ಕಲ್ಪ ಮೀಡಿಯಾ ಹೌಸ್ | ಸಾಗರ(ಶಿವಮೊಗ್ಗ) |
ಸಾಗರ (Sagara) ತಾಲ್ಲೂಕಿನ ಕಲಸಿ ಪೇಟೆಯಲ್ಲಿ ಹಾವು (Snake) ಕಡಿದು ಎರಡು ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಅನಿಲ್ ಹಾಗೂ ರೂಪ ದಂಪತಿಯ ಮಗ ಯುನೈ (2) ಮೃತಪಟ್ಟ ಮಗು.
ಮನೆಯಂಗಳದಲ್ಲಿ ಎಂದಿನಂತೆ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಹಾವಿನ ಕಡಿತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾದ ಪೋಷಕರು ಮತ್ತು ಸ್ಥಳೀಯರು ಮಗುವನ್ನು ರಕ್ಷಿಸಲು ಯತ್ನಿಸಿದರಾದರೂ, ಅಷ್ಟರಲ್ಲಿ ಮಗುವಿನ ಪ್ರಾಣಪಕ್ಷಿ ಹಾರಿಹೋಗಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ದುಃಖ ಮುಗಿಲು ಮುಟ್ಟಿದೆ.
Sagara : ಪೊದೆಗಳು ಬೆಳೆಯದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು
ಮನೆಯ ಸುತ್ತಮುತ್ತ ಪೊದೆಗಳು ಬೆಳೆಯದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಕ್ಕಳು ಆಟವಾಡುವ ಸ್ಥಳದ ಬಗ್ಗೆ ಪೋಷಕರು ವಿಶೇಷ ಗಮನ ಹರಿಸಬೇಕು. ಹಾವುಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಬೇಕು.
ಮಕ್ಕಳ ಸುರಕ್ಷತೆ ವಿಚಾರದಲ್ಲಿ ಪೋಷಕರು ನಿರ್ಲಕ್ಷ್ಯ ವಹಿಸದೆ, ಮಕ್ಕಳು ಆಟವಾಡುವಾಗ ಸದಾ ಗಮನಹರಿಸುವುದು ಅಗತ್ಯವಾಗಿದೆ.
ಈ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














