ಕಲ್ಪ ಮೀಡಿಯಾ ಹೌಸ್ | ಸಾಗರ |
ದಸರಾ (Dasara) ಹಬ್ಬದ ಸಂಭ್ರಮದಲ್ಲಿ ಹೊಸ ಕಾರು (Car) ಖರೀದಿಸಿ ಮನೆಗೆ ಕೊಂಡೊಯ್ಯುವ ವೇಳೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಜಿಲ್ಲೆಯ (Sagara) ಸಾಗರ ನಗರದಲ್ಲಿ ನಡೆದಿದೆ. ಇಲ್ಲಿನ ಮಾರುತಿ ಕಾರು ಶೋರೂಮ್ ಬಳಿ ಹೊಸ ಕಾರೊಂದು ಏಕಾಏಕಿ ರಸ್ತೆಗೆ ನುಗ್ಗಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೋರೂಮ್ನಿಂದ ಹೊರಬಂದ ಕಾರು ಬೈಕ್ಗೆ ಡಿಕ್ಕಿ
ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಸುವ ಉತ್ಸಾಹದಲ್ಲಿದ್ದ ಗ್ರಾಹಕರೊಬ್ಬರು ಶೋರೂಮ್ನಿಂದ ಕಾರನ್ನು ಹೊರತೆಗೆದಿದ್ದಾರೆ. ಈ ವೇಳೆ ಕಾರು ಅತಿವೇಗದಲ್ಲಿ ಏಕಾಏಕಿ ರಸ್ತೆಗೆ ನುಗ್ಗಿದ್ದು, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ನಲ್ಲಿದ್ದ ಸವಾರ ಹಾಗೂ ಹಿಂಬದಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ
ಸಾಗರ ನಗರದ ಮಾರುತಿ ಕಾರು ಶೋರೂಮ್ ಸಮೀಪ ನಡುರಸ್ತೆಯಲ್ಲಿ ಸಂಭವಿಸಿದ ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊಸ ಕಾರು ಡೆಲಿವರಿ ಪಡೆಯುವ ಸಂದರ್ಭದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
Also Read>> ಪ್ಯಾರಿಸ್ ಶೀಘ್ರದಲ್ಲೇ ಮುಸ್ಲಿಂ ನಗರವಾಗಲಿದೆ! ಡೊನಾಲ್ಡ್ ಟ್ರಂಪ್ ನೀಡಿದ ಎಚ್ಚರಿಕೆ, ಕಾರಣವೇನು?
ದಸರಾ ಹಬ್ಬದ ಸಂದರ್ಭದಲ್ಲಿ ವಾಹನಗಳ ಖರೀದಿ ಹಾಗೂ ಸಂಚಾರ ಹೆಚ್ಚಾಗಿರುವುದರಿಂದ ವಾಹನ ಚಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ ಎಂಬ ಮಾತುಗಳು ಕೇಳಿಬಂದಿವೆ.
Sagara : ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಗೆ ಸಂಬಂಧಿಸಿದಂತೆ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು, ಕಾರಿನ ವೇಗ ಹಾಗೂ ಚಾಲನೆಯಲ್ಲಿನ ಲೋಪವೇನಾದರೂ ಇತ್ತೇ ಎಂಬುದರ ಕುರಿತು ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












