ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಚಿಕ್ಕಮಗಳೂರು (Chikkamagaluru) ನಗರದ ಕೋಟೆ ಬಡಾವಣೆಯ ಚೆನ್ನಾಪುರ ರಸ್ತೆಯ ಮನೆಯೊಂದರ ಕಾಂಪೌಂಡ್ನಲ್ಲಿ ನಿಲ್ಲಿಸಲಾಗಿದ್ದ ಎರಡು ಎಲೆಕ್ಟ್ರಿಕ್ ಸ್ಕೂಟರ್ಗಳು (Electric Scooters) ತಡರಾತ್ರಿ ಏಕಾಏಕಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ವ್ಯಾಪಿಸಿ ಎರಡು ಸ್ಕೂಟರ್ಗಳು ಹೊತ್ತಿ ಉರಿದಿವೆ. ಬೆಳಗಾಗುವ ವೇಳೆಗೆ ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು.
ಭಾರೀ ಶಬ್ದದೊಂದಿಗೆ ಬೆಂಕಿ
ತಡರಾತ್ರಿ ಭಾರೀ ಶಬ್ದದೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಹೊತ್ತಿನಲ್ಲಿ ಸ್ಕೂಟರ್ಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ. ಬೆಂಕಿಯ ತೀವ್ರತೆಗೆ ಮನೆಯ ಗೋಡೆ ಹಾಗೂ ಕಾಂಪೌಂಡ್ಗೂ ಹಾನಿಯಾಗಿದೆ.
ಬೆಂಕಿಗಾಹುತಿಯಾದ ವಾಹನಗಳ ಪೈಕಿ ಚಂದ್ರಶೇಖರ್ ಎಂಬುವರು ಸುಮಾರು ಆರು ತಿಂಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಸೇರಿದೆ.
Also Read>> ಮಂಜುನಾಥನ ಸನ್ನಿಧಿಯಲ್ಲಿ ರುದ್ರ ಪಾರಾಯಣದ ನಾದದಿ ಕರಗಿದ ಚಿಂತೆಗಳು, ಬೆಸೆದ ಮನಸ್ಸುಗಳು!
Chikkamagaluru: ಬೆಂಕಿಗೆ ಕಾರಣವೇನು?
ಮನೆಯ ಕಾಂಪೌಂಡ್ನಲ್ಲಿ ನಿಲ್ಲಿಸಿದ್ದ ಸ್ಕೂಟರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಆದರೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ಸ್ಕೂಟರ್ಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಮನೆಯ ಗೋಡೆ ಮತ್ತು ಕಾಂಪೌಂಡ್ಗೂ ಹಾನಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












