ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ವತಿಯಿಂದ ಆಯೋಜಿಸಿದ್ದ ‘ಪಿಇಎಸ್ ಕಪ್-2026’ (PES Cup) ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ (DVS College) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಿಇಎಸ್ ವಿಜ್ಞಾನ ಪಿಯು ಕಾಲೇಜಿನ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ತಂಡಗಳು ಭಾಗವಹಿಸಿ ಕ್ರೀಡಾಸ್ಫೂರ್ತಿಯಿಂದ ಆಟವಾಡಿದವು.
Also Read>> ಜೆ.ಎನ್.ಎನ್.ಸಿ.ಇಯಲ್ಲಿ ‘ಮಂಥನ-2026’ ರಾಷ್ಟ್ರಮಟ್ಟದ ಹ್ಯಾಕಥಾನ್ಗೆ ಚಾಲನೆ
ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ಪಿಇಎಸ್ ವಿಜ್ಞಾನ ಪಿಯು ಕಾಲೇಜಿನ ತಂಡ ರನ್ನರ್ಅಪ್ ಸ್ಥಾನ ಪಡೆಯಿತು.
PES Cup: ಬಹುಮಾನ ವಿತರಣೆ
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಿಇಎಸ್ ಟ್ರಸ್ಟ್ನ ಕುಲಸಚಿವ ಡಾ. ನಾಗರಾಜ್ ಆರ್., ಪಿಇಎಸ್ಐಟಿಎಂ ಪ್ರಾಂಶುಪಾಲ ಡಾ. ಸ್ವಾಮಿ ಡಿ.ಆರ್. ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಂದೀಪ್ ಜಿ. ಭಾಗವಹಿಸಿದ್ದರು.
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ತಂಡದ ಮನೋಭಾವ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪಂದ್ಯಾವಳಿ ಆಯೋಜಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










