ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ.) ವತಿಯಿಂದ ವಿಶ್ವಕರ್ಮ (Vishwakarma) ಜಯಂತಿ ಹಾಗೂ ಗಾಂಧಿ ಜಯಂತಿ ಅಂಗವಾಗಿ ರಾಜ್ಯಮಟ್ಟದ ‘ವಿಶ್ವಕರ್ಮ ವೈಭವ ರತ್ನ’ ಹಾಗೂ ‘ಕರ್ನಾಟಕ ವೈಭವ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ (Bangaluru) ಆಯೋಜಿಸಲಾಗಿದೆ.
ಕನ್ನಡ ಭವನದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಈ ಸಮಾರಂಭದಲ್ಲಿ ಸಮಾಜ, ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ವೈದ್ಯಕೀಯ, ಕ್ರೀಡೆ, ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತದೆ.
ಶಿವರುದ್ರ ಸ್ವಾಮೀಜಿಯಿಂದ ಕಾರ್ಯಕ್ರಮಕ್ಕೆ ಚಾಲನೆ
ಬೇಲಿ ಮಠದ ಶಿವರುದ್ರ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಧಾರ್ಮಿಕ ಮುಖಂಡ ಡಾ. ಎಸ್. ವಾಸುದೇವ ಭಟ್ಟರ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ಸುಜ್ಞಾನಮೂರ್ತಿ, ಹೈಕೋರ್ಟ್ ವಕೀಲ ಅನಂತ್ ನಾಯ್ಕ್, ಹಿರಿಯ ಲೇಖಕಿ ಇಂದಿರಾ ಕೃಷ್ಣಪ್ಪ, ಸರ್ವೋದಯ ಮಂಡಲದ ಅಧ್ಯಕ್ಷ ಡಾ. ಯ. ಚಿ. ದೊಡ್ಡಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿದ್ದಾರೆ.
Vishwakarma: ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ
ಸಮಾಜ, ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ವೈದ್ಯಕೀಯ, ಕ್ರೀಡೆ ಮತ್ತು ಮಾಧ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ‘ವಿಶ್ವಕರ್ಮ ವೈಭವ ರತ್ನ’ ಹಾಗೂ ‘ಕರ್ನಾಟಕ ವೈಭವ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಮಾಜ ಸೇವಕರು, ಕಲಾವಿದರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಯುವ ಪ್ರತಿಭೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ವತಿಯಿಂದ ತಿಳಿಸಲಾಗಿದೆ.
ಯುವಜನರಲ್ಲಿ ಕಾಯಕ ಸಂಸ್ಕೃತಿಗೆ ಉತ್ತೇಜನ
ಸಮಾಜದಲ್ಲಿ ಪ್ರತಿಭೆ ಮತ್ತು ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಜೊತೆಗೆ ಯುವಜನರಲ್ಲಿ ಕಾಯಕ ಸಂಸ್ಕೃತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಬೆಳೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವ ಮೂಲಕ ಮತ್ತಷ್ಟು ಜನರನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಉದ್ದೇಶವನ್ನು ಸಂಘ ಹೊಂದಿದೆ ಎಂದು ಅಧ್ಯಕ್ಷೆ ನಿತ್ಯಾ ಎಂ. ಆಚಾರ್ ತಿಳಿಸಿದ್ದಾರೆ.
ಡಾ. ಗುಣವಂತ ಮಂಜು ನಿರೂಪಣೆ
ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮವನ್ನು ಡಾ. ಗುಣವಂತ ಮಂಜು ಅವರು ನಿರೂಪಿಸಲಿದ್ದಾರೆ. ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Also Read>> K-pop ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ಮೊದಲ ‘Weverse Con Festival’
ಕಾರ್ಯಕ್ರಮದ ವಿವರ
ಅಕ್ಟೋಬರ್ 10ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಪೂರ್ವಭಾವಿ ಪ್ರಚಾರ ನೀಡುವುದರೊಂದಿಗೆ, ಕಾರ್ಯಕ್ರಮದಂದು ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿ ಸಮಾರಂಭದ ವರದಿ ಪ್ರಸಾರಕ್ಕೆ ಸಹಕರಿಸುವಂತೆ ಮಾಧ್ಯಮ ಮಿತ್ರರಲ್ಲಿ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ವಿನಮ್ರ ಮನವಿ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








