ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮದುವೆಯಾಗಿ ಕೇವಲ ಐದು ದಿನಗಳಾಗಿದ್ದ ನವವಿವಾಹಿತ ಮೃತಪಟ್ಟಿರುವ ದಾರುಣ ಘಟನೆ ಶೃಂಗೇರಿ (Sringeri) ತಾಲೂಕಿನ ಮೆಣಸೆ ಬಳಿ ನಡೆದಿದೆ.
ಕುಂಚೇಬೈಲು ನಿವಾಸಿ ನಾಗರಾಜ್ (32) ಮೃತ ದುರ್ದೈವಿ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಮಧ್ಯೆಯೇ ಹೊತ್ತಿ ಉರಿದಿದ್ದು, ಸವಾರನಿಗೂ ಬೆಂಕಿ ತಗುಲಿ ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದಾರೆ.
Also Read>> ಬೆಂಗಳೂರು | ಮಧ್ವ ಜಯಂತಿಯಲ್ಲಿ ವಿವಿಧ ಕ್ಷೇತ್ರದ 8 ಸಾಧಕರಿಗೆ ಪ್ರಶಸ್ತಿ ಪ್ರದಾನ
Sringeri : ಕಂದಕಕ್ಕೆ ಇಳಿದ ಬಸ್
ಜಯಪುರದಿಂದ ಶೃಂಗೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಅಪಘಾತದ ಬಳಿಕ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ.
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











