆತದಲ್ಲಿ ಲಕ್ಷಣ್ಯಗೆ ಬೆಳ್ಳಿ
ಇದೇ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಲಕ್ಷಣ್ಯ ಅವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗಳಿಸಿದ್ದಾರೆ. ಈ ಸಾಧನೆಯೊಂದಿಗೆ ಅವರು ಕೂಡ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ.
Also Read>> ಶಟಲ್ ಬ್ಯಾಡ್ಮಿಂಟನ್ : ಕ್ರೈಸ್ಟ್ಕಿಂಗ್ ವಿದ್ಯಾರ್ಥಿಗಳ ಸಾಧನೆ: ಮೈಸೂರು ವಿಭಾಗ ಮಟ್ಟಕ್ಕೆ 3 ವಿದ್ಯಾರ್ಥಿಗಳು ಆಯ್ಕೆ
ಮುಂದಿನ ಹಂತದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅಂಕುಶ್ ಹಾಗೂ ಲಕ್ಷಣ್ಯ ಅವರು ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಸಾಧನೆ ಮಾಡುವ ನಿರೀಕ್ಷೆ ಮೂಡಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










